ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

ಉಡುಪಿ: ಹಿಂದುತ್ವ ಮತ್ತು ಅಭಿವೃದ್ಧಿ ವಿಚಾರದಲ್ಲಿ ರಾಜಿಯೇ ಇಲ್ಲ. ಹಿಂದುತ್ವವೇ ನನ್ನ ಮೊದಲ ಆಯ್ಕೆ. ಸಚಿವ, ಶಾಸಕ ಸ್ಥಾನ ಆ ನಂತರದ ಆಯ್ಕೆ ಎಂದು ಉಡುಪಿ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ಹೆಜಮಾಡಿ ಮೂಲಕ ಸುನೀಲ್ ಕುಮಾರ್ ಉಡುಪಿ ಜಿಲ್ಲೆಗೆ ಆಗಮಿಸಿದರು. ಬೆಳ್ಮಣ್ ನಲ್ಲಿ ಸಚಿವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಿಜೆಪಿ ನಾಯಕರು, ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುನೀಲ್ ಕುಮಾರ್ ಅವರು, ಸಚಿವನಾಗಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದೇನೆ. ಉಡುಪಿಗೆ ಬರುತ್ತಿರುವುದು ಸಂತೋಷ, ಭಾವನಾತ್ಮಕ ಕ್ಷಣ. ಕಾರ್ಕಳ ಕ್ಷೇತ್ರದ ಜನ ಮೂರುಬಾರಿ ಆಯ್ಕೆ ಮಾಡಿದ್ದರಿಂದ ಸಚಿವನಾದೆ. ಆದರೆ ಯಾವುದೇ ಹಂತದಲ್ಲೂ ಹಿಂದುತ್ವ ವಿಚಾರದಲ್ಲಿ ರಾಜಿ ಮಾಡುವುದಿಲ್ಲ. ಮೊದಲ ಆಯ್ಕೆ ಹಿಂದುತ್ವ ಮತ್ತು ಅಭಿವೃದ್ಧಿ ಎಂದರು.

ಪಕ್ಷ ದೊಡ್ಡ ಪ್ರಮಾಣದ ಹೊಣೆಗಾರಿಕೆಯನ್ನು ಹೆಗಲಿಗೇರಿಸಿದೆ. ಸಿಎಂ ಮತ್ತು ಪಕ್ಷದ ಹಿರಿಯರ ನಿರೀಕ್ಷೆಯಿಟ್ಟು ಸ್ಥಾನ ಕೊಟ್ಟಿದ್ದಾರೆ. ಜವಾಬ್ದಾರಿ ನಿಭಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನಗೆ ಇಷ್ಟದ ಖಾತೆ ಎಂದು ಯಾವುದು ಇಲ್ಲ ಮುಖ್ಯಮಂತ್ರಿಗಳು ಕೊಟ್ಟ ಖಾತೆಯನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ ಎಂದರು.

ತಾಜಾ ಸುದ್ದಿಗಳು