ಮಂಡ್ಯದಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್

ಮಂಡ್ಯದಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್

ಮಂಡ್ಯ: ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಬ್ಯಾಂಕ್ ಸೇವೆಗಳಿಗೂ ನಿರ್ಬಂಧ ಹೇರಲಾಗಿದೆ. ಮೇ 25, 26, 28, 29 ರಂದು ನಾಲ್ಕು ದಿನಗಳು ಪೂರ್ತಿ ಬ್ಯಾಂಕ್ ವ್ಯವಹಾರ ನಿರ್ಬಂಧಿಸಿ ಡಿಸಿ ಅಸ್ವತಿ ಆದೇಶ ಹೊರಡಿಸಿದ್ದಾರೆ.

ವೈದ್ಯಕೀಯ ಸೇವೆ, ಹಾಲಿನ ಬೂತ್, ನ್ಯಾಯ ಬೆಲೆ ಅಂಗಡಿ ಹಾಗೂ ಕೃಷಿ ಚಟುವಟಿಕೆಗಳಿಗೆ ಪೂರಕ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ಎಲ್ಲವೂ ಸ್ತಬ್ಧ. ದಿನಸಿ, ತರಕಾರಿ ಖರೀದಿಗೂ ಅವಕಾಶ ಇಲ್ಲ. ಹೊಟೆಲ್ ಗಳು, ಮದ್ಯದಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ.

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದೆ. ಅಲ್ಲದೆ ಅನಗತ್ಯವಾಗಿ ಓಡಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಡಿಸಿ ನೀಡಿದ್ದಾರೆ.

ತಾಜಾ ಸುದ್ದಿಗಳು