ಜನಸಂಖ್ಯೆ ನಿಯಂತ್ರಣಕ್ಕೆ ಉತ್ತರಪ್ರದೇಶ ತಂದಿರುವ ಕ್ರಮ ಸ್ವಾಗತಿಸುತ್ತೇನೆ: ಈಶ್ವರಪ್ಪ

ಜನಸಂಖ್ಯೆ ನಿಯಂತ್ರಣಕ್ಕೆ ಉತ್ತರಪ್ರದೇಶ ತಂದಿರುವ ಕ್ರಮ ಸ್ವಾಗತಿಸುತ್ತೇನೆ: ಈಶ್ವರಪ್ಪ

– ರಾಜ್ಯದಲ್ಲಿ ಜಾರಿಗೆ ತರುವ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇವೆ
ಶಿವಮೊಗ್ಗ:
ಜನಸಂಖ್ಯೆ ನಿಯಂತ್ರಣಕ್ಕೆ ಉತ್ತರಪ್ರದೇಶದಲ್ಲಿ ಜಾರಿಗೆ ತರಲು ಹೊರಟಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನಸಂಖ್ಯೆ ನಿಯಂತ್ರಣದ ಸಲುವಾಗಿ ಕುಟುಂಬಕ್ಕೆ ಇಬ್ಬರೇ ಮಕ್ಕಳು ಎಂಬ ನಿಯಮ ತಂದಿದ್ದಾರೆ. ದೇಶದಲ್ಲಿ ಸಹ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನಸಂಖ್ಯೆ ಕಡಿಮೆ ಮಾಡಲು ಕೇಂದ್ರ ಸರಕಾರ ಸಹ ಬಹಳ ಪ್ರಯತ್ನ ನಡೆಸುತ್ತಿದೆ ಆದರೂ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದಿದ್ದಾರೆ.

ಉತ್ತರಪ್ರದೇಶ ಒಂದು ಪ್ರಯತ್ನ ನಡೆಸಿದೆ. ಆ ಪ್ರಯತ್ನ ಹೇಗೆ ಫಲಪ್ರದವಾಗುತ್ತದೆ ಎಂಬುದನ್ನು ನೋಡುತ್ತೇವೆ. ಆ ಅನುಭವದ ಮೇಲೆ ರಾಜ್ಯದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಿ ರಾಜ್ಯದಲ್ಲೂ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳು