ರೈಲ್ವೇ ನೇಮಕಾತಿ: 432 ಹುದ್ದೆಗಳು ಖಾಲಿ, ಪರೀಕ್ಷೆ ಇಲ್ಲದೇ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ರೈಲ್ವೇ ನೇಮಕಾತಿ: 432 ಹುದ್ದೆಗಳು ಖಾಲಿ, ಪರೀಕ್ಷೆ ಇಲ್ಲದೇ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು: ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ 432 ಹುದ್ದೆಗಳು ಖಾಲಿ ಇದ್ದು,  ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಹೆಸರು
ಫಿಟ್ಟರ್, ಎಲೆಕ್ಟ್ರಿಷಿಯನ್, ವಯರ್ ಮ್ಯಾನ್, ಎಲೆಕ್ಟ್ರಾನಿಕ್ ಮೆಕಾನಿಕ್, ವೆಲ್ಡರ್, ಪ್ಲಂಬರ್, ಪೇಂಟರ್, ಟರ್ನರ್, ಕಾರ್ಪೆಂಟರ್, ಡ್ರಸ್ಲರ್

ಒಟ್ಟು ಹುದ್ದೆಗಳು: 432

ವಿದ್ಯಾರ್ಹತೆ
ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ 10ನೇ ತರಗತಿ ಜೊತೆಗೆ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಸ್ಥಳ: ಭಾರತದ ವಿವಿಧೆಡೆ

ವಯೋಮಿತಿ: ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ
ಎಸ್ಸಿ, ಎಸ್ಸಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ, ಒಬಿಸಿ ವಿದ್ಯಾರ್ಥಿಗಳಿಗೆ 3 ವರ್ಷ ಸಡಿಲಿಕೆ

ಆಯ್ಕೆ ವಿಧಾನ 
ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಬೇಕಾದ ವಿಳಾಸ: 
https://apprenticeshipindia.org/apprenticeship/opportunity

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
10-10-2021

ತಾಜಾ ಸುದ್ದಿಗಳು