ಮಂಡ್ಯದಲ್ಲಿ ಮಗನಿಂದ್ಲೇ ತಾಯಿಯ ಕೊಲೆ – ಮೊಬೈಲ್ ಬಳಸಬೇಡ ಅಂದಿದ್ದೇ ತಪ್ಪಾಯ್ತು

ಮಂಡ್ಯದಲ್ಲಿ ಮಗನಿಂದ್ಲೇ ತಾಯಿಯ ಕೊಲೆ – ಮೊಬೈಲ್ ಬಳಸಬೇಡ ಅಂದಿದ್ದೇ ತಪ್ಪಾಯ್ತು

– ತಾಯಿ ಮೃತದೇಹ ತಬ್ಬಿಕೊಂಡು ಗೋಳಾಡಿ ನಾಟಕ ಮಾಡಿದ್ದ ಆರೋಪಿ
ಮಂಡ್ಯ:
ಜಿಲ್ಲೆಯ ಮನೆಯೊಂದರಲ್ಲಿ ಹಾಡುಹಗಲೇ ಮಹಿಳೆ ಬರ್ಬರ ಹತ್ಯೆಯಾಗಿತ್ತು. ಇದೀಗ ಪೊಲೀಸರು ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಮಗನೇ ತಾಯಿಯನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಮೂರು ದಿನದ ಹಿಂದಷ್ಟೇ ಮಂಡ್ಯದ ವಿದ್ಯಾನಗರದ ಮನೆಯೊಂದರಲ್ಲಿ ಹಾಡಹಗಲೇ ಮಹಿಳೆಯ ಭೀಕರ ಹತ್ಯೆ ನಡೆದಿತ್ತು. ಈ ಘಟನೆಯಿಂದ ಅಕ್ಕಪಕ್ಕದ ನಿವಾಸಿಗಳನ್ನು ಬೆಚ್ಚಿಬಿದ್ದಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪಶ್ಚಿಮ ಠಾಣೆ ಪೊಲೀಸರು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿರೋದು ಬಹಿರಂಗವಾಗಿದೆ.

ಮಾಜಿ ಸಂಸದೆ, ನಟಿ ರಮ್ಯಾ ಈ ಹಿಂದೆ ಬಾಡಿಗೆ ಪಡೆದಿದ್ದ ಮನೆಯ ಪಕ್ಕದ ಔಟ್‍ಹೌಸ್‍ನಲ್ಲಿ 45 ವರ್ಷದ ಶ್ರೀಲಕ್ಷ್ಮೀ ಅಲಿಯಾಸ್ ಲಲಿತಾಂಬ ತಮ್ಮ ಇಬ್ಬರು ಮಕ್ಕಳು ಹಾಗೂ ಪತಿಯೊಂದಿಗೆ ಎರಡು ವರ್ಷಗಳಿಂದ ವಾಸವಿದ್ದರು. ಜುಲೈ 29 ರಂದು ಚಾಕುವಿನಿಂದ ಹಲವು ಬಾರಿ ಇರಿದು ಆಕೆಯ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಬಂಧಿಸಿದಂತೆ ಆಕೆಯ ಹಿರಿಯ ಮಗ ಮನುಶರ್ಮನನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಳು