Hassan
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
ಹಾಸನ : ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಕೈಯಲ್ಲಿ ಲಾಂಗ್, ಮಚ್ಚು, ದೊಣ್ಣೆ ಹಿಡಿದು ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ಆಡುವಳ್ಳಿ ಬಡಾವಣೆಯಲ್ಲಿ ನಡೆದಿದೆ.
ಕೃಷ್ಣೇಗೌಡ ಕುಟುಂಬ ಸದಸ್ಯರ ಮೇಲೆ ಬಲರಾಮ ಹಾಗೂ ಕುಟುಂಬಸ್ಥರಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಆಸ್ತಿ ವಿಚಾರ ಮಾತನಾಡಲು ಗವೇನಹಳ್ಳಿ ಗ್ರಾಮದ ಕೃಷ್ಣೇಗೌಡನನ್ನು ಆಡುವಳ್ಳಿಗೆ ಕರೆಸಿದ್ದ ಬಲರಾಮ, ಈ ವೇಳೆ ಬಾಬು, ದಿಲೀಪ್, ಮಮತಾ ಎಂಬುವವರ ಜೊತೆಗೂಡಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಹಲ್ಲೆ ನಡೆಸುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಭಾರೀ ವೈರಲ್ ಆಗಿದೆ.
ಇನ್ನು ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಕೃಷ್ಣೇಗೌಡ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Hassan
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ
50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,
ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,
*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*
ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,
ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,
ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,
ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,
ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು
Hassan
MLA ಸಿಮೆಂಟ್ ಮಂಜು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್: ಕಾನೂನು ಕ್ರಮಕ್ಕೆ ಆಗ್ರಹ
ಸಕಲೇಶಪುರ: ಆಲೂರು, ಕಟ್ಟಾಯ -ಸಕಲೇಶಪುರ,ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿರುವ ವಿರುದ್ಧ ಕಾನೂನು ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಹಾಸನ ಜಿಲ್ಲಾಡಳಿತದ ವತಿಯಿಂದ ಶನಿವಾರದಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಶಾಸಕರು ಅಧಿಕಾರಿಗಳು ಆಗಮಿಸಿದ್ದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಸಿಮೆಂಟ್ ಮಂಜು ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡಿದ್ದರು. ಈ ಭಾಷಣದ ತುಣುಕನ್ನು Hassan News ಹಾಸನ್ ನ್ಯೂಸ್ ಫೇಸ್ಬುಕ್ ಪೇಜ್ ನಲ್ಲಿ ಬಿತ್ತರಿಸಲಾಗಿತ್ತು. ಸದರಿ ಪೇಜ್ ನಲ್ಲಿ vasanth kumar ಎಂಬ ಹೆಸರಿನ ಫೇಸ್ ಬುಕ್ ಖಾತೆಯುಳ್ಳ ವ್ಯಕ್ತಿಯು ಶಾಸಕರ ವಿರುದ್ಧ “ಸಿಮೆಂಟ್ ಮಂಜಣ್ಣ ಹುಟ್ಟು ಕಳ್ಳನ್ ಮಗ” ಎಂದು ಕಾಮೆಂಟ್ ಮಾಡಿದ್ದು ಈ ರೀತಿಯ ಕಾಮೆಂಟ್ ನಿಂದ ಶಾಸಕರ ಘನತೆಗೆ ಧಕ್ಕೆ ಯಾವುದರ ಜೊತೆಗೆ ಕ್ಷೇತ್ರದ ಜನತೆಗೆ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಗೆ ನೋವುಂಟು ಮಾಡಿದ್ದು ಕಾಮೆಂಟ್ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಬಂಧಿಸಿ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರ ಠಾಣೆಗೆ ಬಾಳ್ಳುಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ. ಎಸ್. ಶಿವಕುಮಾರ್ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬೆಳಗೋಡು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಮುಖಂಡರಾದ ನವೀನ್ ಶೆಟ್ಟಿ. ಕಿಟ್ಟಿ ಪುಟ್ಟರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Hassan
ದೆಹಲಿ ನೋಟಿಸ್, ಕಾರ್ಟಿಯರ್ ವಾಚ್ ವಿವಾದದ ಬಗ್ಗೆ ಆತ್ಮವಿಶ್ವಾಸದ ನಿಲುವು ಘೋಷಿಸಿದ ಡಿಸಿಎಂ ಡಿಕೆಶಿ
ಹಾಸನ: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯವಿರಲಿಲ್ಲ. ನಮಗೆ ಕಿರುಕುಳ ನೀಡಲು ಈ ಸಮನ್ಸ್ ನೀಡಲಾಗಿದೆ. ಇದು ಸರಿಯಲ್ಲ, ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಹಾಸನದಲ್ಲಿ ಇಂದು ಈ ಕುರಿತು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ವಿಭಾಗದ ದೆಹಲಿ ಪೊಲೀಸರು ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ಇದು ನಮಗೆ ಆಘಾತ ತಂದಿದೆ. ನನಗೆ ಹಾಗೂ ಸಹೋದರ ಸುರೇಶ್ ಅವರಿಗೆ ನೋಟೀಸ್ ನೀಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಹಿಂದೆ ಇಡಿ ನಮಗೆ ಸಮನ್ಸ್ ನೀಡಿತ್ತು ಎಂದರು.

