Connect with us

Sports

2027 ODI ವಿಶ್ವಕಪ್ ದಿನಾಂಕ ಬಹಿರಂಗ: ಅಕ್ಟೋಬರ್ 4ರಿಂದ ನವೆಂಬರ್ 21ರವರೆಗೆ ಕ್ರಿಕೆಟ್ ಮಹಾಸಮರ!

Published

on

ನವದೆಹಲಿ: 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್‌ಗಾಗಿ ವಿಶ್ವದ ಕ್ರಿಕೆಟ್ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಈ ನಡುವೆ, ಪಂದ್ಯಾವಳಿಯ ತಾತ್ಕಾಲಿಕ ವೇಳಾಪಟ್ಟಿ ಬಹಿರಂಗವಾಗಿದ್ದು, ವಿಶ್ವಕಪ್ 2027ರ ಅಕ್ಟೋಬರ್ 4ರಿಂದ ನವೆಂಬರ್ 21ರವರೆಗೆ ನಡೆಯುವ ಸಾಧ್ಯತೆ ಇದೆ. ಈ ಕುರಿತು ಅಂತಿಮ ನಿರ್ಧಾರವನ್ನು ಐಸಿಸಿ ವಾರ್ಷಿಕ ಸಭೆಯಲ್ಲಿ ಕೈಗೊಳ್ಳುವ ನಿರೀಕ್ಷೆಯಿದೆ.

54 ಪಂದ್ಯಗಳು, 14 ತಂಡಗಳ ಸೆಣಸಾಟ

ಈ ಬಾರಿಯ ವಿಶ್ವಕಪ್‌ನಲ್ಲಿ ಒಟ್ಟು 14 ತಂಡಗಳು ಭಾಗವಹಿಸಲಿದ್ದು, 54 ಪಂದ್ಯಗಳು ನಡೆಯಲಿವೆ. ಪಂದ್ಯಾವಳಿಯು ಸುಮಾರು ಒಂದೂವರೆ ತಿಂಗಳ ಕಾಲ ನಡೆಯಲಿದೆ. 2023ರ ವಿಶ್ವಕಪ್ ಮಾದರಿಯಿಂದ ಭಿನ್ನವಾಗಿ, 2003ರ ವಿಶ್ವಕಪ್‌ನಲ್ಲಿ ಬಳಸಿದ್ದ ಸೂಪರ್ ಸಿಕ್ಸ್ ಮಾದರಿಯನ್ನು ಮತ್ತೆ ಅಳವಡಿಸಿಕೊಳ್ಳಲಾಗುತ್ತಿದೆ.

ಟೂರ್ನಿ ಮಾದರಿ ಹೇಗಿರಲಿದೆ?

14 ತಂಡಗಳನ್ನು ತಲಾ 7 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಮೂರು ತಂಡಗಳು ಸೂಪರ್ ಸಿಕ್ಸ್ ಹಂತಕ್ಕೆ ಪ್ರವೇಶ ಪಡೆಯುತ್ತವೆ. ಅಲ್ಲಿಂದ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆದು, ಜಯಶಾಲಿ ಎರಡು ತಂಡಗಳು ನವೆಂಬರ್ 21ರಂದು ನಡೆಯುವ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಹೋರಾಡಲಿವೆ.

ಮೂರು ದೇಶಗಳಲ್ಲಿ ವಿಶ್ವಕಪ್

2027ರ ವಿಶ್ವಕಪ್‌ಗೆ ಸೌತ್‌ ಆಫ್ರಿಕಾ, ಜಿಂಬಾಬ್ವೆ  ಹಾಗೂ ನಮೀಬಿಯಾ ಜಂಟಿಯಾಗಿ ಆತಿಥ್ಯ ವಹಿಸಲಿವೆ. ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚಿನ ಪಂದ್ಯಗಳು ಮತ್ತು ನಾಕೌಟ್ ಪಂದ್ಯಗಳು ನಡೆಯಲಿದ್ದು, ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲೂ ಕೆಲವು ಪಂದ್ಯಗಳಿಗೆ ವೇದಿಕೆ ಸಿದ್ಧವಾಗಲಿದೆ.

ಅರ್ಹತೆ ಹೇಗೆ?

