ಮನೆಗಳ ಹಕ್ಕು ಪತ್ರ ಕೊಡಿಸಲು ಒತ್ತಾಯ – ರೈತ ಸಂಘದಿಂದ ಹಾಸನದಲ್ಲಿ ಪ್ರತಿಭಟನೆ

ಮನೆಗಳ ಹಕ್ಕು ಪತ್ರ ಕೊಡಿಸಲು ಒತ್ತಾಯ – ರೈತ ಸಂಘದಿಂದ ಹಾಸನದಲ್ಲಿ ಪ್ರತಿಭಟನೆ

ಹಾಸನ: ಕೃಷಿ ಕೂಲಿಗಾರ 25 ಕುಟುಂಬದವರಿಗೆ ಮನೆಗಳ ಹಕ್ಕುಪತ್ರ ಕೊಡಿಸುವಂತೆ ಒತ್ತಾಯಿಸಿ, ಜಿಲ್ಲಾಧಿಕಾರಿ ಕಛೇರಿ ಮುಂದೆ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಮಾಡಲಾಯಿತು.

ಬೇಲೂರು ತಾಲೂಕು, ಕಸಬಾ ಹೋಬಳಿ, ಹೆಗ್ಗಡಿಹಳ್ಳಿ ಗ್ರಾಮದ ಸರ್ವೆ.ನಂ.46ರಲ್ಲಿ, ಗ್ರಾಮದ ಸುಮಾರು 25 ಕೃಷಿ ಕೂಲಿಗಾರ ಕುಟುಂಬಗಳು ಕಳೆದ 40 ವರ್ಷಗಳಿಂದಲೂ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದಾರೆ. ಆದರೆ ಅಲ್ಲಿರುವ ಬಡ ಕೂಲಿಗಾರ ಕುಟುಂಬದವರಿಗೆ ಇದುವರೆಗೂ ಹಕ್ಕು ಪತ್ರ ನೀಡಿಲ್ಲ. ಕೂಡಲೇ ಈ ಕಡೆ ಗಮನಹರಿಸಿ ಬಡ ಜನರಿಗೆ ಮನೆಗಳ ಹಕ್ಕುಪತ್ರವನ್ನು ಹಾಗೂ ಸರ್ಕಾರದ ಇನ್ನಿತರೆ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಳ್ಳೂರು ಸ್ವಾಮೀಗೌಡ, ವಿಕ್ಟರ್, ಬೋಗಳೇಶ್, ಬಸವರಾಜು, ಸಚೀನ್, ಕೃಷ್ಣ, ಅಣ್ಣಪ್ಪ, ಸಂತೋಷ್, ಪ್ರಕಾಶ್ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳು