ರಾಜ್ಯದಲ್ಲಿ ಇಳಿಕೆಯತ್ತ ಕೊರೋನಾ: ಇಂದು 13800 ಹೊಸ ಪ್ರಕರಣಗಳು ಪತ್ತೆ, 25346 ಚೇತರಿಕೆ, 365 ಸಾವು

ರಾಜ್ಯದಲ್ಲಿ ಇಳಿಕೆಯತ್ತ ಕೊರೋನಾ: ಇಂದು 13800 ಹೊಸ ಪ್ರಕರಣಗಳು ಪತ್ತೆ, 25346 ಚೇತರಿಕೆ, 365 ಸಾವು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13800 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2683314ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 268275 ಆಗಿದೆ.

25346 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2383758ಕ್ಕೆ ಏರಿಕೆಯಾಗಿದೆ. ಸೋಂಕಿನಿಂದಾಗಿ 365 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೋನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 31260ಕ್ಕೆ ಏರಿಕೆಯಾಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.9.69, ಮರಣ ಪ್ರಮಾಣ ಶೇ. 2.64 ರಷ್ಟಿದೆ.


ಬೆಂಗಳೂರು ಮಹಾನಗರದಲ್ಲಿಂದು 2686 ಹೊಸ ಪ್ರಕರಣಗಳು ವರದಿಯಾಗಿದ್ದು, 206 ಮಂದಿ ಸಾವನ್ನಪ್ಪಿದ್ದಾರೆ. 8852 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಳು