Connect with us

State

ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತ

Published

on

ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಐವರು ಅದರಡಿ ಸಿಲುಕಿರುವ ಶಂಕೆ ಇದೆ. ಈ ವೇಳೆ ಹೆದ್ದಾರಿ ಬದಿಯಲ್ಲಿ ಕ್ಯಾಂಟೀನ್ ವೊಂದರ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಮಣ್ಣಿನ ರಭಸಕ್ಕೆ ಗಂಗಾವಳಿ ನದಿಗೆ ಕೊಚ್ಚಿಹೋಗಿದೆ. ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸಹ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.

Continue Reading

State

ವಿಧಾನಸೌಧದ ಗುಮ್ಮಟದಲ್ಲಿ ಬಿರುಕು – ಸಿಎಂ ಗಮನಕ್ಕೆ ತರ್ತೀನಿ ಎಂದ ಸ್ಪೀಕರ್‌

Published

on

ಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಸ್ಪೀಕರ್ ಯುಟಿ ಖಾದರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಿಎಂ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ.

ಗುಮ್ಮಟದಲ್ಲಿ ಸಣ್ಣ ಮಟ್ಟದ ಬಿರುಕು ಕಾಣಿಸಿದ್ದು. ಜೋರು ಮಳೆ ಬಂದಾಗ ನೀರು ಸಹ ಲೀಕೇಜ್ ಆಗುತ್ತಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಖುದ್ದು ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧ ರಾಜಕೀಯ ನಾಯಕರ ಕಟ್ಟಡವಾಗಿರದೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವೂ ಆಗಿದೆ. ಆದ್ರೆ ದೊಡ್ಡ ಕಟ್ಟಡಗಳನ್ನು ಸರಿಪಡಿಸುವಾಗ ಮತ್ತೊಂದು ಕಡೆ ಸ್ವಲ್ಪ ಹೆಚ್ಚು-ಕಡಿಮೆ ಆಗಬಹುದು. ಗುಮ್ಮಟ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಫ್ಲೋರ್‌ಗಳು ಮಾತ್ರ ವ್ಯಾಪ್ತಿಗೆ ಬರುತ್ತದೆ. ಆದರೂ ಈ ವಿಚಾರವನ್ನ ಸಿಎಂ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.

ನಮ್ಮ ವ್ಯಾಪ್ತಿಯಲ್ಲಿನ ಫ್ಲೋರ್‌ಗಳನ್ನು ಸರಿಪಡಿಸಿದ್ದೇನೆ. ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ವ್ಯಾಪ್ತಿಗೆ ಗುಮ್ಮಟ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ಇದು ಬಹಳ ವರ್ಷಗಳ ಹಳೆಯ ಕಟ್ಟಡ. ಕೆಲವೊಂದು ಲೋಪದೋಷ ಆಗಿರಬಹುದು, ಆದಷ್ಟು ಬೇಗ ಸಿಎಂಗೆ ವಿಚಾರ ತಿಳಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.

Continue Reading

State

ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ

Published

on

ಬೆಂಗಳೂರು:
ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನರಾದರು. ಅವರು ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ.
ಪ್ರಜಾವಾಣಿಗೆ ಸೇರಿದ್ದ ಅವರು ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು.
ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೆಯುಡಬ್ಲ್ಯೂಜೆ ಒಡನಾಡಿಯಾಗಿಯೂ ಇದ್ದರು.
ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು.

 

ಕೆಯುಡಬ್ಲ್ಯೂಜೆ ಸಂತಾಪ:

ಹಿರಿಯ ಪತ್ರಕರ್ತರ ವೇದಿಕೆ ಸಂಘಟನೆಯಲ್ಲಿ ಸಕ್ರೀಯವಾಗಿದ್ದ ಕೃಷ್ಣಪ್ಪ ಅವರ ನಿಧನ ನೋವಿನ ಸಂಗತಿ ಎಂದು ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದ.
ಕೃಷ್ಣಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.

Continue Reading

State

ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗವಹಿಸಿದ ಬಾಲಿವುಡ್ ಕುಟುಂಬ

Published

on

ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.

ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದರೆ, ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಅಧಿಕೃತರಲ್ಲಿ ಮನವಿ ಮಾಡಿದ್ದರು.

ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.

Continue Reading

Trending

error: Content is protected !!