ನಾವು ಮೊದಲಿನಿಂದಲೂ ಇಡಿ ತನಿಖೆಗೆ ಸಹಕಾರ ನೀಡಿ ಎಲ್ಲಾ ದಾಖಲೆಗಳನ್ನು ಒದಗಿಸಿದ್ದೇವೆ. ಇದು ನಮ್ಮ ಪಕ್ಷದ ಸಂಸ್ಥೆ, ಕಾಂಗ್ರೆಸಿಗರಾಗಿ ಆ ಸಂಸ್ಥೆಗೆ ಬೆಂಬಲ ನೀಡಲು ದೇಣಿಗೆ ನೀಡುವುದರಲ್ಲಿ ತಪ್ಪಿಲ್ಲ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಈ ಸಂಸ್ಥೆ ಕಷ್ಟಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ನೆರವು ನೀಡಿದ್ದು, ನನ್ನಂತೆ ಅನೇಕರು ದೇಣಿಗೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಇಡಿ ಚಾರ್ಜ್ ಶೀಟ್ ಹಾಕಿದ್ದು, ಅದರಲ್ಲಿ ನಮ್ಮ ಹೆಸರನ್ನು ಸೇರಿಸಿರಲಿಲ್ಲ. ನಮ್ಮ ಬಳಿ ಹೇಳಿಕೆ ಪಡೆದು, ಬಿಟ್ಟಿದ್ದರು. ಹೀಗಿರುವಾಗ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಮ್ಮ ಎಲ್ಲಾ ವ್ಯವಹಾರ ಪಾರದರ್ಶಕವಾಗಿದೆ. ನಾವು ನ್ಯಾಯಲಯದಲ್ಲಿ ಹೋರಾಟ ಮುಂದುವರೆಸುತ್ತೇವೆ. ನಾವು ಸರಿಯಾಗಿ ತೆರಿಗೆ ಕಟ್ಟಿದ್ದು, ನಮ್ಮ ಹಣವನ್ನು ನಾವು ಇಷ್ಟಪಡುವ ಯಾರಿಗೆ ಬೇಕಾದರೂ ನೀಡಬಹುದು” ಎಂದು ಹೇಳಿದರು.

ನನ್ನ ವಿರುದ್ಧ ಪಿಎಎಲ್ಎ ಪ್ರಕರಣ ದಾಖಲಿಸಿ, ಆರೋಪ ಪಟ್ಟಿ ಸಲ್ಲಿಸಿದ್ದರು. ಇಷ್ಟಾದ ಮೇಲೂ ಯಾವ ಕಾರಣಕ್ಕೆ ಸಮನ್ಸ್ ನೀಡಿದ್ದಾರೆ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಗೊಂದಲ ಮೂಡಿಸುವುದು ಇದರ ಉದ್ದೇಶ ” ಎಂದು ತಿಳಿಸಿದರು.
ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ, ನಾನು ಬಗ್ಗುವುದಿಲ್ಲ
“ನನಗೆ ಶುಕ್ರವಾರ ನೋಟೀಸ್ ಸಿಕ್ಕಿದ್ದು, ಇದನ್ನು ವಕೀಲರ ಜತೆ ಚರ್ಚೆ ಮಾಡುತ್ತೇನೆ. ನನ್ನ ಸಹೋದರ ಕೂಡ ಸಂಸದನಾಗಿದ್ದಾಗ ಈ ಸಂಸ್ಥೆಗೆ ದೇಣಿಗೆ ನೀಡಿದ್ದ. ದೆಹಲಿ ಪೊಲೀಸರು ಡಿ.19 ರ ಒಳಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ. ನಾನು ಸಮಯ ನೋಡಿಕೊಂಡು ಒಂದು ದಿನ ಹೋಗಿ, ಅವರ ನೋಟೀಸ್ ಗೆ ಯಾವ ರೀತಿ ಉತ್ತರ ನೀಡಬೇಕೋ ನೀಡುತ್ತೇನೆ. ಅವರು ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ ನಾನು ಬಗ್ಗುವುದಿಲ್ಲ” ಎಂದು ಹೇಳಿದರು
-
Mysore24 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Mysore33 minutes agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Mysore24 hours agoಕಳಲೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್
-
Hassan24 hours agoಕ್ರೀಡೆಯು ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು : ಡಾ. ಅಕ್ಷಯ್ ಎಸ್. ಗೌಡ.
-
Chikmagalur37 minutes agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Chikmagalur54 minutes agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
State2 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Mysore6 hours agoಕೊಲ್ಕತ್ತಾದ ಮೈಸೂರು ಉದ್ಯಾನಕ್ಕೆ 10ನೇ ಚಾಮರಾಜ ಒಡೆಯರ್ ನಾಮಫಲಕ ಅಳವಡಿಸಲು ಪತ್ರ
