Mandya
ಕಾವೇರಿ ಆರತಿ ಹಾಗೂ ಶ್ರೀಂಗಪಟ್ಟಣ ದಸರಾ ಕಾರ್ಯಕ್ರಮ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆಗೆ ಸೂಚನೆ :ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ
ಮಂಡ್ಯ,: ಅಕ್ಟೋಬರ್ 11ರಂದು ಶ್ರೀರಂಗಪಟ್ಟಣದಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮ ಹಾಗೂ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಅರ್ಥ ಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶ್ರೀರಂಗಪಟ್ಟಣ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಪಿಡಿಒಗಳೊಂದಿಗೆ ಚರ್ಚಿಸಿ, ಆಯಾ ಗ್ರಾಮಗಳಲ್ಲಿ ನಡೆಯುವ ಹಬ್ಬಗಳು ಹಾಗೂ ಇತರೆ ಕಾರ್ಯಕ್ರಮಗಳ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರು ಕಾವೇರಿ ಆರತಿಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಕಾವೇರಿ ಆರತಿ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ವ್ಯಾಪಕ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಂದ ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಕರೆತರಲು ಸುಮಾರು 300 ಖಾಸಗಿ ಬಸ್ಗಳ ವ್ಯವಸ್ಥೆ ಮಾಡಲಾಗುವುದು. ಆಯಾ ಗ್ರಾಮ ಪಂಚಾಯಿತಿಗಳಿಗೆ ಬಸ್ಗಳನ್ನು ಕಳುಹಿಸಿ, ಸಾರ್ವಜನಿಕರು ಸುರಕ್ಷಿತವಾಗಿ ಕಾರ್ಯಕ್ರಮಕ್ಕೆ ಆಗಮಿಸಿ ಮರಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾವೇರಿ ಆರತಿ ಕಾರ್ಯಕ್ರಮವು ಜಿಲ್ಲೆಯ ಜನರ ಭಾವನೆ, ನಂಬಿಕೆ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ನಿಕಟವಾಗಿ ಬೆಸೆದುಕೊಂಡಿರುವ ಮಹತ್ವದ ಕಾರ್ಯಕ್ರಮವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಗ್ರಾಮ ಪಂಚಾಯಿತಿ ಮಟ್ಟದಿಂದಲೇ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಶುದ್ಧ ಕುಡಿಯುವ ನೀರು, ಊಟದ ವ್ಯವಸ್ಥೆಗೆ ಆದ್ಯತೆ
ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮೂಲಸೌಕರ್ಯ, ಸ್ವಚ್ಛತೆ ಹಾಗೂ ಇತರೆ ಅಗತ್ಯ ವ್ಯವಸ್ಥೆಗಳಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ಡಬಲ್ ಡೋರ್ ಹೊಂದಿರುವ 20 ಕೆಎಸ್ಆರ್ಟಿಸಿ ಬಸ್ಗಳನ್ನು ಒದಗಿಸುವಂತೆ ಕೆಎಸ್ಆರ್ಟಿಸಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಶ್ರೀರಂಗಪಟ್ಟಣ ದಸರಾ: ಅ.12 ಮತ್ತು 13ರಂದು ಯುವ ಸಂಭ್ರಮ
ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಯುವಕರಿಗಾಗಿ ಅಕ್ಟೋಬರ್ 12 ಮತ್ತು 13ರಂದು ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ‘ಯುವ ಸಂಭ್ರಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಯುವ ಸಂಭ್ರಮದ ಉದ್ಘಾಟನಾ ದಿನವಾದ ಅಕ್ಟೋಬರ್ 12ರಂದು ಸುಮಾರು 60 ಕಲಾ ತಂಡಗಳು ವಿವಿಧ ಸಾಂಸ್ಕೃತಿಕ ಹಾಗೂ ನೃತ್ಯ ಪ್ರದರ್ಶನಗಳನ್ನು ನೀಡಲಿವೆ. ಯುವ ಪ್ರತಿಭೆಗಳಿಗೆ ತಮ್ಮ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾ ತಂಡಗಳ ಸದಸ್ಯರಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು. ವಿಶೇಷವಾಗಿ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅಲ್ಲದೆ, ವಿವಿಧ ಗ್ರಾಮಗಳು ಹಾಗೂ ಪ್ರದೇಶಗಳಿಂದ ಆಗಮಿಸುವ ಕಲಾ ತಂಡಗಳಿಗೆ ಕಾರ್ಯಕ್ರಮದ ಸ್ಥಳಕ್ಕೆ ಬಂದು ತೆರಳಲು ಅನುಕೂಲವಾಗುವಂತೆ ವಿಶೇಷ ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಯುವ ಸಂಭ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಮಂಡ್ಯ ಉಪ ವಿಭಾಗದ ಅಧಿಕಾರಿಗಳಾದ ಶಿವಮೂರ್ತಿ, ಪಾಂಡವಪುರ ಉಪ ವಿಭಾಗದ ಅಧಿಕಾರಿಗಳಾದ ಶ್ರೀನಿವಾಸ್, ತಹಸೀಲ್ದಾರ್ ವಿಶ್ವನಾಥ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಚಿಕ್ಕಮಂಡ್ಯ ಗ್ರಾಮದಲ್ಲಿ ವಿಶೇಷ ನೈರ್ಮಲ್ಯ ಅಭಿಯಾನ – ಸಾರ್ವಜನಿಕ ಜಾಗೃತಿ ಕಾರ್ಯಕ್ರಮ
ಮಂಡ್ಯ: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ‘ಸ್ವಚ್ಛತೆಯೇ ಸೇವೆ–2026’ ಅಭಿಯಾನದ ಅಂಗವಾಗಿ ಮಂಡ್ಯ ತಾಲೂಕು ಗ್ರಾಮಾಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂಡ್ಯ ಗ್ರಾಮದಲ್ಲಿ ವಿಶೇಷ ನೈರ್ಮಲ್ಯ ಅಭಿಯಾನ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಯಿತು.

ಅಭಿಯಾನದಡಿ ಗ್ರಾಮದ ಪ್ರಮುಖ ಬೀದಿಗಳು, ಸಾರ್ವಜನಿಕ ಸ್ಥಳಗಳು ಹಾಗೂ ಚರಂಡಿಗಳಲ್ಲಿದ್ದ ತ್ಯಾಜ್ಯ ಮತ್ತು ಪ್ಲಾಸ್ಟಿಕ್ಗಳನ್ನು ತೆರವುಗೊಳಿಸಲಾಯಿತು. ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಮನೆ ಹಾಗೂ ಅಂಗಡಿಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ರಸ್ತೆಬದಿಯಲ್ಲಿ ಎಸೆಯದೆ, ಹಸಿ ಮತ್ತು ಒಣ ಕಸವನ್ನಾಗಿ ಪ್ರತ್ಯೇಕಿಸಿ ಪಂಚಾಯಿತಿಯ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ನೀಡಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ, ಗ್ರಾಮಗಳ ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಮನೆ ಹಾಗೂ ಅಕ್ಕಪಕ್ಕದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ. ಸರ್ಕಾರದ ನೈರ್ಮಲ್ಯ ಯೋಜನೆಗಳು ಯಶಸ್ವಿಯಾಗಲು ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯ. ಮುಂದಿನ ದಿನಗಳಲ್ಲಿಯೂ ಗ್ರಾಮವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಹಾಗೂ ಸ್ವಚ್ಛತೆಯ ಮಾದರಿ ಗ್ರಾಮವನ್ನಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಶ್ರೀಧರ್ ಮತ್ತು ಮೇನಕ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನಿಲ್ ಕುಮಾರ್, ಜಯದೇವ, ಶಿವಕುಮಾರ್, ಚೆನ್ನೇಗೌಡ, ತಮ್ಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.
Mandya
ಡಾ.ರಾಘವೇಂದ್ರ ಅವರು ರಾಜ್ಯಮಟ್ಟದ ಎನ್ಎಸ್ಎಸ್ ಸೇವಾ ಪ್ರಶಸ್ತಿಗೆ ಆಯ್ಕೆ
ಶ್ರೀರಂಗಪಟ್ಟಣ: ಬಾಬುರಾಯನ ಕೊಪ್ಪಲು ಗ್ರಾಮದ ಡಾ.ರಾಘವೇಂದ್ರ ರವರು ರಾಜ್ಯಮಟ್ಟದ ಪ್ರತಿಷ್ಠಿತ ಎನ್ ಎಸ್ ಎಸ್ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ತಾಲ್ಲೂಕು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಪ್ರಸ್ತುತ ಅವರು ಮೈಸೂರಿನ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಎನ್ಎಸ್ಎಸ್ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ವತಿಯಿಂದ ನೀಡಲಾಗುತ್ತಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ಡಾ. ರಾಘವೇಂದ್ರ ರವರು ತಮ್ಮ ವೃತ್ತಿ ಹಾಗೂ ಪ್ರವೃತ್ತಿಯ ಮೂಲಕ ಸಲ್ಲಿಸಿರುವ ಹಲವಾರು ಸಮಾಜಮುಖಿ ಸೇವೆಗಳು, ಯುವಜನರಲ್ಲಿ ಮೂಡಿಸುತ್ತಿರುವ ಮಾನವೀಯ ಮೌಲ್ಯಗಳು, ಶಿಸ್ತು, ಉತ್ತಮ ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಬೆಳೆಸುವಲ್ಲಿ ಸಲ್ಲಿಸಿರುವ ಸೇವೆಯೇ ಮುಖ್ಯ ಕಾರಣವಾಗಿದೆ.
ಎನ್ಎಸ್ಎಸ್ ಚಟುವಟಿಕೆಗಳು, ಯುವಜನರ ಸಬಲೀಕರಣ, ಸಮಾಜ ಸೇವೆ, ಪರಿಸರ ಕಾಳಜಿ, ರಕ್ತದಾನ, ಆರೋಗ್ಯ ಜಾಗೃತಿ ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಅವರು ಸಲ್ಲಿಸಿರುವ ಸೇವೆಗೆ ಈ ಗೌರವ ಸಂದಿದೆ.
ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಡಾ. ರಾಘವೇಂದ್ರ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಡಾ. ರಾಘವೇಂದ್ರ ಅವರ ಈ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು, ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಶ್ರೀರಂಗಪಟ್ಟಣ ಮತ್ತು ಮೈಸೂರು ಭಾಗದ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಶ್ರೀರಂಗಪಟ್ಟಣ: ಬಾಬುರಾಯನ ಕೊಪ್ಪಲು ಗ್ರಾಮದ ಡಾ.ರಾಘವೇಂದ್ರ ರವರು ರಾಜ್ಯಮಟ್ಟದ ಪ್ರತಿಷ್ಠಿತ ಎನ್ ಎಸ್ ಎಸ್ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ತಾಲ್ಲೂಕು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಸ್ತುತ ಅವರು ಮೈಸೂರಿನ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಎನ್ಎಸ್ಎಸ್ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ವತಿಯಿಂದ ನೀಡಲಾಗುತ್ತಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ಡಾ. ರಾಘವೇಂದ್ರ ರವರು ತಮ್ಮ ವೃತ್ತಿ ಹಾಗೂ ಪ್ರವೃತ್ತಿಯ ಮೂಲಕ ಸಲ್ಲಿಸಿರುವ ಹಲವಾರು ಸಮಾಜಮುಖಿ ಸೇವೆಗಳು, ಯುವಜನರಲ್ಲಿ ಮೂಡಿಸುತ್ತಿರುವ ಮಾನವೀಯ ಮೌಲ್ಯಗಳು, ಶಿಸ್ತು, ಉತ್ತಮ ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಬೆಳೆಸುವಲ್ಲಿ ಸಲ್ಲಿಸಿರುವ ಸೇವೆಯೇ ಮುಖ್ಯ ಕಾರಣವಾಗಿದೆ.
ಎನ್ಎಸ್ಎಸ್ ಚಟುವಟಿಕೆಗಳು, ಯುವಜನರ ಸಬಲೀಕರಣ, ಸಮಾಜ ಸೇವೆ, ಪರಿಸರ ಕಾಳಜಿ, ರಕ್ತದಾನ, ಆರೋಗ್ಯ ಜಾಗೃತಿ ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಅವರು ಸಲ್ಲಿಸಿರುವ ಸೇವೆಗೆ ಈ ಗೌರವ ಸಂದಿದೆ.
ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಡಾ. ರಾಘವೇಂದ್ರ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಡಾ. ರಾಘವೇಂದ್ರ ಅವರ ಈ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು, ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಶ್ರೀರಂಗಪಟ್ಟಣ ಮತ್ತು ಮೈಸೂರು ಭಾಗದ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
Mandya
ಪ್ರಕೃತಿ ಉಳಿಸುವುದು ದೊಡ್ಡ ಸವಾಲು : ಪುರುಷೋತ್ತಮ ಬಿಳಿಮಲೆ ಕಳವಳ
ಮಂಡ್ಯ: ಇತ್ತೀಚಿನ ದಿನಗಳಲ್ಲಿ ಮರಗಳನ್ನು ಕಡಿಯುವುದು ಸುಲಭ ಆದರೆ ನದಿ, ಪ್ರಕೃತಿ ಉಳಿಸುವುದು ದೊಡ್ಡ ಸವಾಲಾಗಿದೆ ಹಾಗಾಗಿ ಮರ ಬೆಳೆಸುವ ಮನೋಭಾವ ಎಲ್ಲರಲ್ಲಿಯೂ ಮೂಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ಪಟ್ಟರು.

ಮಂಡ್ಯ ನಗರದಲ್ಲಿರುವ ಗಾಂಧಿ ಭವನದಲ್ಲಿ ಜೈ ಕರ್ನಾಟಕ ಪರಿಷತ್ತು ವತಿಯಿಂದ ಆಯೋಜಿಸಿದ್ದ ವೃಕ್ಷಾಂತರಂಗ ಕೃತಿ ಲೋಕಾರಪಣೆ ಪರಿಸರದ ಹೂವ ವಿಶೇಷ ಕವಿಗೋಸ್ತಿ ಅಧಿಕೃತ ಮರುವಿನ್ಯಾಸಗೊಳಿಸಲಾದ ಅಂತರ್ಜಾಲ ಲೋಕಾರ್ಪಣೆ ಹಾಗೂ ತ್ರಿವಿಧ ಸಂಭ್ರಮದ ಸಾಹಿತ್ಯಿಕ ಮಹೋತ್ಸವ ಸಮಾರಂಭದಲ್ಲಿ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ನಾಡಿನಲ್ಲಿ ಕನ್ನಡ ಉಳಿಸಲು ಸಾವಿರಾರು ಸಂಘಟನೆಗಳಿವೆ ಆದರೂ ಕನ್ನಡಿಗರಿಗೆ ಕೆಲಸಗಳು ಸಿಗುತ್ತಿಲ್ಲ ಬಿಹಾರಿಗಳು ಸೇರಿದಂತೆ ಹೊರಗಿನಿಂದ ಬಂದವರು ಬೆಂಗಳೂರಿನಂತಹ ನಗರಗಳಲ್ಲಿ ವಿವಿಧ ಕೆಲಸಗಳನ್ನು ಮಾಡುತ್ತಿರುವುದನ್ನು ನಾವು ನೋಡುತ್ತೇವೆ ಕನ್ನಡ ಭಾಷೆ ಉಳಿವು ಮತ್ತು ಪರಿಸರ ಸಂರಕ್ಷಣೆಗೆ ಹೋರಾಡುವುದು ಅಗತ್ಯ ಕಾಡು ಉಳಿದರೆ ನಾಡು ಉಳಿಯುತ್ತದೆ ಎಂಬುವುದು ಇತ್ತೀಚಿನ ದಿನಗಳಲ್ಲಿ ದೂರಾಗುತ್ತಿರುವುದು ವಿಷಾದನೀಯ ಎಂದು ಕಳಬಳ ವ್ಯಕ್ತಪಡಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಪ್ರಕೃತಿ ಏನೆಲ್ಲ ಕೊಟ್ಟಿದೆ ಎಲ್ಲವನ್ನೂ ಎಸ್ ನಾರಾಯಣ್ ಅವರ ವೃಕ್ಷಾಂತರಂಗ ಕೃತಿಯಲ್ಲಿ ನೋಡಬಹುದು ಒಂದು ಮರ 37 ಹೆಚ್ಚು ನಡತೆಯನ್ನು ಹೊಂದಿದೆ ಎನ್ನುವುದನ್ನು ಮತ್ತು ಏನೆಲ್ಲಾ ಸಮಾಜಕ್ಕೆ ಕೊಡುತ್ತದೆ ಎನ್ನುವುದನ್ನು ತಿಳಿಸಿದ್ದಾರೆ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಶಾಸಕ ರವಿಕುಮಾರ್ ಗೌಡ ಗಣಿಗ, ಮಂಡ್ಯ ಜಿಲ್ಲೆಯಲ್ಲಿ ಕೆಲವು ಜನರು ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ ಏಕೆಂದರೆ ನೀರಿನಲ್ಲಿ ಫ್ಲೋರೈಡ್ ಅಂಶವಿದೆ ಜಿಲ್ಲೆಯ ಕೆಂಪು ಮಣ್ಣಿನಲ್ಲಿಯೇ ನೀರು ಕಲಿಸುತವಾಗಿದೆ ಎಂದರೆ ಏನು ಹೇಳುವುದು ಪರಿಸರ ನಾಶದಿಂದ ಸಮಸ್ಯೆಗಳು ತಲೆದೋರಿವೆ ಎಂದರು.
ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಡಾ. ಪ್ರದೀಪ್ ಕುಮಾರ್ ಹೆಬ್ರಿ ಆಶಯ ನುಡಿಗಳ ನಾಡಿದರು, ಸಾಹಿತಿ ತೈಲೂರು ವೆಂಕಟಕೃಷ್ಣ ಮಾತನಾಡಿದರು, ಪುಸ್ತಕ ಮನೆ ಎಮ್ ಅಂಕೆ ಗೌಡ ಅಧ್ಯಕ್ಷತೆ ವಹಿಸಿದ್ದರು.
ಸಾಹಿತಿ ಎಚ್ಎಸ್ ಮುದ್ದೇಗೌಡ ಕವಿಗೋಷ್ಠಿಯ ಅಧ್ಯಕ್ಷತೆಯಲ್ಲಿ ಕವಿಗಳು ಹಲವು ಕವನಗಳನ್ನು ವಾಚಿಸಿದರು.
ಗಾಂಧಿ ಭವನದ ಗೋಡೆಗಳಿಗೆ ವಿವಿಧ ಮರಗಳ ಬಗ್ಗೆ ಗೋಡೆ ಬರಹ ಲಕ್ಸ್ ಗಳನ್ನು ಅಳವಡಿಸಲಾಗಿತ್ತು. ಸಭಿಕರು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಬಿ ಜಯಪ್ರಕಾಶ್ ಗೌಡ, ಕಸಾಪ ಮಾಜಿ ಅಧ್ಯಕ್ಷ ಎಂವಿ ಧರಣೇಂದ್ರಯ್ಯ, ಪರಿಷತ್ ರಾಜ್ಯಾಧ್ಯಕ್ಷ ಡಾ. ಎಸ್ ನಾರಾಯಣ್, ಸುನಂದ ಜಯರಾಮ್, ಇಂಡವಾಳು ಚಂದ್ರಶೇಖರ್ , ಕನ್ನಿಕಾ, ವಿನಯ್ ಕುಮಾರ್, ಲಂಕೇಶ್ ಮಂಗಲ, ಸತೀಶ್ ಜವರೇಗೌಡ, ಪುಟ್ಟಸ್ವಾಮಿ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.
-
Chikmagalur39 minutes agoಫೇಸ್ಬುಕ್ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ
-
State21 hours agoರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ಅಲರ್ಟ್: ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಸಾಧ್ಯತೆ
-
Hassan22 hours agoವರ್ಡ್ ರೆಕಾರ್ಡ್ ಸೇರಿದ ಹಾಸನದ ಹಲಸು
-
Chamarajanagar22 hours agoಆನೆಗೆ ಲಾರಿ ಗುದ್ದಿಸಲು ಯತ್ನ: ಚಾಲಕನಿಗೆ 5 ಸಾವಿರ ರೂ. ದಂಡ
-
State12 hours agoಜವಳಿ ಕ್ಷೇತ್ರಕ್ಕೆ ಹೊಸ ಚೈತನ್ಯ: ₹4,000 ಕೋಟಿ ವೆಚ್ಚದ ಜವಳಿ ಮತ್ತು ಉಡುಪು ನೀತಿ 4.0!!
-
Hassan1 hour agoಪೌರ ಕಾರ್ಮಿಕರ ಸೇವೆ ಶ್ಲಾಘನೀಯ: ಶಾಸಕ ಸಿಮೆಂಟ್ ಮಂಜು
-
Chikmagalur9 hours agoಆಲ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ 35 ಲಕ್ಷ ನಿವ್ವಳ ಲಾಭ
-
Hassan21 hours agoಕ್ಯೂ. ಆರ್. ಕೋಡ್ ಬಳಕೆ: ವಿದ್ಯಾರ್ಥಿಗಳಿಗೆ ಸುಲಭವಾಗಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಳ್ಳುವ ಸೌಲಭ್ಯ
