Hassan
ಪತ್ನಿಯ ಸಾವಿನಲ್ಲೂ ಸಾರ್ಥಕತೆ ಮೆರೆದ ಪತಿ

ಹಾಸನ : ಪತ್ನಿಯ ಸಾವಿನಲ್ಲೂ ಸಾರ್ಥಕತೆ ಮೆರೆದ ಪತಿ
ಪತ್ನಿಯ ಅಂಗಾಗಗಳನ್ನು ದಾನ ಮಾಡಿದ ಪತಿ
ಜ.9 ರಂದು ಪತಿ ಮಂಜೇಗೌಡ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದ ಮತ್ತೊಂದು ಬೈಕ್
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಮ್ಯಾ (28)
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಹಿರಿಸಾವೆ ಹೋಬಳಿ, ಕಾವಲುಬಾರೆ ಗ್ರಾಮದ ಬಳಿ ನಡೆದಿದ್ದ ಘಟನೆ
ಹೊನ್ನಶೆಟ್ಟಿಹಳ್ಳಿ ಗ್ರಾಮದ ಮಂಜೇಗೌಡ ಅವರ ಪತ್ನಿ ರಮ್ಯಾ
ತೀವ್ರವಾಗಿ ಗಾಯಗೊಂಡಿದ್ದ ರಮ್ಯಾ ಅವರನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿದ್ದ ಮಂಜೇಗೌಡ
ತಲೆಗೆ ತೀವ್ರವಾದ ಗಾಯವಾಗಿದ್ದರಿಂದ ನಿಷ್ಕ್ರಿಯಗೊಂಡಿದ್ದ ಮೆದುಳು
ರಮ್ಯಾ ಅಂಗಾಗಳನ್ನು ದಾನ ಮಾಡಿದ ಪತಿ ಮಂಜೇಗೌಡ ಹಾಗೂ ಪೋಷಕರು
ಆದಿಚುಂಚನಗಿರಿ ಆಸ್ಪತ್ರೆ ಅಂಗಾಂಗಗಳನ್ನು ದಾನ ಮಾಡಿದ ಪೋಷಕರು
Hassan
ಬಿರುಗಾಳಿ ಸಹಿತ ಮಳೆಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ.
ಈ ಘಟನೆ ಸಕಲೇಶಪುರ ತಾಲ್ಲೂಕಿನ, ಹೆಗ್ಗದ್ದೆ ಗ್ರಾಮದ ಬಳಿ ಶಿರಾಡಿಘಾಟ್ ರಸ್ತೆ ಎನ್‌ಎಚ್- 75 ರಲ್ಲಿ ನಡೆದಿದೆ. ಮೊದಲೇ ಭೂಕುಸಿತವಾಗಿದ್ದರಿಂದ ಒಂದು ಬದಿ ರಸ್ತೆ ಸಂಚಾರ ಬಂದ್ ಮಾಡಿದ್ದ ಅಧಿಕಾರಿಗಳು ಇಟಾಚಿ ಮೂಲಕ ನಡೆಯುತ್ತಿದ್ದ ಮಣ್ಣು ತೆರವು ಕಾರ್ಯಾಚರಣೆ ಮಾಡುತ್ತಿದ್ದರು. ಹೀಗಾಗಿ ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು.
ಈ ವೇಳೆ ಮತ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದ ಭೂಮಿ ಮರಗಳ ಸಮೇತ ಕುಸಿದು ರಸ್ತೆ ಪೂರ್ತಿ ಜಖಂಗೊಂಡಿದೆ. ಇನ್ನೂ ವಾಹನಗಳ ಸಂಚಾರವನ್ನು ಬಂದ್ ಮಾಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.
Hassan
ಮರಿ ಸತ್ತು ಮೂರು ದಿನವಾದರೂ ಸ್ಥಳ ಬಿಟ್ಟು ಕದಲದ ತಾಯಿಯಾನೆ

