Chamarajanagar
ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಎ.ಆರ್.ಕೃಷ್ಣಮೂರ್ತಿ
 
																								
												
												
											ಯಳಂದೂರು: ತಾಲೂಕು ಸಮೀಪದ ಸಂತೇಮರಹಳ್ಳಿಯ ಜೆಎಸ್‌ಎಸ್ ವಿದ್ಯಾಸಂಸ್ಥೆ ಆವರಣದಲ್ಲಿ ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ಯಳಂದೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಗಿಡಕ್ಕೆ ನೀರೆರೆಯುವುದರ ಮೂಲಕ ಶಾಸಕ ಎ. ಆರ್. ಕೃಷ್ಣಮೂರ್ತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿ ಜೀವನದಲ್ಲಿ ಕ್ರೀಡೆ ಒಂದು ಮಹತ್ವದ ಭಾಗ, ಕ್ರೀಡೆಯಿಂದ ಆರೋಗ್ಯ ವೃದ್ಧಿಸುತ್ತದೆ, ಆಗಾಗಿ ಮಕ್ಕಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಬಿಇಒ ಮಾರಯ್ಯ, ಪಿಎಸ್‌ಐ ತಾಜುದ್ದೀನ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಮಹೇಶ್ ಅಮ್ಮನಪುರ, ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಮಂಜುನಾಥ್, ಬಿಆರ್‌ಸಿ ಸಂಪನ್ಮೂಲ ಅಧಿಕಾರಿ ರೇಚಣ್ಣ, ತಾಲ್ಲೂಕು ಪ್ರಾ,ಶಾ. ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಣ್ಣ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಮುರುಳೀಧರ್, ಶಿವಲಂಕಾರಿ, ಶಾಂತರಾಜು, ಜೆಎಸ್‌ಎಸ್ ಶಾಲಾ ಶಿಕ್ಷಕರು, ಕ್ರೀಡಾಸಕ್ತರು ಉಪಸ್ಥಿತರಿದ್ದರು.
Chamarajanagar
ಯಳಂದೂರು: ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಶತೋತ್ತರ ದಶಮಾನೋತ್ಸವ
 
														ಯಳಂದೂರು: ಪಟ್ಟಣದ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳು ಹಾಗೂ ಅಕ್ಷರ ದಾಸೋಹ ಕೇಂದ್ರದ ವತಿಯಿಂದ ರಾಜಗುರುತಿಲಕ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಶತೋತ್ತರ ದಶಮಾನೋತ್ಸವ (110ನೇ ಜಯಂತಿ) ಆಚರಿಸಲಾಯಿತು.’
ಬೆಳಗ್ಗೆ 9 ಗಂಟೆಗೆ ಪೂಜ್ಯ ರಾಜೇಂದ್ರ ಶ್ರೀಗಳವರ ಭಾವಚಿತ್ರ ಮೆರವಣಿಗೆಗೆ ವೈದ್ಯರಾದ ಶ್ರೀ ಶ್ರೀಕಂಠಮೂರ್ತಿಯವರು ಚಾಲನೆ ನೀಡಿದರು. ಮೆರವಣಿಗೆಯು ಯಳಂದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೊರಟು ಕಾಲೇಜನ್ನು ತಲುಪಿತು. ಆನಂತರ ಸಭಾ ಕಾರ್ಯಕ್ರಮ ಆರಂಭವಾಯಿತು.
ಕಾರ್ಯಕ್ರಮವನ್ನು ಕೆಸ್ತೂರಿನ ಶ್ರೀ ಪಟ್ಟದ ಮಠದ ಶ್ರೀ ತೋಂಟದಾರ್ಯ ಸ್ವಾಮಿಗಳವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಸಂದೇಶವನ್ನು ನೀಡುತ್ತಾ ಪೂಜ್ಯ ರಾಜೇಂದ್ರ ಶ್ರೀಗಳವರು ನಾಡಿಗೆ ಮತ್ತು ದೇಶಕ್ಕೆ ಅಪಾರವಾದ ಸೇವೆಯನ್ನು ಸಲ್ಲಿಸಿದ್ದಾರೆ. ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಅನ್ನ ದಾಸೋಹವನ್ನು ಮಾಡಿದ್ದಾರೆ. ದೊಡ್ಡ ಸಂಸ್ಥೆಯನ್ನು ನಿರ್ಮಾಣ ಮಾಡಿದ್ದಾರೆಂದು ತಿಳಿಸಿದರು.

