ಸೆ.7ರಿಂದ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಸೇವೆಗಳು ಆರಂಭ

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ದೇವಿ ದೇವಸ್ಥಾನ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಸರ್ವ ಸೇವೆಗಳು ಸೋಮವಾರದಿಂದ ಆರಂಭವಾಗಲಿದೆ. ಮುಜರಾಯಿ ಇಲಾಖೆಯ ಕಮಿಷನರ್ ಮೂಕಾಂಬಿಕ ದೇವಸ್ಥಾನಕ್ಕೆ ಆದೇಶ ಹೊರಡಿಸಿದ್ದಾರೆ.

ಸೋಮವಾರದಿಂದ ಎಲ್ಲಾ ಸೇವೆಗಳನ್ನು ಆರಂಭಿಸಲು ದೇಗುಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯ ಬೈಂದೂರು ತಾಲೂಕಿನ ಮೂಕಾಂಬಿಕೆ ಸನ್ನಿಧಿ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವರಮಾನ ಇರುವ ದೇವಸ್ಥಾನ. ಲಾಕ್‍ಡೌನ್ ಆಗಿರೋದರಿಂದ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ಭಕ್ತರಿಗೆ ಲಭ್ಯವಿರಲಿಲ್ಲ. ಹೀಗಾಗಿ ಕಳೆದ 5 ತಿಂಗಳಿಂದ ಕಾತುರರಾಗಿದ್ದ ಮೂಕಾಂಬಿಕಾ ಭಕ್ತರಿಗೆ ಈ ಆದೇಶ ಹರ್ಷ ತಂದಿದೆ.

ಮೂಕಾಂಬಿಕಾ ಸನ್ನಿಧಾನದಲ್ಲಿ ಕುಂಕುಮಾರ್ಚನೆ, ಲಡ್ಡು ಪ್ರಸಾದ ತುಲಾಭಾರ ಸೇವೆಗಳು ಆರಂಭವಾಗಲಿದೆ. ಕೋವಿಡ್ 19 ನಿಯಮ ಪ್ರಕಾರ ಚಂಡಿಕಾಹೋಮ, ಬೆಳ್ಳಿ ರಥ, ಬಂಗಾರದ ರಥ ಸೇವೆ ನಡೆಸುವುದು ದೇವಸ್ಥಾನಕ್ಕೆ ಸವಾಲಾಗಿದೆ. ಈ ಸೇವೆಗಳಲ್ಲಿ ಎಷ್ಟು ಜನರಿಗೆ ಅವಕಾಶ ಕೊಡಬೇಕು ಎಂಬ ಬಗ್ಗೆ ದೇವಸ್ಥಾನಕ್ಕೆ ಸಾಕಷ್ಟು ಗೊಂದಲ ಇದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅರ್ಚಕರು ಜಿಲ್ಲಾಡಳಿತ ಚರ್ಚೆ ನಡೆಸಿ ನಿಯಮಗಳನ್ನು ರೂಪಿಸಲಿದ್ದಾರೆ.

ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಮಧ್ಯಾಹ್ನ ಬರುವ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಇದೆ. ರಾತ್ರಿ ಊಟದ ವ್ಯವಸ್ಥೆ ಸದ್ಯಕ್ಕೆ ಇಲ್ಲ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ಅರವಿಂದ ಸುತಗುಂಡಿ ಮಾಹಿತಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಎಲ್ಲಾ ಸೇವೆಗಳು ಆರಂಭವಾದರೂ ಕೇರಳ, ತಮಿಳುನಾಡು ಭಕ್ತರು ಸದ್ಯಕ್ಕೆ ಬರುವ ಲಕ್ಷಣ ಕಾಣಿಸುತ್ತಿಲ್ಲ.

ತಾಜಾ ಸುದ್ದಿಗಳು