ಜಿಂಕೆ ಬೇಟೆಯಾಡಿದ್ದ ಮೂವರು ಅಂದರ್

ಜಿಂಕೆ ಬೇಟೆಯಾಡಿದ್ದ ಮೂವರು ಅಂದರ್

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಆಕ್ರಮವಾಗಿ ಪ್ರವೇಶಿಸಿ ಜಿಂಕೆಯನ್ನು ಬೇಟೆಯಾಡಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಪಂ ವ್ಯಾಪ್ತಿಯ ಡಿಎಲ್‍ಪಿಎಸ್ ಪ್ರಾಜೆಕ್ಟ್ ಗ್ರಾಮದ ಕೃಷ್ಣ, ಶ್ರೀನಿವಾಸ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು.

ಘಟನೆ ವಿವರ: ಕೌದಳ್ಳಿ ವಲಯದ ಅರಬಗೆರೆ ಅರಣ್ಯ ಪ್ರದೇಶಕ್ಕೆ ಆಕ್ರಮವಾಗಿ ಪ್ರವೇಶ ಮಾಡಿ ಜಿಂಕೆಯನ್ನು ಬೇಟೆಯಾಡಿರುವ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ವಿನಯ್, ಕಾವೇರಿ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಡಾ.ರಮೇಶ್‍ಕುಮಾರ್ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತಾಜಾ ಸುದ್ದಿಗಳು