ಜೆಎಸ್‌ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಶ್ರೀ ರೇವಣ್ಣ ಸ್ವಾಮಿಯವರು ಮಾತನಾಡುತ್ತಾ ರಾಜೇಂದ್ರ ಶ್ರೀಗಳವರನ್ನು ಹತ್ತಿರದಿಂದ ನೋಡಿದ ಸೌಭಾಗ್ಯ ನನ್ನದಾಗಿದೆ. ಶ್ರೀಗಳವರು ವಸತಿ ನಿಲಯಗಳಿಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ವಿಚಾರಿಸಿದ್ದರು. ಅವರ ವ್ಯಕ್ತಿತ್ವವನ್ನು ಎಷ್ಟು ವರ್ಣಿಸಿದರು’ ಸಾಲದೆಂದು ತಿಳಿಸಿದರು.
ಗೌಡಹಳ್ಳಿಯ ಶ್ರೀ ವಿರಕ್ತ ಮಠದ ಶ್ರೀ ಮರಿತೋಂಟದಾರ್ಯ ಸ್ವಾಮಿಗಳವರು ದಿವ್ಯ ಸಂದೇಶವನ್ನು ನೀಡುತ್ತಾ ರಾಜೇಂದ್ರ ಶ್ರೀಗಳವರು ಶಿಕ್ಷಣ ಸಂಸ್ಥೆಗಳನ್ನು, ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಮೂಲಕ ಮನೆ ಮನಗಳ ದೀಪವಾಗಿದ್ದಾರೆ. ಈ ಸಂಸ್ಥೆಯಲ್ಲಿ ಓದುತ್ತಿರುವ ನೀವೆಲ್ಲರೂ ಚೆನ್ನಾಗಿ ವಿದ್ಯಾಭ್ಯಾಸವನ್ನು ಪಡೆದು ಗೌರವ ತರಬೇಕು ಎಂದು ಹೇಳಿದರು.
ಮೈಸೂರಿನ ಜೆಎಸ್ಎಸ್ ಮಹಿಳಾ ಕಾಲೇಜಿನ ಕನ್ನಡ ಅಧ್ಯಾಪಕರಾದ ಶ್ರೀ ಎಚ್.ಎಸ್. ಸಿದ್ದಮಲ್ಲಿಕಾರ್ಜುನ ಅವರು ನುಡಿನಮನವನ್ನು ಸಲ್ಲಿಸುತ್ತಾ ನಮ್ಮ ಪರಂಪರೆಗೆ ವಿಶಿಷ್ಟ ಬಾಷ್ಯವನ್ನು ಬರೆದ ರಾಜೇಂದ್ರ ಶ್ರೀಗಳವರನ್ನು ನೆನೆಯುವುದು ಪುಣ್ಯದ ಕೆಲಸವಾಗಿದೆ. ನಮ್ಮೆಲ್ಲರ ಅಂತರಾಳ ಅವರು ನೆಲೆಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ಸಲ್ಲಿಸಿದ್ದಾರೆಂದು ಅವರ ಸೇವೆಯನ್ನು ಸ್ಮರಿಸಿದರು.
ಕಾರಾಪುರದ ಶ್ರೀ ವಿರಕ್ತ ಮಠದ ಶ್ರೀ ಬಸವರಾಜ ಸ್ವಾಮಿಗಳು ಒಡೆಯರು ಅವರು ಆಶೀರ್ವಚನವನ್ನು ದಯಪಾಲಿಸುತ್ತಾ ರಾಜೇಂದ್ರ ಶ್ರೀಗಳವರು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣವೆಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಕರಾದ ದುಗ್ಗಟ್ಟಿ ಶ್ರೀ ಪಿ. ವೀರಭದ್ರಪ್ಪ ಅವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಕುಮಾರಿ ಕುಮುದವಲ್ಲಿ ಮತ್ತು ತಂಡದವರು ಪ್ರಾರ್ಥಿಸಿದರು. ಗಣ್ಯರೆಲ್ಲರನ್ನು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ವಿ. ಚಂದ್ರಕಲಾ ಅವರು ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಎಚ್.ಎಸ್. ಅವರು ಎಲ್ಲರಿಗೂ ವಂದಿಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀ ವಿಶ್ವನಾಥ್ ಎಲ್ ಅವರು ನಿರೂಪಿಸಿದರು. ಶಿಕ್ಷಕರು ಉಪನ್ಯಾಸಕರು, ವಿದ್ಯಾರ್ಥಿನಿಯರು, ಶ್ರೀಮಠದ ಭಕ್ತರು ಭಾಗವಹಿಸಿದ್ದರು.
Chamarajanagar
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ : ನೊಂದಣಿಗೆ ಜಿಲ್ಲಾಧಿಕಾರಿ ಮನವಿ
 
														ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15ರಂದು ನಡೆಯಲಿದ್ದು, ಇದರ ಅಂಗವಾಗಿ ಸೈಕಲ್ ಜಾಥವನ್ನು ಸೆ. 15ರಂದು ಬೆಳಿಗ್ಗೆ 6.30 ಗಂಟೆಗೆ ಜಿಲ್ಲಾಡಳಿತ ಭವನದ ಮುಂಭಾಗದಿಂದ ಹಮ್ಮಿಕೊಳ್ಳಲಾಗಿದೆ.
ಸೈಕಲ್ ಜಾಥಾದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿ, ನೌಕರರು ಸೇರಿದಂತೆ ಎಲ್ಲರೂ ಭಾಗವಹಿಸಬಹುದಾಗಿದೆ.

ಸೈಕಲ್ ಜಾಥಾದಲ್ಲಿ ಭಾಗವಹಿಸುವವರು https://forms.gle/TB6urg2Xn6hPzQtw6 ಈ ಲಿಂಕ್ ಮೂಲಕ ಸೆಪ್ಟೆಂಬರ್ 13ರ ಸಂಜೆ 5 ಗಂಟೆಯೊಳಗೆ ನೊಂದಾಯಿಸಿಕೊಳ್ಳಬೇಕು. ಬನ್ನಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನನ್ನ ಮತ ನನ್ನ ಹಕ್ಕು ಎಂಬ ಮಹತ್ವದ ಆಶಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Chamarajanagar
ಯಳಂದೂರು: ತಾಲೂಕು ನಾಯಕ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
 
