ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ – ರೋಹಿಣಿ ಸಿಂಧೂರಿ

ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ – ರೋಹಿಣಿ ಸಿಂಧೂರಿ

ಮೈಸೂರು: ಮೈಸೂರು ನನಗೆ ತಾಯಿ ಮನೆ ಅನುಭವ ನೀಡಿದೆ. ಇದೀಗ ಮಗಳು ತವರು ಮನೆ ಬಿಟ್ಟು ಹೋಗುವಂತೆ ಜಿಲ್ಲೆಯಿಂದ ನಿರ್ಗಮಿಸುತ್ತಿದ್ದೇನೆ ಎಂದು ರೋಹಿಣಿ ಸಿಂಧೂರಿ ಭಾವನಾತ್ಮಕ ನುಡಿಗಳನ್ನು ನುಡಿದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿಣಿ ಸಿಂಧೂರಿ, ವರ್ಗಾವಣೆ ಬಳಿಕ ಸಾಕಷ್ಟು ಜನ ತಮ್ಮ ಪ್ರೀತಿ ಮತ್ತು ಅಭಿಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಮಗಳಾಗಿ ಮೈಸೂರಿನ ಎಲ್ಲಾ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಉತ್ತಮ ಕೆಲಸ ಮಾಡುವ ಸಂದರ್ಭದಲ್ಲಿ ಈ ರೀತಿಯಾಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಆದರೂ ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗುತ್ತಿದ್ದೇನೆ ಎಂದರು.

ಹೊಸದಾಗಿ ಬಂದ ಜಿಲ್ಲಾಧಿಕಾರಿಗೆ ಶುಭಾಶಯ ಹೇಳಲು ಬಂದಿದ್ದೆ. ಜಿಲ್ಲೆಯ ವಸ್ತುಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಜಿಲ್ಲೆಯಲ್ಲಿ ಕೋವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ಈ ವರ್ಗಾವಣೆ ಆಗಿದೆ. ಏನು ನಡೆದಿದೆ ಹೇಗೆ ನಡೆದಿದೆ ಅನ್ನೋದು ಎಲ್ಲರ ಮುಂದೆ ನಡೆದಿದೆ. ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಹತಾಶೆ ಹಾಗೂ ಅಭದ್ರತೆ, ಒತ್ತಾಸೆಗೆ ಈ ರೀತಿ ಮಾತನಾಡೋದು ಸರಿಯಲ್ಲ ಎಂದರು.

ತಾಜಾ ಸುದ್ದಿಗಳು