ಏಕಾಏಕಿ ದಾಳಿ ಮಾಡಿದ್ದೀರಿ, ನಾನು ಬರೋದಿಲ್ಲ – ಸಿಸಿಬಿ ಮುಂದೆ ಸಂಜನಾ ರಂಪಾಟ

ಏಕಾಏಕಿ ದಾಳಿ ಮಾಡಿದ್ದೀರಿ, ನಾನು ಬರೋದಿಲ್ಲ – ಸಿಸಿಬಿ ಮುಂದೆ ಸಂಜನಾ ರಂಪಾಟ

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಆದರೆ ಈ ವೇಳೆ ನಟಿ ಸಂಜನಾ ರಂಪಾಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಸಿಬಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯುತ್ತಿದ್ದಂತೆ ನಟಿ ಸಂಜನಾ ರಂಪಾಟ ಮಾಡಿದ್ದಾರೆ. ರೆಡಿ ಆಗಿ ಮೇಡಂ ಸಿಸಿಬಿ ಕಚೇರಿಗೆ ಹೋಗಬೇಕು ಎಂದು ಪೊಲೀಸರು ಹೇಳಿದ್ದಾರೆ. ಆಗ ಸಂಜನಾ, ನಾನ್ಯಾಕೆ ಬರಲಿ, ನೀವು ನನಗೆ ನೋಟಿಸ್ ಕೊಟ್ಟಿಲ್ಲ. ಏಕಾಏಕಿ ದಾಳಿ ಮಾಡಿದ್ದೀರಿ? ನಾನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ಸಿಸಿಬಿ ಮುಂದೆ ರಂಪಾಟ ಮಾಡಿದ್ದಾರೆ.

ರಂಪಾಟ ಜಾಸ್ತಿಯಾಗುತ್ತಿದ್ದಂತೆ ಸಿಸಿಬಿ ಅಧಿಕಾರಿಗಳು ಗದರಿಸಿದ್ದಾರೆ. ನೀವು ನಮ್ಮ ವಶದಲ್ಲಿ ಇದ್ದೀರಿ. ಹೀಗಾಗಿ ನಾವು ನೀವು ಹೇಳಿದಂತೆ ಕೇಳುವುದಕ್ಕೆ ಆಗುವುದಿಲ್ಲ. ನಾವು ಹೇಳಿದ್ದನ್ನ ನೀವು ಕೇಳಿ, ಸರ್ಚ್ ವಾರೆಂಟ್ ಸಂದರ್ಭದಲ್ಲಿ ವಿರೋಧ ಮಾಡಿದರೆ ನಿಮಗೆ ಕಷ್ಟವಾಗುತ್ತದೆ ಎಂದು ಸಿಸಿಬಿ ಅಧಿಕಾರಿಗಳು ಏರು ಮಾತಿನಲ್ಲಿ ಹೇಳಿದ ಬಳಿಕ ಸಂಜನಾ ತಣ್ಣಗೆ ಆಗಿದ್ದಾರೆ.

ತಾಜಾ ಸುದ್ದಿಗಳು