														ಯಳಂದೂರು: ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಯಳಂದೂರು ತಾಲ್ಲೂಕಿನ ನಾಯಕ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಾಷ್ಕರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ತಾಲ್ಲೂಕು ನಾಯಕ ಮಂಡಳಿ ಅಧ್ಯಕ್ಷರಾದ ಮುರುಳಿಕೃಷ್ಣರವರು ನೆರವೇರಿಸಿದರು. ನಂತರ ಮಂಡಳಿಯ ಪದಾಧಿಕಾರಿಗಳು ಹಾಗೂ ಮುಖಂಡರು ಶ್ರೀ ಮಹರ್ಷಿ ವಾಲ್ಮೀಕಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು.
ಎಂಟು ಬೀದಿಯ ಯಜಮಾನರಾದ ಮೂರ್ತಿ ರವರು ಮಾತನಾಡಿ ನಮ್ಮ ಸಮುದಾಯದ ವಿದ್ಯಾರ್ಥಿಗಳು ಚನ್ನಾಗಿ ಓದಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು, ಪೋಷಕರು ಬೇಗ ಮದುವೆ ಮಾಡಬೇಡಿ,ಅವರಿಗೆ ಆಸ್ತಿ ಮಾಡುವ ಬದಲು, ವಿದ್ಯಾವಂತರನ್ನಾಗಿ ಮಾಡುವ ಮೂಲಕ ಅವರನ್ನೇ ಆಸ್ತಿಯನ್ನಾಗಿ ಮಾಡಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ,ಪಿ ಯು ಸಿ ಹಾಗೂ ಪದವಿಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಂಘದ ನೆನಪಿನ ಕಾಣಿಕೆ ನೀಡಿ,ನಗದು ಬಹುಮಾನ ವಿತರಿಸಿ ಗೌರವಿಸಲಾಯಿತು.
ಶಿಕ್ಷಕರು ಹಾಗೂ ಅತ್ಯುತ್ತಮ ನಿರೂಪಕರಾದ ರಂಗನಾಥ್ ರವರು ನಿರೂಪಣೆ ಮಾಡಿ ವಿದ್ಯಾರ್ಥಿಗಳಿಗೆ ಕೇಲವು ಕಿವಿ ಮಾತುಗಳನ್ನು ಹೇಳಿದರು.ಕಲಾವಿದರಾದ ಗಣಿಗನೂರು ಸುರೇಶ್ ರವರು ರಸ ಮಂಜರಿ ಕಾರ್ಯಕ್ರಮ ನಡೆಸಿ ಎಲ್ಲಾರನ್ನು ರಂಜಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ನಾಯಕ ಮಂಡಳಿ ಗೌರವ ಅಧ್ಯಕ್ಷರು ರಾಚನಾಯಕ, ಕಾರ್ಯದರ್ಶಿ ವೆಂಕಟಾಚಲ,ಖಜಾಂಚಿ ಉಮೇಶ್,,ಪಟ್ಟಣ ಪಂಚಾಯತಿ ಸದಸ್ಯರು ಮಹೇಶ್, ರಂಗನಾಥ್, ಮಾಜಿ ಸದಸ್ಯರು ಭೀಮಪ್ಪ, ಮುಖಂಡರುಗಳಾದ ಮಹೇಶ್, ಮಣಿಗಾರ್ ರಂಗನಾಥ್, ಸೇರುಗಾರ್ ಬಿಳಿಗಿರಂಗನಾಯಕ, ಮಂಜು, ಬಂಗಾರ ನಾಯಕ,ಮದ್ದೂರು ಬಂಗಾರು, ಕಂದಹಳ್ಳಿ ಮಹೇಶ್ ಕುಮಾರ್,ಚಂಗಚಹಳ್ಳಿ ಮಹದೇವಸ್ವಾಮಿ, ಗುಂಬಳ್ಳಿ ರಾಜಣ್ಣ, ಕಿಟ್ಟಿ, ಮದ್ದೂರು ರಾಮಚಂದ್ರು,ವರದ ನಾಯಕ, ಸಮುದಾಯದ ವಿವಿಧ ಗ್ರಾಮಗಳ ಯಜಮಾನ್ರು,ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
- 
																	   Mysore24 hours ago Mysore24 hours agoಅರ್ಧವೃತ್ತಾಕಾರದ ಬೆಂಜ್ ಜೋಡಣೆ ಸಮಾನ ಕಲಿಕೆಗೆ ಪೂರಕ: ಸಂಶೋಧಕ ಸಂಜಯ್ ಸಿಂಗಮಾರನಹಳ್ಳಿ 
- 
																	   Mysore10 hours ago Mysore10 hours agoರಾಜಕೀಯ ಪಕ್ಷಗಳು ಜನಕಲ್ಯಾಣದ ಪರ್ಯಾಯ ಶಕ್ತಿ: ಡಾ.ಬಿಜೆವಿ 
- 
																	   Manglore4 hours ago Manglore4 hours agoಆರ್ಥೋಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ‘ಸ್ಕೈವಾಕರ್’ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲಭ್ಯ 
- 
																	   Mandya24 hours ago Mandya24 hours agoಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ 
- 
																	   Kodagu6 hours ago Kodagu6 hours agoಚನ್ನಪಟ್ಟಣದಲ್ಲಿ ಅಪಘಾತ: ಕೊಡಗಿನ ದಂಪತಿ ದುರ್ಮರಣ 
- 
																	   Hassan5 hours ago Hassan5 hours agoಓಪನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಡೆಕ್ಕನ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ 
- 
																	   Chikmagalur21 hours ago Chikmagalur21 hours agoಶ್ರೀ ವಿದ್ಯಾ ಗಣಪತಿ ಯುವಕರ ಬಳಗದ ವತಿಯಿಂದ 9ನೇ ವರ್ಷದ ಅದ್ದೂರಿ ಗಣೇಶೋತ್ಸವ 
- 
																	   Kodagu2 hours ago Kodagu2 hours agoವಿರಾಜಪೇಟೆ ಸುತ್ತಮುತ್ತ ಸೆ.11 ರಂದು ವಿದ್ಯುತ್ ವ್ಯತ್ಯಯ 

 
											 
											 
											 
											 
											