Connect with us

Chikmagalur

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಪಘಾತ ತಡೆಗಿಲ್ಲ ಕ್ರಮ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ರಾಷ್ಟ್ರೀಯ ಹೆದ್ದಾರಿಯ 75 ರ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಹೆದ್ದಾರಿಯಲ್ಲಿ ಯಾವುದೇ ಸೂಚನೆ ಫಲಕಗಳು ಇಲ್ಲದ ಕಾರಣ ಶುಕ್ರವಾರ ಅಪಘಾತ ಸಂಭವಿಸಿ ಮಗು ಮೃತಪಟ್ಟ ದುರ್ಘಟನೆ ನಡೆದಿದೆ.

ಧರ್ಮಸ್ಥಳ ಕುಕ್ಕೆಸುಬ್ರಹ್ಮಣ್ಯ ದೇವರ ದರ್ಶನ ಮುಗಿಸಿ ಕಾರಿನಲ್ಲಿ ಸ್ವಗ್ರಾಮ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಆಲೂರು ತಾಲೂಕಿನ ಮಾವನೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ಸಂಭವಿಸಿ ಕಾರು ಪಲ್ಟಿಯಾಗಿ ರಸ್ತೆಯ ಬಲಬದಿಗೆ ಹುರುಳಿ ಬಿದ್ದಿದೆ. ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಒಂದೇ ಕುಟುಂಬದ ಐವರಲ್ಲಿ ಓರ್ವಮಗು ಪರಮ ಚಕ್ರವರ್ತಿ( 2.5 ) ಚಿಕಿತ್ಸೆ ಫಲಕಾರಿಯಾಗದೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಸುಧಾಕರ, ಕುಮಾರಿ (55) ದೀಪಾ (30)
ಲವಿಕಾ (9) ಸಣ್ಣ ಪುಟ್ಟ ಗಾಯಗಳಾಗಿದ್ದು ಜಿಲ್ಲಾ ಕೇಂದ್ರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರಕರಣ ಆಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣದ ಸೂಚನಾ ಫಲಕಗಳು: ಕಳೆದ ಎಂಟು ವರ್ಷಗಳಿಂದ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ವಿಸ್ತರಣೆ ಹಾಗೂ ಬೈಪಾಸ್‌ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ಭರಾಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ವಹಣೆಯನ್ನು ಮರೆತಂತಿದ್ದು ಕಾಮಗಾರಿಯ ಹಲವು ಕಡೆಗಳಲ್ಲಿ ಫ್ಲೈ ಓವರ್‌, ಅಂಡರ್‌ ಪಾಸ್‌ ಕಾಮಗಾರಿ ನಡೆಯುತ್ತಿದೆ. ಇಲ್ಲಿ ಏಕಾಏಕಿ ತಿರುವುಗಳನ್ನು ನೀಡಲಾಗಿದೆ. ಹಲವು ಕಡೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿಲ್ಲ, ಇನ್ನು ಕೆಲವು ಕಡೆಗಳಲ್ಲಿ ಇನ್ನೇನು ತಿರುವು ಬಂತು ಎನ್ನುವಾಗ ಕಣ್ಣಿಗೆ ಕಾಣದಂತಿರುವ ಸೂಚನಾ ಫಲಕಗಳು ಅಪಘಾತಕ್ಕೆ ಆಹ್ವಾನ ನೀಡುತ್ತಿವೆ. ಅಪಘಾತಕ್ಕೆ ಹೆದ್ದಾರಿ ಪ್ರಾಧಿಕಾರ ಯಡವಟ್ಟೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಅಸ್ತಿತ್ವ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ : ಹಿರೇಮಗಳೂರು ಪುಟ್ಟಸ್ವಾಮಿ

Published

on

ಚಿಕ್ಕಮಗಳೂರು: ದೇಶದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂದರ್ಭದಲ್ಲೂ ಮರಳುವುದಿಲ್ಲ. ಬಿಜೆಪಿ ಬಿಟ್ಟರೆ ರಾಜಕೀಯ ನಿವೃತ್ತಿ ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಯೋಜಕರಾಗಿ ನೇಮಕಗೊಳ್ಳುವ ಮೂಲಕ ಕಾಂಗ್ರೆಸ್‌ಗೆ ವಾಪಸ್ ಬಂದಿರುವುದು ಒಳ್ಳೆಯದು ಎಂದು ಜಿಲ್ಲೆಯ ಕೊಪ್ಪ, ತರೀಕೆರೆ, ಚಿಕ್ಕಮಗಳೂರು, ಮೂಡಿಗೆರೆ ಪ್ರದೇಶಗಳಿಂದ ಕಾಂಗ್ರೆಸ್‌ನ ಅನೇಕ ಮುಖಂಡರು ಫೋನಾಯಿಸಿ ಅಭಿನಂದಿಸಿ, ಸ್ವಾಗತಿಸುತ್ತಿರುವುದಾಗಿ ಹೇಳುತ್ತಿರುವುದು ನನಗೆ ತೀವ್ರ ಮುಜುಗರದ ಜೊತೆಗೆ ನೋವು ತಂದಿದೆ.


ಕಾಂಗ್ರೆಸ್‌ನ ಕೆಲ ಮುಖಂಡರು ಕಾಂಗ್ರೆಸ್‌ಗೆ ವಾಪಸ್ ಮರಳುವಂತೆ ಕೈ ಮುಖಂಡರು ವಿಶ್ವಾಸದಿಂದ ಕೇಳಿದ್ದಾರೆ. ಅವರುಗಳಿಗೆ ನನ್ನ ನಿಲುವನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ. ಆದರೆ, ಅಲ್ಲಲ್ಲಿ ಪುಟ್ಟಸ್ವಾಮಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಅವೆಲ್ಲವೂ ವದಂತಿಗಳು ಎಂಬುದನ್ನು ತಿಳಿಸುತ್ತಿದ್ದೇನೆ.
ಭಾರತ ಸ್ವತಂತ್ರವಾದ ಸಂದರ್ಭದಲ್ಲಿ ಕಾಂಗ್ರೆಸ್ ಒಂದು ದೊಡ್ಡ ಮರವಾಗಿತ್ತು ನಿಜ. ಆದರೆ, ನಂತರದ ದಿನಗಳಲ್ಲಿ ಕಾಂಗ್ರೆಸ್ ನೆಹರು, ಗಾಂಧಿ ಕುಟುಂಬಕ್ಕೆ ಆದ್ಯತೆ ನೀಡಿದ್ದ ಪರಿಣಾಮ ಇಂದು ದೇಶದಲ್ಲಿ ಕಾಂಗ್ರೆಸ್ ಮರವಾಗಿ ಉಳಿಯದೇ ಒಂದು ಒಣಗಿದ ಬಳ್ಳಿಯಾಗಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದರು.

Continue Reading

Chikmagalur

ಚಿಕ್ಕಮಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸಿ.ಆರ್.ಪಿ.ಎಫ್ ಪೊಲೀಸರು ಪಥ ಸಂಚಲನ ನಡೆಸಿದರು.

Published

on

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಚುನಾವಣೆ ವೇಳೆ ಶಾಂತಿ, ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ದೇಶದ ಪ್ರಜಾಪ್ರಭುತ್ವ ಹಬ್ಬವನ್ನು ಯಶಸ್ವಿಗೊಳಿಸಬೇಕಾದರೆ ಸಾರ್ವಜನಿಕರ ಸಹಕಾರ ಎಷ್ಟು ಮುಖ್ಯ ಎನ್ನುವುದರ ಅರಿವು ಮೂಡಿಸಿದರು.
ತರೀಕೆರೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಪಥ ಸಂಚಲನವು ಸಾರ್ವಜನಿಕರಲ್ಲಿ ಆತ್ಮ ಸ್ಥೈರ್ಯವನ್ನು ಇಮ್ಮಡಿಗೊಳಿಸಿದೆ

Continue Reading

Chikmagalur

ಮೈತ್ರಿ ಗೆಳೆಯ ಜೆಡಿಎಸ್ ಭೋಜೇಗೌಡರಿಗೆ ಮಾತಿನಲ್ಲಿ ತಿವಿದ ಸಿ.ಟಿ.ರವಿ

Published

on

ವೇದಿಕೆ ಮೇಲಿದ್ದ ಜೆಡಿಎಸ್ ಎಂಎಲ್ಸಿ ಭೋಜೇಗೌಡರ ಕಾಲೆಳೆದ ಸಿ.ಟಿ. ರವಿ

4 ಬಾರಿ ಶಾಸಕನಾಗಿದ್ದಾಗ ಹೆಚ್ಚು ಕೆಲಸ ಮಾಡಿದ್ದು 2018-2023

ಆದರೆ, ಈ ಬಾರಿ ಹೆಚ್ಚು ಕೆಲಸ ಮಾಡಿದ್ರು ಸೋತೆ

ಚುನಾವಣೆ ಸಂದರ್ಭದಲ್ಲಿ ಕೆಲಸ ಚರ್ಚೆಯಾಗಲಿಲ್ಲ, ಅಪಪ್ರಚಾರ ಚರ್ಚೆಯಾಯಿತು

ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗೇ ಕೆಲಸ ಮಾಡ್ತು

ನಮ್ಮ ನಾಯಕರ ಹೆಸರನ್ನೂ ಬಳಸಿಕೊಂಡು ನನ್ನ ಬಗ್ಗೆ ಅಪಪ್ರಚಾರ ಮಾಡಿದ್ರು

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಸೋಲನ್ನ ನೆನೆದ ಸಿ.ಟಿ.ರವಿ

Continue Reading

Trending

error: Content is protected !!