ದೇಶದಲ್ಲಿ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 102ಕ್ಕೆ ಏರಿಕೆ

ದೇಶದಲ್ಲಿ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 102ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ಸದ್ಯ ದೇಶದಲ್ಲಿ ಸೋಂಕಿತರ 102ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಎಲ್ಲಾ ಸೋಂಕಿತರನ್ನು ಆಯಾ ರಾಜ್ಯಗಳ ಆರೋಗ್ಯ ಕೇಂದ್ರಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದೂ ಸಚಿವಾಲಯದ ಹೊಸ ಮಾಹಿತಿ ತಿಳಿಸಿದೆ.

ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚಿ ಅವರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ಸೋಂಕು ನಿಗ್ರಹಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಳು