Chikmagalur
ಶ್ರೀ ವಿದ್ಯಾ ಗಣಪತಿ ಯುವಕರ ಬಳಗದ ವತಿಯಿಂದ 9ನೇ ವರ್ಷದ ಅದ್ದೂರಿ ಗಣೇಶೋತ್ಸವ
 
																								
												
												
											ಚಿಕ್ಕಮಗಳೂರು: ಶ್ರೀ ವಿದ್ಯಾ ಗಣಪತಿ ಯುವಕರ ಬಳಗದ ವತಿಯಿಂದ 9ನೇ ವರ್ಷದ ಅದ್ದೂರಿ ಗಣೇಶೋತ್ಸವ ಆಯೋಜಿಸಲಾಗಿತ್ತು.
ಆಗಸ್ಟ್. ರಂದು ಪ್ರತಿಷ್ಠಾನೆಗೊಂಡು ಸೆ.7 ರಂದು ಅದ್ದೂರಿ ಮೆರವಣಿಗೆಯೊಂದಿಗೆ ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಮಾಡಲಾಯಿತು.

ಗೊರಿಲ್ಲಾ tabolo ಹಾಗೂ ನಾಸಿಕ್ ಡೋಲ್‌ಗಳೊಂದಿಗೆ ಮೆರವಣಿಗೆ ಸಾಗಿತ್ತು. ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತಜನರು ಪಾಲ್ಗೊಂಡಿದ್ದು, ಅದರೊಂದಿಗೆ ಕ್ರೀಡಾಕೂಟ , ಲಕ್ಕಿ ಡ್ರಾ ಬಹುಮಾನ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಸಲಾಯಿತು.
Chikmagalur
ಬಾಳೆಹೊನ್ನೂರು: ದುರ್ಗಾದೇವಿ ವಿಗ್ರಹ ನಿರ್ಮಾಣಕ್ಕೆ ಚಾಲನೆ
 
														

Chikmagalur
ಇವಿಎಂ ಮೇಲಿರುವ ಗಮನ ಅಭಿವೃದ್ಧಿಯ ಮೇಲೆ ಯಾಕಿಲ್ಲ: ಮಾಲತೇಶ್
 
														ಬಾಳೆಹೊನ್ನೂರು: ದೇಶದ ಚುನಾವಣಾ ವ್ಯವಸ್ಥೆ ಮೇಲೆ ನಂಬಿಕೆಯೇ ಇಲ್ಲದ, ಇವಿಎಂ ಮೇಲೆ ಎಳ್ಳ? ವಿಶ್ವಾಸವಿಲ್ಲದ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ಮುಂದಾಗಿರುವುದು ಆ ಪಕ್ಷದ ಇಬ್ಬಗೆಯ ನೀತಿಯನ್ನು ಎತ್ತಿ ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಮಾಲತೇಶ್‌ಗೌಡ ಸಿಗಸೆ ಹೇಳಿದ್ದಾರೆ.
ಸದಾ ಗೆದ್ದೆತ್ತಿನ ಬಾಲ ಹಿಡಿಯುವ ಮತ್ತು ದೇಶದ ಜನರನ್ನು ಹಾದಿ ತಪ್ಪಿಸುತ್ತಿರುವ ಕಾಂಗ್ರೆಸ್ ಗೆದ್ದರೆ ಪಕ್ಷದ ಗೆಲುವು ಅಂತ ಎದೆಯುಬ್ಬಿಸಿ ಬೀಗುತ್ತಾ, ಸೋತಾಗ ದೇಶದ ಚುನಾವಣಾ ವ್ಯವಸ್ಥೆ ಮತ್ತು ಇವಿಎಂನತ್ತ ಬೊಟ್ಟು ಮಾಡುವ ನೀಚ ರಾಜಕೀಯ ಮಾಡುತ್ತಿದೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಸರಣಿಯಾಗಿ ಮತಗಳ್ಳತನದ ಆರೋಪ ಮಾಡುವ ಮೂಲಕ ಕಾಂಗ್ರೆಸ್‌ನವರು ಸಾಂವಿಧಾನಿಕ ಮತ್ತು ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನೇ ಅನುಮಾನಿಸುವ ಮೂಲಕ ರಾಹುಲ್‌ಗಾಂಧಿ ಅವರು ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ಇದೀಗ ಕಾಂಗ್ರೆಸ್ ಮುಖಂಡರು ತನ್ನ ಪಕ್ಷದ ವರಿ?ರನ್ನು ಮೆಚ್ಚಿಸುವ ಸಲುವಾಗಿ ಇವಿಎಂ ಸಾಕು, ಬ್ಯಾಲೆಟ್ ಪೇಪರ್ ಬೇಕು ಎನ್ನುವ ಮೂಲಕ ಹೊಸ ನಾಟಕ ಶುರು ಮಾಡಿಕೊಂಡಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹಿಂದೊಮ್ಮೆ ಭಾಷಣ ಮಾಡುವಾಗ ಈ ಹಿಂದೆ ಕಾಂಗ್ರೆಸ್ ಪಕ್ಷ ಹೇಗೆ ಚುನಾವಣೆಗಳನ್ನು ಕಳ್ಳತನದಿಂದ ಗೆಲ್ಲುತ್ತಿತ್ತು ಎಂಬುದನ್ನು ಹೇಳಿದ್ದರು. ಬ್ಯಾಲೆಟ್ ಪೇಪರ್ ಇದ್ದ ದಿನಗಳಲ್ಲಿ ನಮಗೆ ಬೇಕಾದವರಿಗೆ ವೋಟ್ ಗುದ್ದಿ ಚುನಾವಣೆಯನ್ನು ನಡೆಸುತ್ತಿದ್ದೆವು. ಇವಿಎಂ ಬಂದ ಮೇಲೆ ಆ ರೀತಿಯ ಚುನಾವಣೆಗಳನ್ನು ನಡೆಸಲು ಆಗುತ್ತಿಲ್ಲ ಎಂದು ಬಹಿರಂಗವಾಗಿಯೇ ಸತ್ಯವನ್ನು ಒಪ್ಪಿಕೊಂಡಿದ್ದರು.

ಈ ರೀತಿಯ ಪ್ರಸಂಗಗಳು ಕಾಂಗ್ರೆಸ್ ಸರ್ಕಾರದ ಆಲೋಚನೆ ಮತ್ತು ಮನಸ್ಥಿತಿ ಎಂಥದ್ದು ಎನ್ನುವುದಕ್ಕೆ ಉದಾಹರಣೆಯಾಗಿದೆ. ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನ ಉಳಿಸಿ ಎಂದು ದೇಶದ ಜನರ ಮುಂದೆ ನಾಟಕ ಮಾಡುವ ಕಾಂಗ್ರೆಸ್ ಪಕ್ಷ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳುಗೆಡವಲು ಯಾವ ಕಾನೂನುಗಳು ಬೇಕೋ ಆ ಎಲ್ಲಾ ಕಾನೂನುಗಳನ್ನು ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಒಂದೊಂದಾಗೇ ಜಾರಿಗೆ ತರುತ್ತಿದೆ. ಜನರ ಮುಂದೆ ಬಣ್ಣ ಹಚ್ಚದೆಯೇ ನಾಟಕವಾಡುವ ಕಾಂಗ್ರೆಸ್ ಪಕ್ಷ ಒಂದು ಸರ್ಕಾರವಾಗಿ ಬಂದಾಗ ಸಂವಿಧಾನದ ಆಶಯಗಳಿಗೆ ಮಣ್ಣು ಮುಕ್ಕಿಸುವ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೆಲಸ ಮಾಡುತ್ತಿದೆ.
ದೇಶದ ರಾಜಕಾರಣದಲ್ಲಿ ತನ್ನ ಇರುವಿಕೆಯನ್ನೇ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ಹಿಂಬಾಗಿಲ ಮೂಲಕ ಅಧಿಕಾರಕ್ಕೇರುವ ಕನಸನ್ನು ಕಾಣುತ್ತಿದೆ. ಸೋಲುಗಳು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಆ ಪಕ್ಷದ ದೇಶ ವಿರೋಧಿ ಮನಸ್ಥಿತಿ, ಹಿಂದುತ್ವ, ಹಿಂದೂ ಧರ್ಮ ಮತ್ತು ಸಹಬಾಳ್ವೆಯ ಬಗ್ಗೆ ಅವರಿಗಿರುವ ವಿರೋಧದ ಮನಸ್ಥಿತಿ, ರಾಷ್ಟ್ರೀಯತೆ ಮೇಲೆ ಕಾಂಗ್ರೆಸ್ ಪಕ್ಷಕ್ಕಿರುವ ಅಸಡ್ಡೆತನ ಈ ರೀತಿಯ ಕಾನೂನುಗಳನ್ನು ಜಾರಿಗೆ ತರುವುದರ ಹಿಂದೆ ಎದ್ದು ಕಾಣುತ್ತಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ಈ ಮನಸ್ಥಿತಿ ಹೀಗೆಯೇ ಮುಂದುವರೆದರೆ ಮುಂದೊಂದು ದಿನ ಕಾಂಗ್ರೆಸ್ ಎನ್ನುವ ಹೆಸರು ಇತಿಹಾಸದ ಪುಟಗಳನ್ನು ಸೇರುವ ದಿನ ದೂರವಿಲ್ಲ.

ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಕಾಯ್ದೆ, ನಿಯಮಗಳಿಗೆ ತಿದ್ದುಪಡಿ ಮಾಡಿದರೆ ಅದರ ಪ್ರಕಾರ ಮಾಡಬೇಕಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ವಿಧಾನಸಭಾ ಚುನಾವಣಾ ಮತದಾರರ ಪಟ್ಟಿ ಪರಿಗಣಿಸಬೇಕು ಎಂದು ಕೇಂದ್ರದ ಅಥವಾ ರಾಜ್ಯದ ಯಾವುದೇ ನಿಯಮದಲ್ಲೂ ಹೇಳಿಲ್ಲ. ಗ್ಯಾರಂಟಿ ಯೋಜನೆಯ ಜಪದಲ್ಲೇ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಅಭಿವೃದ್ಧಿ, ರಾಜ್ಯದ ಜನರ ಅಭ್ಯುದಯದ ಬಗ್ಗೆ ಮಾತ್ರ ಚಕಾರವೆತ್ತುತ್ತಿಲ್ಲ.
ಸಾಂವಿಧಾನಿಕ ಮತ್ತು ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನು ಅನುಮಾನಿಸುವ ಮತ್ತು ಅವಮಾನಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಕೀಳು ರಾಜಕೀಯ ತರವಲ್ಲ. ಇನ್ನಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹುರುಳಿಲ್ಲದ ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದೇಶದ ರಾಜಕಾರಣದಲ್ಲಿ ತನ್ನ ಇರುವಿಕೆಯನ್ನೇ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ಹಿಂಬಾಗಿಲ ಮೂಲಕ ಅಧಿಕಾರಕ್ಕೇರುವ ಕನಸನ್ನು ಕಾಣುತ್ತಿದೆ. ಸೋಲುಗಳು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಆ ಪಕ್ಷದ ದೇಶ ವಿರೋಧಿ ಮನಸ್ಥಿತಿ, ಹಿಂದುತ್ವ, ಹಿಂದೂ ಧರ್ಮ ಮತ್ತು ಸಹಬಾಳ್ವೆಯ ಬಗ್ಗೆ ಅವರಿಗಿರುವ ವಿರೋಧದ ಮನಸ್ಥಿತಿ, ರಾಷ್ಟ್ರೀಯತೆ ಮೇಲೆ ಕಾಂಗ್ರೆಸ್ ಪಕ್ಷಕ್ಕಿರುವ ಅಸಡ್ಡೆತನ ಈ ರೀತಿಯ ಕಾನೂನುಗಳನ್ನು ಜಾರಿಗೆ ತರುವುದರ ಹಿಂದೆ ಎದ್ದು ಕಾಣುತ್ತಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ಈ ಮನಸ್ಥಿತಿ ಹೀಗೆಯೇ ಮುಂದುವರೆದರೆ ಮುಂದೊಂದು ದಿನ ಕಾಂಗ್ರೆಸ್ ಎನ್ನುವ ಹೆಸರು ಇತಿಹಾಸದ ಪುಟಗಳನ್ನು ಸೇರುವ ದಿನ ದೂರವಿಲ್ಲ.

ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಕಾಯ್ದೆ, ನಿಯಮಗಳಿಗೆ ತಿದ್ದುಪಡಿ ಮಾಡಿದರೆ ಅದರ ಪ್ರಕಾರ ಮಾಡಬೇಕಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ವಿಧಾನಸಭಾ ಚುನಾವಣಾ ಮತದಾರರ ಪಟ್ಟಿ ಪರಿಗಣಿಸಬೇಕು ಎಂದು ಕೇಂದ್ರದ ಅಥವಾ ರಾಜ್ಯದ ಯಾವುದೇ ನಿಯಮದಲ್ಲೂ ಹೇಳಿಲ್ಲ. ಗ್ಯಾರಂಟಿ ಯೋಜನೆಯ ಜಪದಲ್ಲೇ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಅಭಿವೃದ್ಧಿ, ರಾಜ್ಯದ ಜನರ ಅಭ್ಯುದಯದ ಬಗ್ಗೆ ಮಾತ್ರ ಚಕಾರವೆತ್ತುತ್ತಿಲ್ಲ.
ಸಾಂವಿಧಾನಿಕ ಮತ್ತು ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನು ಅನುಮಾನಿಸುವ ಮತ್ತು ಅವಮಾನಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಕೀಳು ರಾಜಕೀಯ ತರವಲ್ಲ. ಇನ್ನಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹುರುಳಿಲ್ಲದ ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Chikmagalur
ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನದ ಹಣತೆ ಹಚ್ಚಿದವರು: ಸಿ.ಟಿ.ರವಿ
 
														ಚಿಕ್ಕಮಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಜಾತೀಯತೆಯ ವಿರುದ್ಧ ಖಡ್ಗವನ್ನು ಹಿಡಿಯಲಿಲ್ಲ. ಬದಲಾಗಿ ಜನರ ಹೃದಯದಲ್ಲಿ ಜ್ಞಾನದ ಹಣತೆಯನ್ನು ಹಚ್ಚಿದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ನಿನ್ನೆ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ವಸ್ತುಗಳು ಪಂಚಭೂತಗಳಿಂದಾಗಿವೆ. ಮನುಷ್ಯ ದೇವರ ಸೃಷ್ಟಿಯಾಗಿದ್ದು, ದೇವರು ಜಾತಿಯನ್ನು ಸೃಷ್ಟಿಸಲಿಲ್ಲ. ಜನ್ಮದಿಂದ ಬ್ರಾಹ್ಮಣನಾಗಿದ್ದರೂ ಗುಣಗ್ರಾಹಿಯಾಗಿರದಿದ್ದರೆ ಆತ ಶೂದ್ರನೇ ಆಗುತ್ತಾನೆ. ಶೂದ್ರನಾಗಿದ್ದು, ವಿದ್ವತ್ತನ್ನು ಗಳಿಸಿದ್ದರೆ ಆತ ಶ್ರೇಷ್ಠ ವಿದ್ವಾಂಸನಾಗುತ್ತಾನೆ ಎಂದು ಹೇಳಿದರು.
ನಾರಾಯಣ ಗುರುಗಳು ಕೆಳಜಾತಿಯಲ್ಲಿ ಹುಟ್ಟಿದ್ದರೂ ಸಂಸ್ಕೃತ, ಮಲಯಾಳಂ, ತಮಿಳು ಮೂಲಕ ಅಪಾರ ಜ್ಞಾನವನ್ನು ಸಂಪಾದಿಸಿ ಬ್ರಹ್ಮಶ್ರೀಗಳಾದರು. ಯಾವುದೇ ಮಹಾನುಭಾವರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಹಾಗೆ ಸೀಮಿತಗೊಳಿಸಿದರೆ ಆ ಜಾತಿಗೆ ಅಪಚಾರ ಮಾಡಿದಂತಾಗುತ್ತದೆ. ದೇವರನಾಡು ಎಂದೇ ಹೆಸರಾದ ಕೇರಳದಲ್ಲಿ ಮತಾಂತರ ಮಾಯಾಜಾಲವಾಗಿ ಹಬ್ಬಿಕೊಂಡಿದ್ದ ಸಂದರ್ಭದಲ್ಲಿ ಕೆಳ ವರ್ಗದವರು ಮತಾಂತರಗೊಳ್ಳದಂತೆ ಪಾರು ಮಾಡಿದವರೇ ನಾರಾಯಣ ಗುರುಗಳು ಎಂದು ತಿಳಿಸಿದರು.

