ರಾಜ್ಯದಲ್ಲಿ ಇಂದು ಕೊರೋನಾಗೆ 72 ಬಲಿ, ಬೆಂಗಳೂರಿನಲ್ಲಿ 2036 ಸೇರಿ 5072 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಇಂದು ಕೊರೋನಾಗೆ 72 ಬಲಿ, ಬೆಂಗಳೂರಿನಲ್ಲಿ 2036 ಸೇರಿ 5072 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ‌ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90 ಸಾವಿರ ತಲುಪಿದೆ. ಇಂದು ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೇರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2403 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 33750ಕ್ಕೇರಿದಂತಾಗಿದೆ. ಒಟ್ಟು 1804 ಮಂದಿ ಸಾವನ್ನಪ್ಪಿದ್ದು, 55388 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2036 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43503ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 30 ಮಂದಿ ಬಲಿಯಾಗಿದ್ದಾರೆ

ತಾಜಾ ಸುದ್ದಿಗಳು