ಇಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಪರೀಕ್ಷೆ ಬರೆಯುತ್ತಿರುವ 5.9 ಲಕ್ಷ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಇಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಪರೀಕ್ಷೆ ಬರೆಯುತ್ತಿರುವ 5.9 ಲಕ್ಷ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ಲಾಕ್’ಡೌನ್ ನಿಂದ ಮುಂದುಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಭಾಷಾ ಪರೀಕ್ಷೆ ಗುರುವಾರ ರಾಜ್ಯದಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಉತ್ತಮ ರೀತಿ ಪರೀಕ್ಷೆ ಬರೆವ ಜೊತೆಗೆ ಆರೋಗ್ಯ ದೃಷ್ಟಿಯಿಂದ ಕೊರೋನಾ ನಿಯಂತ್ರಣ ಕ್ರಮ ತಪ್ಪದೆ ಪಾಲಿಸಿ.

ಆಂಗ್ಲಭಾಷಾ ಪರೀಕ್ಷೆಗೆ ಒಚ್ಚು 95,997 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ಉಚಿತ ಸಾರಿಗೆ ವ್ಯವಸ್ಥೆ ಮಾಡಿದೆ. ನಿಗದಿತ ಅವಧಿಗೂ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಬರಬೇಕು.

ಬರುವಾಗ ಹಾಲ್ ಟಿಕೆಟ್, ತಮ್ಮ ಗುರುತಿನ ಚೀಟಿ ಜೊತೆಗೆ ಮಾಸ್ಕ್, ಪ್ರತ್ಯೇಕ ವಾಟಲ್ ಬಾಟಲ್, ಅನಾರೋಗ್ಯವಿದ್ದವರು ಅಗತ್ಯ ಔಷಧಿಗಳನ್ನು ಮರೆಯದೆ ತರಬೇಕು. ಮೊಬೈಲ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣ ತರುವುದನ್ನು ನಿಷೇಧಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಳು