Kodagu
ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ವೈದ್ಯಕೀಯ ವಿದ್ಯಾರ್ಥಿ ದುರ್ಮರಣ

ಮಡಿಕೇರಿ : ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಮಡಿಕೇರಿಯ ಮೆಡಿಕಲ್ ಕಾಲೇಜು ವಿದ್ಯಾರ್ಥಿ ವಿಜೇಶ್ ದುರ್ಮರಣಕ್ಕಿಡಾಗಿದ್ದಾನೆ.
ಮಡಿಕೇರಿ ಹೊರವಲಯದ ಕಾಟಕೇರಿ ಜಂಕ್ಷನ್ ಬಳಿಯ ಖಾಸಗಿ ರೆಸಾರ್ಟ್ ಬಳಿ ಅಪಘಾತ ಸಂಭವಿಸಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಹಾಲಿನ ಲಾರಿ ಹಾಗೂ ಮಡಿಕೇರಿ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಮಡಿಕೇರಿಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ಓದುತ್ತಿದ್ದ ವಿಜೇಶ್ ಮೂಲತಃ ಉಡುಪಿ ಜಿಲ್ಲೆಯವನಾಗಿದ್ದು ಸ್ನೇಹಿತರೊಂದಿಗೆ ಮನೆಗೆ ತೆರಳಿ ಹಿಂತಿರುಗಿ ಮಡಿಕೇರಿಯ ಕಾಲೇಜುವಿಗೆ ಬರುವ ವೇಳೆ ದುರ್ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಮತ್ತೋಬ್ಬ ವಿದ್ಯಾರ್ಥಿ ಶಿವಾನಂದ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Kodagu
ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ 78.10% ಅಂಕ

ಮಡಿಕೇರಿ : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ 78.10% ಅಂಕಗಳೊಂದಿಗೆ ವಿಶ್ವವಿದ್ಯಾನಿಲಯಕ್ಕೆ 7ನೇ ರ್ಯಾಂಕ್ ಪಡೆದಿರುತ್ತಾರೆ. ಅಲ್ಲದೆ ವಿಶ್ವವಿದ್ಯಾನಿಲಯದ ಕೊಡಗು ಪ್ರಾದೇಶಿಕ ಕೇಂದ್ರದಿಂದ ಕನ್ನಡ ವಿಷಯದಲ್ಲಿ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.
ಸುಮನ್ 2014ನೇ ಪಿ.ಯು.ಸಿ. ಕಲಾ ವಿಭಾಗದಲ್ಲಿ ಕೊಡಗಿಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿದ್ದರು. ಸುಮನ್’ರವರ ಪತಿ ಬೊಟ್ಟಂಗಡ ತಿಲಕ್ ಹಾಗೂ ಮಗಳು ಸ್ತುತಿ ಬೋಜಮ್ಮ. ಇವರು ತೆರಾಲುವಿನಲ್ಲಿ ವಾಸವಾಗಿದ್ದಾರೆ.
Kodagu
ಕಸ ವಿಲೇವಾರಿಗೆ ವಿರೋಧ: 4ನೇ ದಿನಕ್ಕೆ ಮುಂದುವರಿದ ಅಹೋರಾತ್ರಿ ಪ್ರತಿಭಟನೆ

ಸಿದ್ದಾಪುರ: ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಾಲ್ಕನೇ ದಿನ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದ್ದಾರೆ.
ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಆಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೂ ಮುಂದುವರೆದಿದ್ದು ನಮ್ಮ ಮನವಿಗೆ ಮತ್ತು ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಆಡಳಿತ ನಡೆಸುವ ಸರ್ಕಾರ ವಿರುದ್ಧ ಇಂದಿನಿಂದ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಈ ಹೋರಾಟದಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಏನೇ ಹೆಚ್ಚು ಕಮ್ಮಿಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆ ವೇಳೆ ಅಧಿಕಾರಿಗಳು ಹಾಗೂ ಆಡಳಿತದ ವ್ಯವಸ್ಥೆಯ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತೆಜರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಪ್ರತಿಭಟನೆಗಾರರು ಮನವಿ ಪತ್ರ ಇದೆ ಸಂದರ್ಭ ನೀಡಿದರು.
ಪ್ರತಿಭಟನೆಯಲ್ಲಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯ ವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಹಾಗೂ ಸ್ಥಳೀಯ ಕಾಫಿ ಬೆಳೆಗಾರರಾದ ಬೋಪಣ್ಣ, ರಾಮಚಂದ್ರ, ವಿಷ್ಣು, ರೋಹನ್,ಸೇದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಹಾಜರಿದ್ದರು
Kodagu
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ

ಮಡಿಕೇರಿ : ಮಡಿಕೇರಿ ಕಾಟಕೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಅಡಿಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಡಿಕೇರಿ-ಮಂಗಳೂರು ಮುಖ್ಯರಸ್ತೆಯ ಕಾಟಕೇರಿ ಬಳಿಯ ಪ್ರಶಾಂತಿ ಹೋಂ ಸ್ಟೇ ಎದುರು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ನಾಪೋಕ್ಲು ಬಳಿಯ ಕಕ್ಕಬ್ಬೆ ನಿವಾಸಿ ಬೆಟ್ಟಗೇರಿಯಲ್ಲಿ ವಾಸವಿರುವ ಶರತ್ (28) ಮೃತ ವ್ಯಕ್ತಿ.
ಮಡಿಕೇರಿ ಮಂಗಳೂರು ಮುಖ್ಯರಸ್ತೆಯಲ್ಲಿ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Hassan22 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
State24 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Chamarajanagar20 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu21 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan21 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore20 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
State17 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?
-
Mysore20 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