Connect with us

Mysore

ಕಾನೂನು ಶಿಕ್ಷಣಕ್ಕೆ ಹೊಸ ಆಯಾಮ – ಮೈಸೂರಿನಲ್ಲಿ MIT ಲಾ ಕಾಲೇಜಿನ 5 ವರ್ಷದ BBA LL.B. ಪ್ರವೇಶಾತಿ ಆರಂಭ

Published

on

ಮೈಸೂರು: ಪ್ರತಿಷ್ಠಿತ ಮಹಾರಾಜ ಎಜುಕೇಶನ್ ಟ್ರಸ್ಟ್ (ರಿ) ವತಿಯಿಂದ ಹಳೆ ಕೇಸರೆಯ ಎಂಐಟಿಎಂ ಕ್ಯಾಂಪಸ್‌ನಲ್ಲಿ ನೂತನವಾಗಿ ಆರಂಭಗೊಂಡಿರುವ MIT Law ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ 5 ವರ್ಷಗಳ ಸಂಯೋಜಿತ BBA LL.B. ಕೋರ್ಸ್‌ಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು MIT ಉಪಾಧ್ಯಕ್ಷ ಹೇಮಂತ್ ಕುಮಾರ್ ತಿಳಿಸಿದರು.


ನಂಜನಗೂಡು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ, ಪಿಎಚ್‌ಡಿ ಪದವೀಧರರು ಹಾಗೂ ಶಿಕ್ಷಣ ತಜ್ಞರ ತಂಡದ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಮಹಾರಾಜ ಎಜುಕೇಶನ್ ಟ್ರಸ್ಟ್, ಗುಣಮಟ್ಟದ ಮತ್ತು ವೃತ್ತಿಪರ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಉದ್ದೇಶದಿಂದ MIT ಲಾ ಕಾಲೇಜನ್ನು ಆರಂಭಿಸಿದೆ ಎಂದು ತಿಳಿಸಿದರು.

MIT ಲಾ ಕಾಲೇಜು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಮಾನ್ಯತೆ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಸಂಯೋಜನೆ ಹಾಗೂ ಕರ್ನಾಟಕ ಸರ್ಕಾರದ ಅನುಮೋದನೆ ಹೊಂದಿದ್ದು, ಆಧುನಿಕ ಮೂಲಸೌಕರ್ಯಗಳೊಂದಿಗೆ ಗುಣಮಟ್ಟದ ಕಾನೂನು ಶಿಕ್ಷಣವನ್ನು ಕೈಗೆಟುಕುವ ಶುಲ್ಕದಲ್ಲಿ ನೀಡುವ ಉದ್ದೇಶ ಹೊಂದಿದೆ.

ಪ್ರವೇಶಕ್ಕೆ ಅರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 5 ವರ್ಷಗಳ ಸಂಯೋಜಿತ BBA LL.B. ಪದವಿ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಎಂಐಟಿ ಸಂಸ್ಥೆ ಕಾರ್ಯದರ್ಶಿ YT ಕೃಷ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಅಭಿವೃದ್ಧಿಗೆ ಪೂರಕವಾಗುವಂತೆ ಕ್ಯಾಂಪಸ್‌ನಲ್ಲಿಯೇ ಸುರಕ್ಷಿತ ವಸತಿ ನಿಲಯ, ವೈ-ಫೈ ಸೌಲಭ್ಯ, ಆರೋಗ್ಯಕರ ಆಹಾರ, ಸುಸಜ್ಜಿತ ಜಿಮ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

100ಕ್ಕೂ ಹೆಚ್ಚು ಬಸ್‌ಗಳ ಮೂಲಕ ಮೈಸೂರು ಸೇರಿದಂತೆ ಮಂಡ್ಯ, ಚಾಮರಾಜನಗರ, ಪಾಂಡವಪುರ, ಮಳವಳ್ಳಿ, ಬನ್ನೂರು, ಕೆ.ಆರ್. ಪೇಟೆ, ಕೆ.ಆರ್. ನಗರ, ಕೆ.ಆರ್.ಎಸ್., ಹುಣಸೂರು, ನಂಜನಗೂಡು, ಕೊಳ್ಳೇಗಾಲ, ಎಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ಗುಂಡ್ಲುಪೇಟೆ, ನಾಗಮಂಗಲ, ಅಕ್ಕಿಹೆಬ್ಬಾಳು, ಕಿಕ್ಕೇರಿ, ಮಿಲ್ಕ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಸುರಕ್ಷಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

MIT Institute of Naturopathy and Yogic Sciences & Hospital ನಲ್ಲಿ BNYS ಕೋರ್ಸ್‌ಗೆ ಪ್ರವೇಶಾತಿ ಪ್ರಾರಂಭ ಮಾಡಲಾಗುತ್ತಿದೆ ಅಂತ ವಿವರಿಸಿದ್ರು.

ಗುಣಮಟ್ಟದ ಶಿಕ್ಷಣದೊಂದಿಗೆ ಆರೋಗ್ಯ ಕ್ಷೇತ್ರದ ಸಮಕಾಲೀನ ಅಗತ್ಯಗಳಿಗೆ ತಕ್ಕಂತಹ ಜ್ಞಾನ, ಕೌಶಲ್ಯ ಮತ್ತು ವೃತ್ತಿಪರ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದ ಮಹಾರಾಜ ಎಜುಕೇಶನ್ ಟ್ರಸ್ಟ್ (ರಿ), ಮೈಸೂರು ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಿದೆ. ಇದರ ಅಂಗವಾಗಿ MIT Institute of Naturopathy and Yogic Sciences & Hospital ಸಂಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಇಲ್ಲಿ BNYS – Bachelor of Naturopathy and Yogic Sciences ಪದವಿ ಕೋರ್ಸ್‌ಗೆ ಪ್ರವೇಶಾತಿ ಪ್ರಾರಂಭವಾಗಿದೆ.

ಪಿಎಚ್‌.ಡಿ. ಪದವಿ ಹೊಂದಿರುವ ಶಿಕ್ಷಣ ತಜ್ಞರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯು ಸೈದ್ಧಾಂತಿಕ ಶಿಕ್ಷಣದ ಜೊತೆಗೆ ಪ್ರಾಯೋಗಿಕ ಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಕ್ಲಿನಿಕಲ್ ತರಬೇತಿಗೆ ವಿಶೇಷ ಆದ್ಯತೆ ನೀಡುತ್ತಿದೆ. ನೈಸರ್ಗಿಕ ಚಿಕಿತ್ಸೆ, ಯೋಗ ವಿಜ್ಞಾನ, ಧ್ಯಾನ, ಸಮಗ್ರ ಆರೋಗ್ಯ ನಿರ್ವಹಣೆ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ವೈಜ್ಞಾನಿಕ ಅರಿವು ಮೂಡಿಸುವುದು ಕೋರ್ಸ್‌ನ ಪ್ರಮುಖ ಉದ್ದೇಶವಾಗಿದೆ.

ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ದೊರೆಯುವಂತೆ ಸುಸಜ್ಜಿತ ಪ್ರಯೋಗಾಲಯಗಳು, ಯೋಗ ಮತ್ತು ಧ್ಯಾನ ಸಭಾಂಗಣಗಳು, ಚಿಕಿತ್ಸಾ ಉಪಕರಣಗಳು ಹಾಗೂ ಕ್ಲಿನಿಕಲ್ ತರಬೇತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಪ್ರವೇಶಾತಿಗಾಗಿ ಸಂಪರ್ಕಿಸಲು 7204017455,

ಸುದ್ದಿಗೋಷ್ಠಿಯಲ್ಲಿ ಮಹಾರಾಜ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಡಾ.ಜಿ. ಹೇಮಂತ್ ಕುಮಾರ್, ಎಂಐಟಿ ಜಿಲ್ಲೆಯ ಕಾರ್ಯದರ್ಶಿಗಳಾದ ಡಾ. ವೈ.ಟಿ. ಕೃಷ್ಣೇಗೌಡ, ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿಕಿರಣ್, ಸವಿತಾ ಆನಂದ್ ಸೇರಿದಂತೆ ಉಪಸ್ಥಿತರಿದ್ದರು.

