ವಿಷ್ಣು ಪುತ್ಥಳಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ: ಕಿಡಿಗೇಡಿಗಳ ಕೃತ್ಯಕ್ಕೆ ಡಿಬಾಸ್ ದರ್ಶನ್ ಅಸಮಾಧಾನ

ವಿಷ್ಣು ಪುತ್ಥಳಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ: ಕಿಡಿಗೇಡಿಗಳ ಕೃತ್ಯಕ್ಕೆ ಡಿಬಾಸ್ ದರ್ಶನ್ ಅಸಮಾಧಾನ

“ನಮ್ಮ ನಲ್ಮೆಯ ಸಾಹಸ ಸಿಂಹ ಡಾ|| ವಿಷ್ಣು ಸರ್ ಪುತ್ಥಳಿಯನ್ನು ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು.” ಎಂದು ಕನ್ನಡಿಗರ ಅಚ್ಚುನೆಚ್ಚಿನ ಡಿ ಬಾಸ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿ ತಮ್ಮ ಅಸಮಾಧಾನ ಹೊರಹಾಕಿರುವ ದರ್ಶನ್ “ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ|| ವಿಷ್ಣು ಸರ್ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಯಾರು ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು.” ಎಂದಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ತಮ್ಮ ಕಲಾ ಪ್ರೌಢಿಮೆಯ ಮೂಲಕ ಅಭಿಮಾನಿಗಳ ಹೃದಯದಲ್ಲಿ ಮನೆ ಮಾಡಿದ್ದಾರೆ. ಅದರ ದ್ಯೋತಕವಾಗಿ ಕಲಾ ರಸಿಕರು ರಾಜ್ಯದಾದ್ಯಂತ ಹಲವೆಡೆ ಅವರ ಪುತ್ಥಳಿಗಳನ್ನು ಸ್ಥಾಪಿಸಿ ಆರಾಧಿಸುತ್ತಿದ್ದಾರೆ. ಇಂತಹ ಪುತ್ಥಳಿಗಳ ಮೇಲೆ ಅದೇಕೋ ಕಿಡಿಗೇಡಿಗಳ ಕಣ್ಣು ಬಿದ್ದಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಈ ಹಿಂದೆ ವಿಷ್ಣು ಪ್ರತಿಮೆಯನ್ನು ಹೊತ್ತೊಯ್ಯಲಾಗಿತ್ತು. ಇದೀಗ ಕಳೆದ ರಾತ್ರೋ ರಾತ್ರಿ ಧ್ವಂಸ ಮಾಡಿದ್ದಾರೆ.

ಇದೀಗ ಸ್ಥಳದಲ್ಲಿ ವಿಷ್ಣು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೋಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಈ ಸಂಬಂಧ ಪ್ರತಿಕ್ರಯಿಸಿರುವ ನಟ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ದ್ “ಒಮ್ಮೆ ಪ್ರತಿಮೆ ಸ್ಥಾಪಿಸಿದ ಜಾಗದಿಂದ ರಾತ್ರೋ ರಾತ್ರಿ ಪ್ರತಿಮೆಯನ್ನು ಧ್ವಂಸ ಮಾಡಿರುವುದು ಸರಿಯೆ? ಇಂತಹಾ ಕೆಲಸದಿಂಡ ಕನ್ನಡದ ಹಿರಿಯರಿಗೆ ಅವಮಾನವಾಗುತ್ತದೆ.ಇದೀಗ ಹೀಗೆ ಮಾಡಿದ ದುಷ್ಕರ್ಮಿಗಳಿಗೆ ಶಿಕ್ಷೆ ಆಗಬೇಕಿದೆ ” ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳು