ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಸಹಾಯಕ ಗ್ರಂಥಪಾಲಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 27/10/2020 ಸಂಜೆ 5.30 ಕೊನೆಯ ದಿನವಾಗಿದೆ.

2020-21ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷದ ಅವಧಿಗೆ ಸಹಾಯಕ ಗ್ರಂಥ ಪಾಲಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿ ತಾತ್ಕಾಲಿಕವಾಗಿದ್ದು, ಯಾವುದೇ ಕಾರಣಗಳನ್ನು ನೀಡದೆ ರದ್ದುಗೊಳಿಸಬಹುದಾಗಿದೆ.

ಒಟ್ಟು ಏಳು ಹುದ್ದೆಗಳಿವೆ (ಮಹಿಳೆ 2, ಕನ್ನಡ ಮಾಧ್ಯಮ 1, ಹೈ-ಕರ್ನಾಟಕ 1). ಅರ್ಜಿ ಸಲ್ಲಿಸುವ ಮಾಹಿತಿ ವಿಜ್ಞಾನ ಸ್ನಾತಕೋತ್ತರ ಪದವೀಧರರಿಗೆ 32,000 ಮತ್ತು ಪಿಹೆಚ್‌ಡಿ ಅಭ್ಯರ್ಥಿಗಳಿಗೆ 36,000 ರೂ. ವೇತನ ನಿಗದಿ ಮಾಡಲಾಗಿದೆ.

ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ವಿದ್ಯಾಭ್ಯಾಸದ ದಾಖಲಾತಿಗಳ ಜೊತೆ ಸ್ವ ವಿವರ ದೃಢೀಕರಿಸಿ ಸಲ್ಲಿಸಬೇಕು. ನೇಮಕಾತಿ ಸಂದರ್ಶನದ ಸಮಯದಲ್ಲಿ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ರಾಮನಗರದಲ್ಲಿರುವ ಸ್ನಾತಕೋತ್ತರ ಕೇಂದ್ರ ಮತ್ತು ಜ್ಞಾನ ಭಾರತಿ ಗ್ರಂಥಾಲಯಗಳಲ್ಲಿ ಸೂಚಿಸಿರುವ ಸ್ಥಳಗಳಲ್ಲಿ ಕೆಲಸ ನಿರ್ವಹಣೆ ಮಾಡಬೇಕಿದೆ. ಅರ್ಜಿ ಸಲ್ಲಿಸಲು ವಿಳಾಸ: ವಿಶ್ವವಿದ್ಯಾಲಯದ ಗ್ರಂಥಪಾಲಕರು, ಬೆಂಗಳೂರು ವಿಶ್ವವಿದ್ಯಾಲಯ ಗ್ರಂಥಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನ ಭಾರತಿ, ಬೆಂಗಳೂರು 560056.

ತಾಜಾ ಸುದ್ದಿಗಳು