Mysore
ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಮೇವು ಮೇಯುತ್ತಿರುವಾಗ ಘಟನೆ ಸಂಭವಿಸಿದೆ. ಕಾಡು ಹಂದಿಗಳನ್ನು ಬೇಡೆಯಾಡಲು ಕಿಡಿಗೇಡಿಗಳು ಸಿಡಿಮದ್ದನ್ನು ಅಳವಡಿಸಿದ್ದಾರೆ ಎಂಬುದನ್ನು ತಿಳಿಯದೇ ರೈತ ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್‌ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ವೇಳೆ ಸಿಡಿಮದ್ದು ಹಠಾತ್ತನೇ ಸಿಡಿದ ಪರಿಣಾಮ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ರೈತ ಚನ್ನನಂಜೇಗೌಡ ಕಂಗಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಗಂಭೀರ ಗಾಯಗೊಂಡಿರುವ ಹಸುವಿಗೆ ಸೂಕ್ತ ಪರಿಹಾರ ನೀಡಬೇಕು. ಸಿಡಿಮದ್ದನ್ನು ಅಳವಡಿಸಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Mysore
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.
ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.
ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mysore
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರು: ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಮಲ ನೆನಪು ಸಮಾರಂಭದಲ್ಲಿ ಆರ್. ರಘು ಕೌಟಿಲ್ಯ ಅವರ ಭೂಮಿ ಪುತ್ರಿ, ಅಂಕಣಗಳ ಬೆಳಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ರಂಗಭೂಮಿ ಕಲಾವಿದೆ ಪದ್ಮಶ್ರೀ ಬಿ.ಜಯಶ್ರೀ ಅವರು ಭೂಮಿಪುತ್ರಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪುರುಷ ಸಮಾಜ ಹೆಣ್ಣನ್ನು ಪ್ರೀತಿಯಿಂದ ನೋಡುವುದಿಲ್ಲ. ನಿರ್ಲಕ್ಷ್ಯ ವಹಿಸುತ್ತಾರೆ. ಈ ಪುಸ್ತಕ ಓದಿದಾಗ ಪುರುಷ ಸಮಾಜಕ್ಕೆ ಹೆಂಡತಿಯನ್ನು ಪ್ರೀತಿಸಬೇಕು ಅನಿಸುತ್ತದೆ ಎಂದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ವೃತ್ತಿ ಹಾಗೂ ಸಮಾಜಸೇವೆಯಲ್ಲೂ ರಘು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಣ್ಣ ಸಮುದಾಯದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.
ಇಡೀ ರಾಜ್ಯದಲ್ಲಿ ಒಬಿಸಿ ಸಮುದಾಯದ ಜನಸಂಖ್ಯೆಯೇ ಬಹಳ ದೊಡ್ಡದಿದೆ. ನಮ್ಮ ರಾಜ್ಯದಲ್ಲಿ ಸಣ್ಣ ಪುಟ್ಟ ಸಮುದಾಯಗಳು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರುತ್ತವೆ. ಪ್ರಬಲ ಸಮುದಾಯಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಒಬಿಸಿ ಸಮುದಾಯದ ಸಂಖ್ಯೆಯೇ ದೊಡ್ಡದಿದೆ. ಸಣ್ಣ ಸಣ್ಣ ಸಮುದಾಯಗಳನ್ನು ಒಟ್ಟಾಗಿ ಸೇರಿಸಿದರೆ ಒಬಿಸಿ ಸಮುದಾಯಗಳ ಸಂಖ್ಯೆಯೇ ಹೆಚ್ಚಾಗಿದೆ. ನಾನು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವನಾಗಿದ್ದೇನೆ. ಸಣ್ಣ ಸಣ್ಣ ಒಬಿಸಿ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
.
ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಗಾಯಕಿ ಸಂಗೀತಾ ಕಟ್ಟಿ, ಕೋಮಲ ಹರ್ಷಕುಮಾರ ಗೌಡ, ಮಡ್ಡೀಕೆರೆ ಗೋಪಾಲ, ಮಾಜಿ ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.
Mysore
ಸಾವಿರಾರೂ ಪರಿಸರ ಪ್ರೇಮಿಗಳಿಂದ ಮೌನ ಪ್ರತಿಭಟನೆ

ಮೈಸೂರು: ಇಲ್ಲಿನ ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಮರಗಳ ಹನನ ನಡೆಸಿರುವುದನ್ನು ಖಂಡಿಸಿ ಶುಕ್ರವಾರ ಮೌನ ಪ್ರತಿಭಟಿಸಲಾಯಿತು.
ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ ವತಿಯಿಂದ ಕರ್ನಾಟಕ ಪೊಲೀಸ್ ಅಕಾಡೆಮಿ ಬಳಿ ಮರಗಳು ಹನನ ಗೊಂದ ಸ್ಥಳದಲ್ಲಿ. ಸಾವಿರಾರೂ ಪರಿಸರ ಪ್ರೇಮಿಗಳು ಸೇರಿ ಕಪ್ಪು ಪಟ್ಟಿ ಧರಿಸಿ, ಮೊಂಬತ್ತಿ ಬೆಳಗುವ ಮೂಲಕ ಅಮಾನುಷವಾಗಿ ಕಡಿಯಲ್ಪಟ್ಟ 40 ಮರಗಳಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಗಿಡಗಳನ್ನು ನೆಟ್ಟು ಬೆಳೆಸಬೇಕಾದ ಅರಣ್ಯ ಇಲಾಖೆ 40 ಮರಗಳನ್ನು ಕಡಿಯಲು ಅನುಮತಿ ನೀಡಿದೆ. ಈ ರಸ್ತೆಯ ಅಗಲೀಕರಣವೇ ಅಗತ್ಯವಿಲ್ಲ. ಅನಿವಾರ್ಯವಾಗಿದ್ದರೆ ಲಲಿತ್ ಮಹಲ್ ಹತ್ತಿರದ ಎಟಿಐ ಮುಂಭಾಗದಲ್ಲಿ ಮಾಡಿರುವಂತೆ ಮರಗಳನ್ನು ಉಳಿಸಿಕೊಂಡು ರಸ್ತೆ ಅಗಲೀಕರಣ ಮಾಡಬಹುದಿತ್ತು ಎಂಬುವುದು ಪರಿಸರ ಪ್ರೇಮಿಗಳ ಒತ್ತಾಯದ ಮಾತಾಗಿದೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu19 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu16 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore11 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