ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ- ಇದುವರೆಗೆ ದೇಶದಲ್ಲಿ 1,17,306 ಮಂದಿ ಬಲಿ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ- ಇದುವರೆಗೆ ದೇಶದಲ್ಲಿ 1,17,306 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಕಳೆದ 5 ದಿನಗಳಿಂದ 60 ಸಾವಿರಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದೆ.

ಕಳೆದ 24 ಗಂಟೆಯಲ್ಲಿ 54,366 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 77,61,312ಕ್ಕೆ ಏರಿಕೆಯಾಗಿದೆ. ಒಂದೇ ದಿನ 690 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದುವರೆಗೂ 1,17,306 ಜನ ಮಹಾಮಾರಿಯಿಂದ ಸಾವಿಗೀಡಾಗಿದ್ದಾರೆ.

77 ಲಕ್ಷ ಸೋಂಕಿತರ ಪೈಕಿ 6,95,509 ಸಕ್ರಿಯ ಪ್ರಕರಣಗಳೀದ್ದರೆ, 69,48,497 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 73,979 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ದೇಶದಲ್ಲಿ ನಿನ್ನೆ ಒಂದೇ ದಿನ 14,42,722 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದುವರೆಗೂ 10,01,13,085 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಒಟ್ಟಿನಲ್ಲಿ ಕಳೆದ ಕೆಲ ವಾರಗಳಿಂದ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಲ್ಲದೆ ಸಕ್ರಿಯ ಪ್ರಕರಣಗಳ ಪ್ರಮಾಣದಲ್ಲಿಯೂ ಇಳಿತ ಕಂಡುಬಂದಿದೆ.

ತಾಜಾ ಸುದ್ದಿಗಳು