ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಕಾಂಗ್ರೆಸ್ ನಿಂದ ದೇಶಾದ್ಯಂತ ಪೆಟ್ರೋಲ್ ಬಂಕ್ ಎದುರು ಜೂ.11ರಂದು ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಕಾಂಗ್ರೆಸ್ ನಿಂದ ದೇಶಾದ್ಯಂತ ಪೆಟ್ರೋಲ್ ಬಂಕ್ ಎದುರು ಜೂ.11ರಂದು ಪ್ರತಿಭಟನೆ

ನವದೆಹಲಿ: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ರಾಷ್ಟ್ರಾದ್ಯಂತ ನಾಡಿದ್ದು ಜೂನ್ 11ರಂದು ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆಗೆ ಮುಂದಾಗಿದೆ.

ಇತ್ತೀಚೆಗೆ ದೇಶದ ಅನೇಕ ನಗರಗಳಲ್ಲಿ, ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂಪಾಯಿ ದಾಟಿದೆ. ಕೊರೋನಾ ಆರ್ಥಿಕ ಸಂಕಷ್ಟದ ಮಧ್ಯೆ ಇಂಧನ ಬೆಲೆ ಏರಿಕೆ ಜನರನ್ನು ಕಂಗೆಡಿಸಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದ್ದಂತೆ ಭಾರತದಲ್ಲಿ ಕೇಂದ್ರ ಸರ್ಕಾರ ಸ್ವಾಮ್ಯದ ತೈಲ ಕಂಪೆನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸುತ್ತಿರುತ್ತವೆ.

ಕೇಂದ್ರ ಸರ್ಕಾರದ ನೀತಿಗಳನ್ನು, ಕೋವಿಡ್ ನಿರ್ವಹಣೆಯನ್ನು ಟೀಕಿಸುತ್ತಾ ಬಂದಿರುವ ಕಾಂಗ್ರೆಸ್ ಪಕ್ಷ ಇಂಧನ ಬೆಲೆ ಏರಿಕೆಯನ್ನು ಸಹ ಖಂಡಿಸುತ್ತಲೇ ಬಂದಿದೆ. ಹೀಗಾಗಿ ಕೇಂದ್ರ ಸರ್ಕಾರದ, ಜನಪ್ರತಿನಿಧಿಗಳ ಗಮನ ಸೆಳೆಯಲು ಪೆಟ್ರೋಲ್ ಪಂಪ್ ಗಳ ಮುಂದೆ ಪ್ರತಿಭಟನೆಗೆ ಸಜ್ಜಾಗಿದೆ.

ತಾಜಾ ಸುದ್ದಿಗಳು