ಆತಿಥೇಯ ರಾಷ್ಟ್ರಗಳಾದ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ಈಗಾಗಲೇ ನೇರ ಅರ್ಹತೆ ಪಡೆದಿವೆ. ಉಳಿದ ತಂಡಗಳು ಐಸಿಸಿ ಅರ್ಹತಾ ಪ್ರಕ್ರಿಯೆ ಮತ್ತು ಶ್ರೇಯಾಂಕಗಳ ಆಧಾರದ ಮೇಲೆ ಸ್ಥಾನ ಪಡೆಯಲಿವೆ. ನಮೀಬಿಯಾ ಸಹ ಆತಿಥೇಯ ರಾಷ್ಟ್ರವಾಗಿದ್ದರೂ ಅರ್ಹತಾ ಹಾದಿ ಮೂಲಕವೇ ವಿಶ್ವಕಪ್ ಪ್ರವೇಶ ಪಡೆಯಬೇಕಿದೆ.

2003ರ ಬಳಿಕ ಮೊದಲ ಬಾರಿಗೆ ಪುರುಷರ ಏಕದಿನ ವಿಶ್ವಕಪ್ ಮತ್ತೆ ಆಫ್ರಿಕಾ ಖಂಡಕ್ಕೆ ಮರಳುತ್ತಿರುವುದು ಈ ಟೂರ್ನಿಯ ವಿಶೇಷತೆಯಾಗಿದೆ.

Sports

ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

Published

on

ಬರ್ಮಿಂಗ್ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ದೊರೆತಿದ್ದು, ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ.

ಟಿ20 ಸರಣಿಯಲ್ಲಿ ನಿರಾಸೆ ಅನುಭವಿಸಿದ್ದ ಭಾರತ ಇದೀಗ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸುವ ಗುರಿ ಹೊಂದಿದೆ. ಅಲ್ಲದೆ, 2027ರ ಏಕದಿನ ವಿಶ್ವಕಪ್‌ ಸಿದ್ಧತೆಯ ದೃಷ್ಟಿಯಿಂದಲೂ ಈ ಸರಣಿ ಮಹತ್ವ ಪಡೆದಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಬಹಳ ದಿನಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟಿಗೆ ಕಣಕ್ಕಿಳಿದಿದ್ದಾರೆ.

ಉಭಯ ತಂಡಗಳ ಮುಖಾಮುಖಿ ದಾಖಲೆಯಲ್ಲಿ ಭಾರತ ಮೇಲುಗೈ ಸಾಧಿಸಿದೆ. ಇದುವರೆಗೆ ನಡೆದ 110 ಏಕದಿನ ಪಂದ್ಯಗಳಲ್ಲಿ ಭಾರತ 61ರಲ್ಲಿ ಗೆದ್ದಿದ್ದರೆ, ಇಂಗ್ಲೆಂಡ್ 44 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಎಡ್ಜ್‌ಬಾಸ್ಟನ್‌ನಲ್ಲೂ ಭಾರತ ಉತ್ತಮ ದಾಖಲೆ ಹೊಂದಿದ್ದು, ಆಡಿದ 12 ಪಂದ್ಯಗಳಲ್ಲಿ 8ರಲ್ಲಿ ಗೆಲುವು ದಾಖಲಿಸಿದೆ.

ಪ್ಲೇಯಿಂಗ್ XI:

ಇಂಗ್ಲೆಂಡ್: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್.

ಭಾರತ: ಶುಭ್‌ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್.

Continue Reading

Sports

ಟಿ-20 ವೈಫಲ್ಯ: ಗಂಭೀರ್-ಅಯ್ಯರ್ ಜೊತೆ ಬಿಸಿಸಿಐ ಪರಿಶೀಲನಾ ಸಭೆ

Published

on

ಮುಂಬೈ:  ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಎರಡೂ ಸರಣಿಗಳಲ್ಲಿ ಭಾರತ ಒಂದೂ ಪಂದ್ಯ ಗೆಲ್ಲದಿರುವುದು ಕ್ರಿಕೆಟ್ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಭಾರತ ಇದುವರೆಗೆ ಆಡಿರುವ 6 ಟಿ20 ಪಂದ್ಯಗಳಲ್ಲಿ 5ರಲ್ಲಿ ಸೋಲು ಕಂಡಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 0–2 ಅಂತರದಿಂದ ಕ್ಲೀನ್ ಸ್ವೀಪ್‌ಗೆ ಒಳಗಾಗಿತ್ತು. ಬಳಿಕ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲೂ ಭಾರತ ಹಿನ್ನಡೆ ಅನುಭವಿಸಿದ್ದು, ಮೂರು ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದ್ದು, ಇನ್ನೊಂದು ಪಂದ್ಯ ಬಾಕಿಯಿದೆ.

