ರಾಜ್ಯದಲ್ಲಿಂದು ಕೊರೋನಾಗೆ 71 ಬಲಿ, ಬೆಂಗಳೂರಿನಲ್ಲಿ 3,371 ಸೇರಿ 7,184 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿಂದು ಕೊರೋನಾಗೆ 71 ಬಲಿ, ಬೆಂಗಳೂರಿನಲ್ಲಿ 3,371 ಸೇರಿ 7,184 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು 7,184 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,58,574ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 71 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,427ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,371 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,04,005ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 14 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 8,893 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,37,481ಕ್ಕೆ ಏರಿಕೆಯಾಗಿದೆ. 1,10,647ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 940 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಳು