ಶ್ರೀಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ

ಶ್ರೀಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ

ರಾಯಚೂರು: ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ.

ರಾಯರು 700 ವರ್ಷಕಾಲ ವೃಂದಾವನದಲ್ಲಿರುತ್ತಾರೆ ಅನ್ನೋ ಪ್ರತೀತಿಯಿದೆ. ಅರ್ಧ ಅವಧಿ ಈ ವರ್ಷ ಪೂರ್ಣಗೊಳ್ಳುವ ಹಿನ್ನೆಲೆ ರಾಯರ 350 ನೇ ಆರಾಧನೆ ವಿಶೇಷವಾಗಿದೆ. ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ರಾಯರು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಆಚರಿಸಲಾಗುತ್ತಿದೆ. ಬೆಳಿಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ನಡೆಯುತ್ತಿವೆ. ರಾಜ್ಯದ ವಿವಿಧೆಡೆಯಿಂದ ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದಾರೆ. ಮಠದಲ್ಲಿ ಏಳುದಿನ ಕಾಲ ಸಪ್ತರಾತ್ರೋತ್ಸವ ನಡೆಯುತ್ತಿದೆ.350-aradhana-mahotsava-mantralaya/

ತಾಜಾ ಸುದ್ದಿಗಳು