ಶಾಸಕ ಹೆಚ್.ಡಿ.ತಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡ ಸಂಸ್ಕಾರವಂತ ದೇಶ ನಮ್ಮದು. ಶೋಷಿತ ಸಮಾಜದ ಗುರುಗಳು ಬುದ್ಧ, ಬಸವ, ಅಂಬೇಡ್ಕರರಂತೆ ವಿಶ್ವ ಕ್ರಾಂತಿ ಮಾಡಿದರು. ವಿವಿಧತೆಯಲ್ಲಿ ಏಕತೆ ಇರುವ, ಸಂಸ್ಕಾರವಿರುವ ದೇಶವೆಂದರೆ ಅದು ಭಾರತ. ಒಟ್ಟು ಕುಟುಂಬದಲ್ಲಿ ಒಗ್ಗಟ್ಟು, ಸಾಮರಸ್ಯವಿರುತ್ತದೆ ಎಂದು ಕೂಡು ಕುಟುಂಬದ ಬಗ್ಗೆ ತಿಳಿಸಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಸಾಹಿತಿ ಬಿ.ತಿಪ್ಪೇರುದ್ರಪ್ಪ ಉಪನ್ಯಾಸ ನೀಡಿ, ಮಹನೀಯರ ಜೀವನ, ಸಾಧನೆ ಮೆಲುಕು ಹಾಕುವುದರ ಮೂಲಕ ನಮ್ಮ ಬದುಕನ್ನು ಉನ್ನತೀಕರಿಸಿಕೊಳ್ಳುವುದೇ ಆಗಿದೆ. ಭರತ ಭೂಮಿಯಲ್ಲಿ ಸಮಾಜದ ಅನಿಷ್ಠ, ಅಂಟು ಜಾಢ್ಯಗಳಾದ ಜಾತೀಯತೆ, ಅಸ್ಪೃಶ್ಯತೆ, ಅಸಮಾನತೆ, ಸಾಮಾಜಿಕ ಅನ್ಯಾಯ ತುರಿಯಾವಸ್ಥೆಯಲ್ಲಿದ್ದಾಗ ಬಸವ, ಬುದ್ಧ, ಅಂಬೇಡ್ಕರ್ ಅವುಗಳನ್ನು ನಿವಾರಿಸಲು ಶ್ರಮಿಸಿದರು. ಅದೇ ಸಾಲಿನಲ್ಲಿ ನಿಲ್ಲುವವರು ನಾರಾಯಣ ಗುರುಗಳು ಎಂದು ಹೇಳಿದರು.

ಬ್ರಹ್ಮಶ್ರೀ ಎಂದರೆ ಬ್ರಹ್ಮಜ್ಞಾನವನ್ನು ಪಡೆದವರು ಎಂದು ಅರ್ಥ. ಯಾವಾಗ ಜಗತ್ತಿನಲ್ಲಿ ಅಧರ್ಮ, ಅಶಾಂತಿ ತಾಂಡವವಾಡುತ್ತೊ ಆಗ ಜಗತ್ತನ್ನು ಉದ್ಧರಿಸಲು ಮಹಾತ್ಮರು ಜನಿಸುತ್ತಾರೆ. ನಾರಾಯಣ ಗುರುಗಳು ಜನರ ಮನಸ್ಸಿನಲ್ಲಿ ಉತ್ಪತ್ತಿಯಾದ ಜಾತೀಯತೆಯ ಕಸವನ್ನು ಗುಡಿಸುವ ಕೆಲಸ ಮಾಡಿದರು. ವಿಧವೆಯ ಕಣ್ಣೀರನ್ನು ಒರೆಸದ, ಹಸಿದವರಿಗೆ ಅನ್ನವನ್ನು ನೀಡದ ಧರ್ಮ ಧರ್ಮವಲ್ಲ, ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು ಎಂದು ಪ್ರತಿಪಾದಿಸಿ ಶೋಷಿತ ವರ್ಗದವರಿಗೂ ದೇವರಿದ್ದಾನೆ ಎಂದು ತೋರಿಸಿಕೊಡುವ ಮೂಲಕ ಅನೇಕ ದೇವಾಲಯಗಳನ್ನು ನಿರ್ಮಿಸಿದರು.
ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ಅನುಸರಿಸಿ ಅದ್ವೈತ ಗುರು ಎಂದೆನಿಸಿದ್ದಾರೆ. ಯೋಗದಲ್ಲಿ ಪತಂಜಲಿ, ಜ್ಞಾನದಲ್ಲಿ ಶಂಕರ, ಅಹಿಂಸೆಯಲ್ಲಿ ಬುದ್ಧ, ಮಾನವೀಯತೆಯಲ್ಲೂ ಏಸುವಿನಂತಿದ್ದವರು ನಾರಾಯಣ ಗುರುಗಳು ಎಂದು ಹೇಳಿದರು.

