ಸಿಎಂ ಬದಲಾವಣೆ ವಿಚಾರ: ಬಿಎಸ್ ವೈ ಪರ ಬ್ಯಾಟ್ ಬೀಸಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ.

ಸಿಎಂ ಬದಲಾವಣೆ ವಿಚಾರ: ಬಿಎಸ್ ವೈ ಪರ ಬ್ಯಾಟ್ ಬೀಸಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ.

ಬೆಂಗಳೂರು: ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪರ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಬ್ಯಾಟ್ ಬೀಸಿದ್ದಾರೆ.

ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಬಳಿಕ ಮಾತನಾಡಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ. ಸಿಎಂ ಯಡಿಯೂರಪ್ಪ ನಮ್ಮ ಜತೆ ಚರ್ಚಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ ೭೫ ವರ್ಷ ಮೀರಿದ ಯಾವುದೇ ವ್ಯಕ್ತಿಗೆ ಅಧಿಕಾರ ನೀಡಿಲ್ಲ. ಇಡೀ ದೇಶದಲ್ಲಿ ನನಗೆ ಮಾತ್ರ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ ಎಂದರು.

ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನಮ್ಮ ಇಚ್ಚೆ ಏನೆಂದರೆ ಅವಧಿ ಪೂರೈಸುವವರೆಗೆ ಯಡಿಯೂರಪ್ಪ ಮುಂದುವರೆಸಬೇಕೆಂಬುದಷ್ಟೇ ನಮ್ಮ ಆಶಯ ಎಂದು ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ತಾಜಾ ಸುದ್ದಿಗಳು