1,977 ಹೊಸ ಕೊರೊನಾ ಪ್ರಕರಣ, 48 ಸಾವು – 3,188 ಜನ ಡಿಸ್ಚಾರ್ಜ್

1,977 ಹೊಸ ಕೊರೊನಾ ಪ್ರಕರಣ, 48 ಸಾವು – 3,188 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ 1,977 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 3,188 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ರಾಜ್ಯದಲ್ಲಿ 32,383 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ 28,78,564 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 36,037 ಮಂದಿ ಸಾವನ್ನಪ್ಪಿದ್ದಾರೆ.

ಸದ್ಯ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.1.42 ಮತ್ತು ಮರಣ ಪ್ರಮಾಣ ಶೇ.2.42ರಷ್ಟಿದೆ. ಇವತ್ತು 1,38,274 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬೆಂಗಳೂರು ನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು ಮತ್ತು ಉಡುಪಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮೂರಂಕಿಯಲ್ಲಿ ದಾಖಲಾಗಿದೆ. 12 ಜಿಲ್ಲೆಗಳಲ್ಲಿ ಕೊರೊನಾದಿಂದ ಯಾವುದೇ ಸಾವು ಸಂಭವಿಸಿಲ್ಲ.

ತಾಜಾ ಸುದ್ದಿಗಳು