ಅರೇಹಳ್ಳಿ: ತನ್ನ ಮರಿ ಸತ್ತು ಮೂರು ದಿನ ಕಳೆದರೂ ತಾಯಿಯಾನೆ ತಾನು ಹೋದಲೆಲ್ಲಾ ಮೃತ ಮರಿಯಾನೆಯನ್ನು ತನ್ನೊಂದಿಗೆ ಎಳೆದುಕೊಂಡು ಹೋಗುತ್ತಿರುವ ಮನಕಲಕುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕ್‌ನಳ್ಳಿ ಎಸ್ಟೇಟ್ ಬಳಿ ನಡೆದಿದೆ.
ಘಟನೆ ಹಿನ್ನೆಲೆ:
ಕಳೆದ ಶನಿವಾರ ಗರ್ಭಿಣಿ ಹೆಣ್ಣಾನೆ ಮರಿಯಾನೆಗೆ ಜನ್ಮ ನೀಡಿದೆ. ಆದರೆ ಹುಟ್ಟುವ ವೇಳೆ ಮರಿಯು ಸ್ಥಳದಲ್ಲೆ ಮೃತಪಟ್ಟಿದೆ. ತಾಯಿ ಆನೆ ತನ್ನ ಮರಿ ಜೀವಂತವಾಗಿದೆ ಎಂದು ತಿಳಿದು ಕಾಲಿನಿಂದ ಒದ್ದು ಬದುಕಿಸುವ ಪ್ರಯತ್ನ ಮಾಡಿದರೂ ಸಹ ಮೃತ ಮರಿ ಮೇಲೇಳದಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.
ಜೋರು ಮಳೆ ಸುರಿಯುತ್ತಿರುವುದರ ಜೊತೆಗೆ ಸತ್ತ ಮರಿಯನ್ನು ಎಳೆದುಕೊಂಡು ಹೋಗುತ್ತಿರುವುದು ಎಂಥ ಕಲ್ಲು ಮನಸ್ಸಿನವರಿಗೂ ಕರುಳು ಚುರುಕ್ ಎನ್ನುವಂತಿದೆ ಈ ದೃಶ್ಯಾವಳಿ. ತನ್ನ ಕರುಳ ಕುಡಿ ಇನ್ನೂ ಬದುಕಿದೆ ಎಂಬ ಭ್ರಮೆಯಲ್ಲಿರುವ ಮಾತೃ ಹೃದಯ ಯಾರನ್ನೂ ಕೂಡ ಹತ್ತಿರ ಹೋಗಲು ಬಿಡುತ್ತಿಲ್ಲ. ಭಾನುವಾರವಷ್ಟೆ ಅರೇಹಳ್ಳಿ ಸಮೀಪದ ಕೆಸಗುಲಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮರಿಯೊಂದಿಗೆ ತಾಯಿಯಾನೆಯೂ ಸಹ ಮೃತಪಟ್ಟಿತ್ತು. ಈ ಘಟನೆ ಜನಮಾನಸದಲ್ಲಿ ಮಾಸುವ ಮುನ್ನವೇ ಮತ್ತೊಂದು ಮರಿ ಮೃತಪಟ್ಟಿರುವುದು ಪ್ರಾಣಿ ಪ್ರಿಯರಿಗೆ ಅತೀವ ನೋವನ್ನುಂಟುಮಾಡಿದೆ.
“ಕಳೆದೆರಡು ದಿನಗಳ ಹಿಂದೆ ಮೃತಪಟ್ಟ ಮರಿಯೊಂದಿಗೆ ತಾಯಿಯಾನೆ ತೆರಳುತ್ತಿರುವುದು ಬೇಸರ ತಂದಿದೆ. ಹೀಗಾಗಿ ಸಿಬ್ಬಂದಿಗಳನ್ನು ಹತ್ತಿರ ಹೋಗಲು ಬಿಡುತ್ತಿಲ್ಲ. ಮರಿ ವಾಸನೆ ಬಂದರೆ ತಾಯಿಯಾನೆ ತನ್ನಿಂತಾನೆ ಬೇರೆಯಾಗುತ್ತದೆ” ಎಂದು
ಬೇಲೂರಿನ ಆರ್‌ಎಫ್‌ಒ ಅಧಿಕಾರಿ ಯತೀಶ್ ತಿಳಿಸಿದ್ದಾರೆ.
Hassan
ಹಾಸನ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರರನ್ನು ಸನ್ಮಾನಿಸಿದ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ

ಹಾಸನ: ಈ ಜಿಲ್ಲೆಯಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿರುವ ಹಾಗೂ ಸಮಾಜ ಸೇವಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಮಾಜಿ ಕಾರ್ಯ ನಿರ್ವಾಹಕ ಸದಸ್ಯರಾಗಿದ್ದ ಸಿದ್ದೇಶ್ ನಾಗೇಂದ್ರ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಸನ್ಮಾಸಿದ್ದಾರೆ.
ಹಾಸನದ ಬಿಜೆಪಿ ಕಚೇರಿಯಲ್ಲಿ ಇಂದು ಸಿದ್ಧೇಶ್ ನಾಗೇಂದ್ರ ಅವರಿಗೆ ಸನ್ಮಾನಿಸಿ ಗೌರವ ಪುರಸ್ಕಾರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷರಾದ ಮಮತಾ ಪಾಟೀಲ್, ನಿರ್ದೇಶಕರಾದ ಮಯೂರಿ ಲೋಕೇಶ್, ಡಿ. ವಿ.ಮದನ್, ಹೆಚ್. ಕೆ.ಮಿಥುನ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮೀ ಲೋಕೇಶ್, ಖಜಾಂಚಿ ಶೈಲಾ ಮದನ್, ನಿರ್ಧೇಶಕರಾದ ಭಾಮಿನಿಹೇಮಂತ್, ವೀಣಾ ದೇವರಾಜ್, ಡಿ. ಸಿ.ಅನೂಸೂಯ, ಸುಶೀಲ ಪಾಲನೇತ್ರ, ಸವಿತಾ ಭೂಷಣ್ ಮುಖಂಡರಾದ ನೇತ್ರವತಿ ಮಂಜುನಾಥ್ ಇತರರು ಉಪಸ್ಥಿತರಿದ್ದರು.
-
Uncategorized24 hours ago
ಸೆಕ್ಯುರಿಟಿ ಸಿಬ್ಬಂದಿಗಳಿಂದ ಯುವಕನ ಮೇಲೆ ಹಲ್ಲೆ ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ವಿರುದ್ದ ಎಫ್ಐಆರ್ ದಾಖಲು
-
Hassan11 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
State24 hours ago
SSC ಯಿಂದ 14 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಯಾರು ಅರ್ಹರು?
-
Kodagu9 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya5 hours ago
ಕೆ.ಆರ್.ಪೇಟೆ ದೇವಿರಮ್ಮಣ್ಣಿ ಕೆರೆಯಲ್ಲಿ ಬಲೆಗೆ ಬಿದ್ದ ಬಂಗಾರ ಬಣ್ಣದ ಗೌರಿ ಮೀನು
-
Chikmagalur12 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu12 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ
-
Chikmagalur10 hours ago
ಮರ ಬಿದ್ದು ಬೈಕ್ ಸವಾರ ದು*ರ್ಮರಣ