ಶ್ರೀ ನಾರಾಯಣ ಗುರು ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ್, ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಗುಣಶೇಖರ್, ಜಿಲ್ಲಾ ಬಿಲ್ಲವ ಸಂಘದ ಮಹಿಳಾ ಅಧ್ಯಕ್ಷರಾದ ಪ್ರಮಿಳಾ ವಿಜಯ, ಜಿಲ್ಲಾ ನಾರಾಯಣ ಗುರು ಸಮಿತಿ ಮಹಿಳಾ ಅಧ್ಯಕ್ಷೆ ಶಶಿಕಲಾ ಅಶೋಕ್, ಕೆ.ಸಿ.ಶಾಂತಕುಮಾರ್, ವಾಸು ಪೂಜಾರಿ, ರಾಜಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
- 
																	   Mysore7 hours ago Mysore7 hours agoಬಾನು ಮುಷ್ತಾಕ್ ಕ್ಷಮೆ ಕೇಳಿದರೆ ಪಿಐಎಲ್ ವಾಪಸ್: ಪ್ರತಾಪ್ ಸಿಂಹ 
- 
																	   Kodagu10 hours ago Kodagu10 hours agoಸೋಮವಾರಪೇಟೆ: ತಾಲೂಕು ಆಸ್ಪತ್ರೆಯ ನರ್ಸ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ 
- 
																	   Mandya2 hours ago Mandya2 hours agoಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ 
- 
																	   Mysore3 hours ago Mysore3 hours agoಅರ್ಧವೃತ್ತಾಕಾರದ ಬೆಂಜ್ ಜೋಡಣೆ ಸಮಾನ ಕಲಿಕೆಗೆ ಪೂರಕ: ಸಂಶೋಧಕ ಸಂಜಯ್ ಸಿಂಗಮಾರನಹಳ್ಳಿ 
- 
																	   Hassan12 hours ago Hassan12 hours agoಮಾಡಾಳು ಗ್ರಾಮದಲ್ಲಿ ಸ್ವರ್ಣಗೌರಮ್ಮ ದೇವಿಯ ಅದ್ದೂರಿ ವಿಸರ್ಜನೆ 
- 
																	   Kodagu4 hours ago Kodagu4 hours agoಸೆ.11 ಕ್ಕೆ “ವಿಷಪೂರಿತ ಹಾವುಗಳು : ಗುರುತಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ತರಬೇತಿ 
- 
																	   Hassan6 hours ago Hassan6 hours agoಹೊಳೆನರಸೀಪುರದಲ್ಲಿ ಪಿತ್ರಾರ್ಜಿತ ಆಸ್ತಿ ವಿವಾದ, ಸುಳ್ಳು ದಾಖಲೆ, ಸುಳ್ಳು ಸಾಕ್ಷಿ : ನಟರಾಜು ಆರೋಪ 
- 
																	   Manglore7 hours ago Manglore7 hours agoಮಂಗಳೂರು: ಎಸ್ಐಟಿ ಕಚೇರಿಗೆ ಆಗಮಿಸಿದ ಕೇರಳದ ಯೂಟ್ಯೂಬರ್ ಮನಾಫ್ 

 
											 
											 
											 
											 
											