Kodagu
ಹಿಟ್ ಆ್ಯಂಡ್ ರನ್ – ಆರೋಪಿ ಬಂಧನ
ಕುಶಾಲನಗರ : ಪಾದಾಚಾರಿಗೆ ಅಪಘಾತಗೊಳಿಸಿ ವಾಹನವನ್ನು ನಿಲ್ಲಿಸದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕುಶಾಲನಗರ ಸಂಚಾರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶನಿವಾರಸಂತೆ ಸಮೀಪ ಹುಲಸೆ ಗ್ರಾಮ ಶಿರಂಗಾಲ ನಿವಾಸಿ ರಝಾಕ್ ಎಂ.ಎA (35) ಬಂಧಿತ ಆರೋಪಿ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಪಘಾತಗೊಳಿಸಿದ ವಾಹನವನ್ನು ಪೊಲೀಸರು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಫೆ. 6ರಂದು ಹೆಬ್ಬಾಲೆ ಗ್ರಾಮದ ರಾಜ್ಯ ಹೆದ್ದಾರಿ 91 ರ ರಸ್ತೆಯಲ್ಲಿ ಗಂಡಸಿನ ಶವ ಪತ್ತೆಯಾದ ಹಿನ್ನಲೆ ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಹಾಗೂ ಆರೋಪಿಯನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗದ ಡಿಎಸ್‌ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ತನಿಖೆ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡಿಯಲಾಗಿದೆ. ಅಪಘಾತ ಪ್ರಕರಣದಲ್ಲಿ ಮುಲ್ಕಿ ಮೂಲದ ಫೆಲಿಕ್ಸ್ ಡಿಸೋಜ ಮೃತಪಟ್ಟಿದ್ದರು
Kodagu
ಜಗತ್ತಿಗೆ ಅಹಿಂಸಾ ಮಾರ್ಗ ರೂಪಿಸಿಕೊಟ್ಟ ಮಹಾನ್ ಚೇತನ ಗಾಂಧೀಜಿ : ಪ್ರೊ. ಎಂ. ಆರ್.ಗಂಗಾಧರ ಅಭಿಪ್ರಾಯ
ಕುಶಾಲನಗರ: ಗಾಂಧೀಜಿ ಎಂದ ಕ್ಷಣ ನೆನಪಾಗುವುದು ಸ್ವತಂತ್ರ ಹೋರಾಟಗಾರ. ಆದರೆ ಅವರು ಚಿಂತಕರು, ಪತ್ರಕರ್ತರು, ಶಾಂತಿಧೂತ ಮತ್ತು ಜಗತ್ತಿಗೆ ಅಹಿಂಸಾ ಮಾರ್ಗ ರೂಪಿಸಿಕೊಟ್ಟ ಮಹಾನ್ ಚೇತನ. ಸ್ವತಂತ್ರ, ಸತ್ಯಾಗ್ರಹ, ಸ್ವರಾಜ್ಯ, ಸತ್ಯ, ನೈತಿಕತೆ, ಶಾಂತಿ, ಅಹಿಂಸೆ ಅವರ ತತ್ವಗಳು. ಸಮಾಜದಲ್ಲಿ ಹಿಂಸಾಚಾರಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅತ್ಯಂತ ಸಮಂಜಸ ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ. ಆರ್. ಗಂಗಾಧರ ಅಭಿಪ್ರಾಯಪಟ್ಟರು.
ಕೊಡಗು ವಿಶ್ವವಿದ್ಯಾಲಯ, ಕೊಡಗು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಗಾಂಧೀಜಿಯವರ ಆತ್ಮಕಥೆ ನೂರರ ಸಂಭ್ರಮ ಹಾಗೂ ಭೂದಾನ ಚಳವಳಿಯ 75ನೇ ವಾರ್ಷಿಕೋತ್ಸವದ ಪ್ರಯುಕ್ತ ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ಪುಸ್ತಕ ದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಜಗತ್ತು ಒಂದು ಜಾಗತಿಕ ಹಳ್ಳಿಯಾಗಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮೌಲ್ಯಗಳು ಕೂಡ ಮುಖ್ಯ. ಸಮಾಜದಲ್ಲಿ ದ್ವೇಷ ಭಾಷಣಗಳು, ಕೋಮುಗಲಭೆಗಳು ಹೆಚ್ಚುತ್ತಿವೆ. ಸತ್ಯ, ನೈತಿಕತೆ ಮತ್ತು ಪ್ರಾಮಾಣಿಕತೆಯನ್ನು ಕಾಣುವುದು ಅಪರೂಪ ಎಂಬಂತಾಗಿದೆ. ಹೀಗಿರುವಾಗ ಹಿಂಸೆ ಕ್ಷಣಿಕ, ಅಹಿಂಸೆ ಮತ್ತು ಶಾಂತಿ ಶಾಶ್ವ ಎಂಬ ಗಾಂಧೀಜಿಯವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂಬುದನ್ನು ನಾವೆಲ್ಲರೂ ಮರೆಯಬಾರದು ಎಂದು ಅವರು ತಿಳಿಸಿದರು.
ಆಡಂಬರದ ಜೀವನದಲ್ಲಿ ಮುಳುಗಿಹೋಗಿರುವ ಯುವಜನತೆಗೆ ಅತ್ಯಂತ ಸರಳ ಸುಂದರ ಜೀವನ ನಡೆಸಿದ ಗಾಂಧೀಜಿಯವರು ಆದರ್ಶಪ್ರಾಯರಾಗಿದ್ದಾರೆ. ವಿದ್ಯಾರ್ಥಿಗಳು ಗಾಂಧೀಜಿಯವರು ಹಾಕಿ ಕೊಟ್ಟ ಮೌಲ್ಯಗಳನ್ನು ನಿಮ್ಮ ಬದುಕಿನ ಬುನಾದಿಯಾಗಿ ಮಾಡಿಕೊಂಡರೆ ಯಶಸ್ವಿ ಜೀವನದ ಜೊತೆಗೆ ಸುಸ್ಥಿರ ಸಮಾಜವನ್ನು ನಾವು ಕಾಣಬಹುದಾಗಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪುಸ್ತಕ ದಾಸೋಹ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸುರೇಶ ಹೆಚ್ ಜಂಗಮಶೆಟ್ಟಿ ಅವರು ಮಾತನಾಡಿ, ಓದುವ ದಾಹ ವಿದ್ಯಾರ್ಥಿಗಳಿಗೆ ಅತ್ಯಗತ್ಯ. ಪುಸ್ತಕದ ಜ್ಞಾನ ಮಸ್ತಕಕ್ಕೆ ಅವಶ್ಯ ಎಂಬ ದೃಷ್ಟಿಯಿಂದ ಕೊಡಗು ವಿಶ್ವವಿದ್ಯಾಲಯ ಇಂದು ಪುಸ್ತಕ ದಾಸೋಹ ಆರಂಭಿಸಿರುವುದು ಅತ್ಯಂತ ಶ್ಲಾಘನೀಯ. ವಿದ್ಯಾರ್ಥಿಗಳೆಲ್ಲ ಈ ಪುಸ್ತಕ ದಾಸೋಹದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ನಮ್ಮ ಭಾರತ ದೇಶದಲ್ಲಿ ಆಯಾ ಕಾಲಘಟ್ಟದಲ್ಲಿ ತಮ್ಮ ಸುತ್ತಲಿನ ಯಾವುದಾದರೂ ಒಂದು ಅನಿಷ್ಟ ಪದ್ಧತಿಯ ವಿರುದ್ಧ ತಮ್ಮದೇ ವಿಚಾರಧಾರೆಗಳು ಮಾರ್ಗದಲ್ಲಿ ಜನರಲ್ಲಿ ಅರಿವು ಮೂಡಿಸಲೆಂದೇ ಮಹಾತ್ಮರು ಬಂದು ಹೋಗಿದ್ದಾರೆ. ಇಂದಿನ ಮಕ್ಕಳು ಆ ಮಹಾತ್ಮರ ಕುರಿತ ಪುಸ್ತಕಗಳನ್ನು ಓದಬೇಕು. ಅಷ್ಟೇ ಅಲ್ಲದೆ ಮಹಾತ್ಮರನ್ನು ಮತ್ತು ಅವರ ವಿಚಾರಧಾರೆಗಳನ್ನು ತಮ್ಮೊಳಗೆ ಹುಡುಕಬೇಕು.

ವಿದ್ಯಾರ್ಥಿಗಳು ಜಗತ್ತಿಗೆ ಅನ್ನ ನೀಡುವ ಅನ್ನದಾತರಾದ ರೈತ, ನಮ್ಮ ಸುರಕ್ಷತೆಗಾಗಿ ದೇಶದ ಗಡಿಯಲ್ಲಿ ಕಾಯುತ್ತಿರುವ ಸೈನಿಕ, ನಮಗೆ ಜನ್ಮ ನೀಡಿದ ತಂದೆ ತಾಯಿ ಮತ್ತು ಶಿಕ್ಷಣ ನೀಡುವ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೊಡಗು ವಿಶ್ವವಿದ್ಯಾನಿಲಯದ ಕುಲಸಚಿವರು ಮೌಲ್ಯಮಾಪನ ಪ್ರೊ. ಸುರೇಶ, ಮತ್ತೋರ್ವ ಅತಿಥಿಗಳಾದ ಡಾ. ಆಬಿದ ಬೇಗಮ್ ಅವರು ಗಾಂಧೀಜಿ ವಿಚಾರಧಾರೆಗಳ ಹಾಗೂ ಶಿಕ್ಷಣದ ಮೌಲ್ಯವನ್ನು ಕುರಿತು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಮಾತನಾಡಿ, ತಮ್ಮದೇ ಆದ ತತ್ವಸಿದ್ದಾಂತಗಳ ಮೂಲಕ ವಿಶ್ವಖ್ಯಾತಿ ಹೊಂದಿದ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಸರ್ವ ಕಾಲಕ್ಕೂ ಸ್ಮರಿಸುವ ಉದ್ದೇಶದಿಂದ ಕೊಡಗು ವಿಶ್ವವಿದ್ಯಾಲಯವು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಗಾಂಧೀಜಿಯ ಕನಸುಗಳು ಹಾಗೂ ಆಲೋಚನೆಗಳನ್ನು ಬಿತ್ತಲು ಇಂತಹ ಸಮ್ಮೇಳನಗಳನ್ನು ಹಮ್ಮಿಕೊಳ್ಳಲಾಗಿದೆ.

ಗಾಂಧೀಜಿ ತಮ್ಮ ಹೋರಾಟದಲ್ಲಿ ಕೋಪದ ಬದಲು ಸಹನೆಯನ್ನು, ದ್ವೇಷದ ಬದಲು ಪ್ರೀತಿಯನ್ನು
ಹಿಂಸೆಯ ಬದಲು ಶಾಂತಿಯನ್ನು ಅಳವಡಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಜಗತ್ತಿಗೆ ಮಾರ್ಗದರ್ಶಕರಾದರು. ಜಗತ್ತು ಬದಲಾದರೂ ಕೂಡ ಗಾಂಧಿಯಂತಹ ಮಹಾತ್ಮರು ಸಾರಿದ ತತ್ವಗಳು ಬದಲಾಗದ ಕಾರಣ ಇಂದಿನ ಮಕ್ಕಳಲ್ಲಿ ಗಾಂಧಿಯವ ಕನಸುಗಳನ್ನು ಬಿತ್ತಬೇಕಿದೆ ಎಂದರು.
ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಸುದರ್ಶನ ಕುಮಾರ್ ಎನ್.ಕೆ. ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಮತ್ತು ಕನ್ನಡ ಅಧ್ಯಯನ ವಿಭಾಗ ಉಪನ್ಯಾಸಕ ಡಾ. ಜಮೀರ್ ಅಹಮದ್ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕಿ ಡಾ. ಸುವರ್ಣ ಕಂಬಿ ವಂದಿಸಿದರು.
Kodagu
ಹಿಂದುಳಿದ ಮೋರ್ಚಾದ ಅಧ್ಯಕ್ಷರಾಗಿ ಕೋಲೆಯಂಡ ಗಿರೀಶ್ ಆಯ್ಕೆ
ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ಮೋರ್ಚಾದ ನೂತನ ಪದಾಧಿಕಾರಿಗನ್ನು ಆಯ್ಕೆ ಮಾಡಲಾಗಿದೆ.

ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ಮೋರ್ಚಾದ ಅಧ್ಯಕ್ಷ ಕೋಲೆಯಂಡ ಗಿರೀಶ್ ಮತ್ತು ಪ್ರದಾನ ಕಾರ್ಯ ದರ್ಶಿಗಳಾಗಿ ಎಸ್ಎನ್ ರಘು ಶನಿವಾರಸಂತೆ ಮತ್ತು ರಾಜು ಎಮ್. ಜಿ. ಇಂಜಿಲೆಗೆರೆ ಇವರನ್ನು ನೇಮಿಸಿ, ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ಘೋಷಣೆ ಮಾಡಿದ್ದಾರೆ.
Kodagu
ಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ| ಸುಗಮ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್
ಮಡಿಕೇರಿ : ಪಿಯುಸಿ ವಾರ್ಷಿಕ ಪರೀಕ್ಷೆಯು ಇದೇ ಫೆಬ್ರವರಿ. 28 ರಿಂದ ಮಾರ್ಚ್. 17 ರವರೆಗೆ ನಡೆಯಲಿದ್ದು., ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ರೀತಿ ಗೊಂದಲ ಉಂಟಾಗದೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಪರೀಕ್ಷಾ ಕೇಂದ್ರಗಳ ಚಲನವಲನ ಸಂಬಂಧಿಸಿದಂತೆ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಖಾತರಿ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದ ನಾಲ್ಕೈದು ಕಡೆಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು ಎಂದು ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದರು.

ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನ ನಿಯೋಜಿಸುವುದು, ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದು, ಶುಶ್ರೂಷಕರನ್ನು ನೇಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಕಳೆದ ಬಾರಿಯಂತೆ ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪದವಿ ಪೂರ್ವ ಶಿಕ್ಷಣ, ಕಂದಾಯ, ಪೊಲೀಸ್, ಖಜಾನೆ, ಸಾರಿಗೆ, ಸೆಸ್ಕ್, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ತಂಡವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್ ಅವರು ಮಾತನಾಡಿ ಜಿಲ್ಲೆಯಲ್ಲಿ ಈ ಬಾರಿ 5255 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ 4,809 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 250 ಖಾಸಗಿಯಾಗಿ ಹಾಗೂ 196 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿಜಯ್ ಅವರು ಮಾಹಿತಿ ನೀಡಿದರು.
ಕಲಾ ವಿಭಾಗದಲ್ಲಿ 1,054 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2603 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 1598 ವಿದ್ಯಾರ್ಥಿಗಳು ಒಟ್ಟು 5,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್ ಅವರು ತಿಳಿಸಿದ್ದಾರೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀ ವ್ಯಾಪ್ತಿಯಲ್ಲಿ ಪ್ರತಿಬಂಧಕ ಜಾರಿಗೊಳಿಸಬೇಕಿದೆ. ಹಾಗೆಯೇ ಪರೀಕ್ಷಾ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗುತ್ತದೆ ಎಂದರು.
ಜಿಲ್ಲೆಯ 18 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ, ಮಡಿಕೇರಿ ತಾಲ್ಲೂಕಿನ 5, ಸೋಮವಾರಪೇಟೆ ತಾಲ್ಲೂಕಿನ 8 ಮತ್ತು ವಿರಾಜಪೇಟೆ ತಾಲ್ಲೂಕಿನ 5 ಕಡೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ವಿವರ: ಮಡಿಕೇರಿ ತಾಲ್ಲೂಕಿನ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು.
ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ ಹಾಗೂ ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಕೊಡ್ಲಿಪೇಟೆ ಮತ್ತು ಶನಿವಾರಂತೆ ಪದವಿ ಪೂರ್ವ ಕಾಲೇಜು ಹಾಗೂ ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.
ವಿರಾಜಪೇಟೆ ತಾಲ್ಲೂಕಿನಲ್ಲಿ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಿದ್ಧರಾಜು ಬೆಳ್ಳಯ್ಯ, ಹಂಡ್ರಂಗಿ ನಾಗರಾಜು ಅವರು ಮಾತನಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ತಹಶೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪೊಲೀಸ್ ಇನ್ಸ್‌ಪೆಕ್ಟರ್ ರಾಜು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿಚಾರಕರು ಇತರರು ಇದ್ದರು.
-
Kodagu17 hours agoಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ| ಸುಗಮ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್
-
Hassan18 hours agoಹಾಸನದಲ್ಲಿ ಜೊಮ್ಯಾಟೋ ರೈಡರ್ಗಳ ಮುಷ್ಕರ ಎಂಟನೇ ದಿನಕ್ಕೆ; ಬೇಡಿಕೆಗಳಿಗೆ ಸ್ಪಂದನೆ ಇಲ್ಲದೆ ಸೇವೆ ವ್ಯತ್ಯಯ
-
Kodagu23 hours agoಮಾ. 2 ರಂದು ಪಾಡಿಯಲ್ಲಿ ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವ
-
Hassan14 hours agoಸ್ಕೂಟಿ-ಬೈಕ್ ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರು ಸಾ*ವು
-
Hassan21 hours agoಖಾಸಗಿ ಶಾಲಾ ಬಸ್ ಒಂದು ಕೆರೆಯ ಏರಿಯ ಮೇಲೆ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ : ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ
-
Kodagu16 hours agoಹಿಂದುಳಿದ ಮೋರ್ಚಾದ ಅಧ್ಯಕ್ಷರಾಗಿ ಕೋಲೆಯಂಡ ಗಿರೀಶ್ ಆಯ್ಕೆ
-
Manglore15 hours agoಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಸೇವೆ ಯುಪಿಐ & ಐಎಂಪಿಎಸ್ ಆರಂಭ
-
Mysore14 hours agoವಿದ್ಯುತ್ ಇಲ್ಲದೆ ಒಣಗಿದ ಬೆಳೆ: ರೈತನ ಪ್ರಶ್ನೆಗೆ ಸೆಸ್ಕ್ ಅಧಿಕಾರಿಗಳು ಕಕ್ಕಾಬಿಕ್ಕಿ
