ಸ್ಯಾಂಡಲ್‍ವುಡ್ ಹಿರಿಯ ನಟ ಸುರೇಶ್ ಚಂದ್ರ ಕೊರೊನಾಗೆ ಬಲಿ

ಸ್ಯಾಂಡಲ್‍ವುಡ್ ಹಿರಿಯ ನಟ ಸುರೇಶ್ ಚಂದ್ರ ಕೊರೊನಾಗೆ ಬಲಿ

ಬೆಂಗಳೂರು: ಪತ್ರಕರ್ತ ಹಾಗೂ ಸ್ಯಾಂಡಲ್‍ವುಡ್‍ನ ಹಿರಿಯ ನಟ ಸುರೇಶ್ ಚಂದ್ರ ಕೊರೊನಾದಿಂದ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್ ಚಂದ್ರರವರು ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಸುಬ್ರಹ್ಮಣ್ಯ ನಗರದ ನಿವಾಸಿಯಾಗಿದ್ದ ಸುರೇಶ್ ಚಂದ್ರರವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಆಗಲಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಖ್ಯಾತಿ ಪಡೆದಿದ್ದ ಸುರೇಶ್ ಚಂದ್ರರವರು 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

80ರ ದಶಕದಲ್ಲಿ ಪತ್ರಿಕೋದ್ಯಮದಲ್ಲಿ ಹೆಸರುವಾಸಿಯಾಗಿದ್ದ ಸುರೇಶ್ ಚಂದ್ರರವರು ಸಂಜೆ ವಾಣಿ ಪತ್ರಿಕೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಚಂದನವನದ ಶಂಕರ್ ನಾಗ್, ವಿಷ್ಣುವರ್ಧನ್, ಅಂಬರೀಶ್, ದೇವರಾಜ್ ಸೇರಿದಂತೆ ಹಲವಾರು ಸ್ಟಾರ್ ನಟರ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

ತಾಜಾ ಸುದ್ದಿಗಳು