ನಂಜನಗೂಡು ವರದಿ ಮಹದೇವಸ್ವಾಮಿ ಪಟೇಲ್

Continue Reading

Mysore

ಮೂರು ವರ್ಷದ ಹೆಣ್ಣು ಹುಲಿ ಸಾ*ವು

Published

on

ಮೈಸೂರು: ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮೂರು ವರ್ಷದ ಹೆಣ್ಣು ಹುಲಿ ಮೃತಪಟ್ಟಿರುವ ಘಟನೆ ನಡೆದಿದೆ.


ಗಟ್ಟವಾಡಿ ಗ್ರಾಮದ ಕೆರೆ ಪಕ್ಕದ ಬಯಲಿನಲ್ಲಿ ಹುಲಿಯ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತ ಹುಲಿ ಸುಮಾರು ಮೂರು ವರ್ಷ ಪ್ರಾಯದ್ದಾಗಿದ್ದು, ಇತ್ತೀಚೆಗೆ ತಾಯಿಯಿಂದ ಬೇರ್ಪಟ್ಟು ಕಾಡಿನಿಂದ ಹೊರಬಂದಿರಬಹುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಮತ್ತೊಂದು ಹುಲಿಯೊಂದಿಗೆ ನಡೆದ ಕಾದಾಟದಲ್ಲಿ ಗಾಯಗೊಂಡು, ಆಹಾರ ಮತ್ತು ನೀರು ಸಿಗದೆ ನರಳಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹುಲಿಯ ದೇಹದ ಮೇಲಿನ ಗಾಯಗಳ ಆಧಾರದ ಮೇಲೆ ಸಾವಿನ ನಿಖರ ಕಾರಣ ತಿಳಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕೌವಲಂದೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಮರಣೋತ್ತರ ಪರೀಕ್ಷೆ ಹಾಗೂ ಇತರೆ ವೈಜ್ಞಾನಿಕ ಪರೀಕ್ಷೆಗಳ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

Continue Reading

Mysore

ಕಲಬುರಗಿಯಲ್ಲಿ ಸಿದ್ದರಾಮಯ್ಯ ಪುತ್ಥಳಿ ತೆರವು ಖಂಡಿಸಿ ನಂಜನಗೂಡಿನಲ್ಲಿ ಪ್ರತಿಭಟನೆ

Published

on

ನಂಜನಗೂಡು: ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ಥಳಿಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ ನಂಜನಗೂಡಿನಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ ನಡೆಯಿತು. ನಗರದಲ್ಲಿ ಪ್ರತಿಭಟನೆ ನಡೆಸಿದ ಅಭಿಮಾನಿಗಳು ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿ, ತೆರವುಗೊಳಿಸಿರುವ ಪುತ್ಥಳಿಯನ್ನು ಕೂಡಲೇ ಪುನರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಅವರ ಪುತ್ಥಳಿ ಮತ್ತೆ ಸ್ಥಾಪಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಅಭಿಮಾನಿಗಳು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

Mysore

FIR ದಾಖಲಾದ ಬೆನ್ನಲ್ಲೇ ಪ್ರತಾಪ್ ಸಿಂಹ ಪ್ರತಿಕ್ರಿಯೆ

Published

on

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟಿ. ನರಸೀಪುರದಲ್ಲಿ ದಾಖಲಾಗಿರುವ ಎರಡು ಎಫ್‌ಐಆರ್‌ಗಳ ವಿಚಾರವಾಗಿ ಇದೀಗ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಇನ್ಸ್‌ಪೆಕ್ಟರ್‌ರಿಂದಲೇ ಪ್ರಚೋದನೆ ನಡೆದಿದ್ದು, ತಮ್ಮ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿರುವ ಪ್ರತಾಪ್ ಸಿಂಹ, ತಾವು ಸಂವಿಧಾನದ ಅಡಿಯಲ್ಲೇ ಮಾತನಾಡಿದ್ದು, ಕಾನೂನಾತ್ಮಕವಾಗಿಯೇ ಹೋರಾಟ ನಡೆಸುವುದಾಗಿ ಹೇಳಿದ್ದಾರೆ. ಇದೇ ವೇಳೆ, ತಮ್ಮ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಆರೋಪದ ಪ್ರಕರಣದ ಬಗ್ಗೆಯೂ ಅವರು ಸ್ಪಷ್ಟನೆ ನೀಡಿದ್ದಾರೆ.

ಟಿ. ನರಸೀಪುರ ಗಣೇಶೋತ್ಸವದ ಶೋಭಾಯಾತ್ರೆ ವಿವಾದ ಇದೀಗ ರಾಜಕೀಯ ವಾಕ್ಸಮರಕ್ಕೆ ತಿರುಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಈಗ ಎರಡು ಎಫ್‌ಐಆರ್‌ಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೊದಲ ಪ್ರಕರಣದಲ್ಲಿ ಪ್ರಚೋದನಕಾರಿ ಭಾಷಣ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಆರೋಪಗಳು ದಾಖಲಾಗಿದ್ದರೆ, ಇದೀಗ ಜಾತಿ ನಿಂದನೆ ಆರೋಪದಡಿ ಮತ್ತೊಂದು ಪ್ರಕರಣ ದಾಖಲಾಗಿದೆ. ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಾಪ್ ಸಿಂಹ, “ಪ್ರಚೋದನೆ ನೀಡಿದ್ದು ಇನ್ಸ್‌ಪೆಕ್ಟರ್, ಆದರೆ ನನ್ನ ಮೇಲೆ ಎಫ್‌ಐಆರ್ ಹಾಕಲಾಗಿದೆ” ಎಂದು ಹೇಳಿದ್ದಾರೆ. ತಮ್ಮ ವಿರುದ್ಧ ಯಾರು ದೂರು ನೀಡಿದ್ದಾರೆ ಎಂಬುದು ಗೊತ್ತಿದೆ ಎಂದಿರುವ ಅವರು, ತಾವು ಸಂವಿಧಾನದ ಅಡಿಯಲ್ಲೇ ಮಾತನಾಡುವುದಾಗಿ ತಿಳಿಸಿದ್ದಾರೆ.

ನೀಲಿ ಶಾಲು ಹಾಗೂ ದಲಿತ ಸಂಘಟನೆಗಳ ಪ್ರತಿಭಟನೆ ಕುರಿತು ಮಾತನಾಡಿರುವ ಪ್ರತಾಪ್ ಸಿಂಹ, ಅಂಬೇಡ್ಕರ್ ಅವರ ವಿಚಾರಧಾರೆ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಅಂಬೇಡ್ಕರ್ ಎಲ್ಲರಿಗೂ ಸೇರಿದವರು, ತಾವು ದಲಿತ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇದೇ ವೇಳೆ, “ಅನ್ಯಾಯವಾದ ಜಾಗದಲ್ಲಿ ದನಿ ಎತ್ತಿ, ಒಳ್ಳೆಯ ವಿಚಾರಕ್ಕೆ ದನಿ ಎತ್ತಿ, ನಾವು ನಿಮ್ಮ ಜೊತೆ ನಿಲ್ಲುತ್ತೇವೆ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.ಪ್ರದೀಪ್ ಈಶ್ವರ್ ವಿರುದ್ಧವೂ ವಾಗ್ದಾಳಿಇನ್ನು ತಮ್ಮ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ನೀಡಿರುವ ಹೇಳಿಕೆಗಳಿಗೂ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಪ್ರದೀಪ್ ಈಶ್ವರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಪ್ರದೀಪ್ ಈಶ್ವರ್‌ರಂತಹವರಿಗೆ ಮಾಧ್ಯಮದವರು ಯಾಕೆ ಪ್ರತಿಕ್ರಿಯೆ ಕೇಳುತ್ತಾರೆ ಎಂಬುದು ಗೊತ್ತಿಲ್ಲ” ಎಂದು ಹೇಳಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋದ ವಿಚಾರವನ್ನು ಉಲ್ಲೇಖಿಸಿರುವ ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ.

Continue Reading

Trending

error: Content is protected !!