ಮಂಡ್ಯ ಜಿಲ್ಲೆಯಲ್ಲಿ ಮತ್ತೋರ್ವ ಪೇದೆಗೆ ಕೊರೊನಾ

ಮಂಡ್ಯ ಜಿಲ್ಲೆಯಲ್ಲಿ ಮತ್ತೋರ್ವ ಪೇದೆಗೆ ಕೊರೊನಾ

ಮಂಡ್ಯ: ಹೆಮ್ಮಾರಿ ಕೊರೊನಾ ವೈರಸ್ ಜಿಲ್ಲೆಯ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಸದ್ಯ ಜಿಲ್ಲೆಯ ಮತ್ತೋರ್ವ ಪೇದೆ ಕೋವಿಡ್-19 ವೈರಸ್ ತಗುಲಿರುವುದು ದೃಢಪಟ್ಟಿದೆ.

ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆಯ ಪೇದೆಯೊಬ್ಬರ ಕೋವಿಟ್-19 ಪರೀಕ್ಷೆಯ ರಿಪೋರ್ಟ್ ಪಾಸಿಟಿವ್ ಬಂದಿದೆ. ಪೇದೆ ಕೆಸ್ತೂರು ಠಾಣೆಯಲ್ಲಿ ಮದ್ದೂರು ಕೋರ್ಟಿಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸುತ್ತಿದ್ದರು. ಸದ್ಯ ಅವರಿಗೆ ಸೋಂಕು ದೃಢಪಟ್ಟಿರುವುದು ಜಿಲ್ಲೆಯ ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

ಪೇದೆ ಮದ್ದೂರಿನ ಮದ್ದೂರಮ್ಮನ ಬಡಾವಣೆಯಲ್ಲಿ ವಾಸವಾಗಿದ್ದು, ನಿತ್ಯವೂ ಮದ್ದೂರಮ್ಮನ ದೇವಾಲಯಕ್ಕೂ ಭೇಟಿ ನೀಡುತ್ತಿದ್ದರು. ಹೀಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಪೇದೆ ವಾಸಿಸುತ್ತಿದ್ದ ಮನೆ, ದೇವಾಲಯದ ಬಳಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಿದ್ದಾರೆ. ಇತ್ತ ಕೆಸ್ತೂರು ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಜಿಲ್ಲೆಯಲ್ಲಿ ಈವರೆಗೂ ಮೂರು ಮಂದಿ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಐದು ಠಾಣೆಗಳನ್ನು ಸೀಲ್‍ಡೌನ್ ಮಾಡಲಾಗಿದೆ.

ತಾಜಾ ಸುದ್ದಿಗಳು