ತಂಡದ ನಿರಂತರ ವೈಫಲ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಇಂಗ್ಲೆಂಡ್ ಸರಣಿ ಮುಕ್ತಾಯವಾದ ಬಳಿಕ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಪರಿಶೀಲನಾ ಸಭೆ ನಡೆಸಿ, ತಂಡದ ದುರ್ಬಲತೆಗಳನ್ನು ವಿಶ್ಲೇಷಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬಿಸಿಸಿಐ ನಿರ್ಧರಿಸಿದೆ.

ಇದೀಗ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ತಪ್ಪಿಸಿಕೊಳ್ಳಲು ಹಾಗೂ ಟಿ20 ಶ್ರೇಯಾಂಕದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳಲು ಉಳಿದಿರುವ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸುವ ಒತ್ತಡದಲ್ಲಿದೆ.

Continue Reading

National - International

ಇಂಗ್ಲೆಂಡ್ ವಿರುದ್ಧ 14 ವರ್ಷಗಳ ಬಳಿಕ ಟಿ-20 ಸರಣಿ ಸೋತ ಟೀಂ ಇಂಡಿಯಾ

Published

on

ಇಂಗ್ಲೆಂಡ್‌: ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ನಿರೀಕ್ಷಿತ ಪ್ರದರ್ಶನ ಕಾಣಿಸಲಿಲ್ಲ. ಹಾಲಿ ಟಿ20 ವಿಶ್ವ ಚಾಂಪಿಯನ್ ಎಂಬ ಹೆಗ್ಗಳಿಕೆ ಹೊಂದಿದ್ದ ಭಾರತ ತಂಡ, ಐರ್ಲೆಂಡ್ ವಿರುದ್ಧವೂ ಹಾಗೂ ಇಂಗ್ಲೆಂಡ್ ವಿರುದ್ಧವೂ ಉತ್ತಮ ಪ್ರದರ್ಶನ ನೀಡಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಎರಡೂ ಸರಣಿಗಳಲ್ಲಿ ತಂಡ ನಿರಾಸೆ ಮೂಡಿಸಿದ್ದು, ವಿಶೇಷವಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದ ಸೋಲಿನಿಂದ 14 ವರ್ಷಗಳ ಅಜೇಯ ಸರಣಿಗೆ ತೆರೆ ಬಿದ್ದಿದೆ.

2012ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟಿ20 ಸರಣಿಗಳಲ್ಲಿ ಭಾರತ ಸೋಲು ಕಂಡಿರಲಿಲ್ಲ. ಈ ಅವಧಿಯಲ್ಲಿ ನಡೆದ ಆರು ಸರಣಿಗಳಲ್ಲಿ ಭಾರತ ಐದು ಸರಣಿಗಳನ್ನು ಗೆದ್ದರೆ, ಒಂದು ಸರಣಿ ಡ್ರಾದಲ್ಲಿ ಅಂತ್ಯಗೊಂಡಿತ್ತು. ಇದೀಗ ಏಳನೇ ಸರಣಿಯಲ್ಲಿ ಇಂಗ್ಲೆಂಡ್ ಸಂಪೂರ್ಣ ಮೇಲುಗೈ ಸಾಧಿಸಿ 3-0 ಅಂತರದಿಂದ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಇನ್ನು ನಾಯಕ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಭಾರತ ಟಿ20 ತಂಡದ ಪ್ರದರ್ಶನವೂ ನಿರಾಸೆ ಮೂಡಿಸಿದೆ. ಅವರ ನಾಯಕತ್ವದಲ್ಲಿ ಆಡಿದ ಆರು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಭಾರತ ಸೋತಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಐರ್ಲೆಂಡ್ ವಿರುದ್ಧದ ವೈಟ್‌ವಾಶ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿ ಸೋಲು ತಂಡದ ಮೇಲೆ ಒತ್ತಡ ಹೆಚ್ಚಿಸಿದೆ.

ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಈಗ ಮುಂದಿನ ಜಿಂಬಾಬ್ವೆ ಪ್ರವಾಸದಲ್ಲಿ ಪುಟಿದೇಳುವ ವಿಶ್ವಾಸದಲ್ಲಿದೆ. ತಂಡ ತನ್ನ ತಪ್ಪುಗಳನ್ನು ಸರಿಪಡಿಸಿ ಮತ್ತೆ ಗೆಲುವಿನ ಹಾದಿಗೆ ಮರಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Continue Reading

Trending

error: Content is protected !!