ಅಕ್ರಮ ಗೋ ಸಾಗಾಟಗಾರರ ಮೇಲೆ ಗುಂಡು ಹಾರಿಸಿದ ಪೊಲೀಸರು

ಅಕ್ರಮ ಗೋ ಸಾಗಾಟಗಾರರ ಮೇಲೆ ಗುಂಡು ಹಾರಿಸಿದ ಪೊಲೀಸರು

ಮಂಗಳೂರು: ಬೆಳ್ಳಂಬೆಳ್ಳಗೆ ಗಾಳಿಯಲ್ಲಿ ಗುಂಡು ಹಾರಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಗೋವುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಶಿರ್ತಾಡಿಯ ಔದಲ್ ಬಳಿ ನಡೆದಿದೆ.

ಗೋವುಗಳನ್ನು ಸಾಗಿಸಲಾಗುತ್ತಿದ್ದ ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದ್ದಾರೆ.ಆದರೆ, ಆರೋಪಿಗಳು ಪೊಲೀಸರ ಮಾತಿಗೆ ಮನ್ನಣೆ ನೀಡದೇ, ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾರೆ. ತಕ್ಷಣ ಅವರನ್ನು ಬೆನ್ನಟ್ಟಿದ ಪೊಲೀಸ್ ಇನ್ಸ್ಪೆಕ್ಟರ್ ಬಿ ಎಸ್ ದಿನೇಶ್ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ‌.

ಗುಂಡಿನ ಸದ್ದು ಕೇಳಿಬರುತ್ತಿದ್ದಂತೆ ಕಾರು ಮತ್ತು ಗೋವುಗಳನ್ನು ಬಿಟ್ಟು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ‌.ಸದ್ಯ ಪೊಲೀಸರು ಕಾರು, ಆರು ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳು