ಜನವರಿ 13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ

ಜನವರಿ 13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 54ನೇ ಪುಣ್ಯ ತಿಥಿ ಅಂಗವಾಗಿ ಸೋಮವಾರ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು‌ ಸುದ್ದಿಗಾರರ ಜೊತೆ ಮಾತನಾಡಿದರು.

ಸಚಿವ ಸಂಪುಟದಲ್ಲಿ 7 ಮಂದ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಇದೇ ವೇಳೆ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದರ ಕುರಿತು ಯಾವುದೇ ರೀತಿ ಸ್ಪಷ್ಟನೆಗಳನ್ನು ನೀಡಿಲ್ಲ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಬ್ಬರನ್ನೂ ಕರೆಸಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸಲು ನಿರ್ಧರಿಸಲಾಗಿದೆ. ಈ ಇಬ್ಬರು ನಾಯಕರ ಅನುಕೂಲಕರ ಸಮಯ ನೋಡಿಕೊಂಡು ಜನವರಿ 13 ಅಥವಾ 14ರಂದು 7 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯ ಇಂದಿಗೂ ಪ್ರಸ್ತುತ; ಯಡಿಯೂರಪ್ಪ
ಲಾಲ್ ಬಹದ್ದೂರ್ ಶಾಸ್ತ್ರಿ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು, ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿಯಾಗಿದ್ದರು. ದೇಶದ ರಕ್ಷಣೆ ಮತ್ತು ಅಭಿವೃದ್ಧಿ ವಿಷಯದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದ ಅಸಾಧಾರಣ ವ್ಯಕ್ತಿಯಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಮಹಾತ್ಮಗಾಂಧಿಯವರ ತತ್ವ ಸಿದ್ಧಾಂತಗಳಿಗೆ ಪ್ರಭಾವಿತರಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಲಾಲ್ ಬಹದ್ದೂರು ಶಾಸ್ತ್ರಿ ದೇಶದ ರಕ್ಷಣೆ ಮತ್ತು ಅಭಿವೃದ್ಧಿ ವಿಷಯದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದ ಅಸಾಧಾರಣ ವ್ಯಕ್ತಿಯಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಮಹಾತ್ಮಗಾಂಧಿಯವರ ತತ್ವ ಸಿದ್ಧಾಂತಗಳಿಗೆ ಪ್ರಭಾವಿತರಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದರು. ಪ್ರಧಾನಿ ನೆಹರೂ ಸರ್ಕಾರದಲ್ಲಿ ಭಾರತದ ಪ್ರಥಮ ರೈಲ್ವೆ ಸಚಿವರಾಗಿ, ಸಾರಿಗೆ ಸಂಪರ್ಕ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದ ಮುತ್ಸದ್ಧಿಯಾಗಿದ್ದರು ಎಂದು ಬಣ್ಣಿಸಿದರು.

ತಾಜಾ ಸುದ್ದಿಗಳು