Connect with us

Hassan

ಚಾಲಕನ ನಿಯಂತ್ರಣ ಮೇಲ್ಸುತುವೆ ಮೇಲೆ ಪಲ್ಟಿಯಾದ ಕಾರು ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವು

Published

on

ಹಾಸನ

ಚಾಲಕನ ನಿಯಂತ್ರಣ ಮೇಲ್ಸುತುವೆ ಮೇಲೆ ಪಲ್ಟಿಯಾದ ಕಾರು

  1. ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಸಮೀಪ ಘಟನೆ

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿರೋ ಅಪಘಾತ

ಕಾರು ವೇಗವಾಗಿದ್ದರಿಂದ ನಾಲ್ಕೈದು ಭಾರಿ ಪಲ್ಟಿಯಾಗಿರೂ ಕಾರು

ಕಾರು ಸಂಪೂರ್ಣ ಜಖಂ, ತಪ್ಪಿದ ಬಾರೀ ಅನಾಹುತ

ಮೇಲ್ಸುತುವೆಯಿಂದ ಕೆಳಕ್ಕೆ ಬಿದ್ದಿದ್ದರೆ ಹೆಚ್ಚಿನ ಅನಾಹುತ

ಮೇಲ್ಸೇತುವೆಯ ತಡೆಗೋಡೆ ಇದ್ದುದ್ದರಿಂದ ಮೇಲೆಯೇ ಉಳಿದ ಕಾರು

ಆದಿಚುಂಚನಗಿರಿ ದೇವಾಲಯಕ್ಕೆ ಹೋಗಿ ವಾಪಸ್ಸು ಬರ್ತಿದ್ದ ಕುಟುಂಬ

ಗಾಯಾಳುಗಳನ್ನ ಹೆಚ್ಚಿನ ಚಿಕಿತ್ಸೆ ಹಾಸನಕ್ಕೆ ಶಿಫ್ಟ್

ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

Continue Reading
Click to comment

Leave a Reply

Your email address will not be published. Required fields are marked *

Hassan

ಸಕಲೇಶಪುರ: ಜೆಜೆಎಂ ಕಾಮಗಾರಿಗಳನ್ನು ಪರಿಶೀಲಿಸಿದ ಸಿಇಒ

Published

on

ಸಕಲೇಶಪುರ:  ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು,  ಸಕಲೇಶಪುರ ತಾಲೂಕು ಕುನಿಗನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗಾಳಿಗುಡ್ಡ, ಹೊಸಗದ್ದೆ, ಹೊಸಕೆರೆ, ಮಡ್ಡಿನಕೆರೆ, ಕುನಿಗನಹಳ್ಳಿ ಗ್ರಾಮಗಳು ಹಾಗೂ ಬಿರಡಹಳ್ಳಿ ಪಂಚಾಯಿತಿಯ ವ್ಯಾಪ್ತಿಯ ದೊಡ್ಡನಾಗರ ಗ್ರಾಮಗಳಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ವೇಳೆ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯ ಪಾಲಕ ಅಭಿಯಂತರರು, ಸಹಾಯಕ ನಿರ್ದೇಶಕರು(ಗ್ರಾ. ಉ),ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

Continue Reading

Hassan

ಚಿನ್ನ ಖರೀದಿಗೆ ಬಂದು ಮಗು ಹೊತ್ತೊಯ್ದ ಚಾಲಾಕಿ ಲೇಡಿ

Published

on

ಹಾಸನ: ನಗರದ ಗಾಂಧಿ ಬಜಾರ್ ನಲ್ಲಿ ಚಿನ್ನ ಖರೀದಿ ಮಾಡಲೆಂದು ಅಂಗಡಿಗೆ ಬಂದ ಚಾಲಾಕಿ ಲೇಡಿಯೊಬ್ಬಳು ಎರಡೂವರೆ ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡು ಹೋಗಿದ್ದಾಳೆ.

ಅಪರಿಚಿತ ಮಹಿಳೆ, ಕೆಂಪು ಚೂಡಿದಾರ್, ಹಳದಿ ವೇಲ್ ಧರಿಸಿದ್ದು, ಉಷಾ ಎಂಬುವವರ ಸುಪ್ರಿಯಾ ಎಂಬ ಹೆಣ್ಣು ಮಗಳನ್ನ ಯಾರಿಗೂ ತಿಳಿಯದಂತೆ ಕರೆದುಕೊಂಡು ಹೋಗಿದ್ದಾಳೆ.

ಈ ದೃಶ್ಯ ಗಾಂಧಿ ಬಜಾರ್ ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೆಂಗಸಿನ ಬಗ್ಗೆ ಹಾಗೂ ಮಗು ಬಗ್ಗೆ ಮಾಹಿತಿ ಸಿಕ್ಕಲ್ಲಿ ಹಾಸನ ನಗರ ಠಾಣೆ 08172-268333, 9480804745 ಅಥವಾ ತುರ್ತು ಸೇವೆ 112 ಗೆ ಕರೆ ಮಾಡಿ ತಿಳಿಸಲು ಕೋರಲಾಗಿದೆ.

Continue Reading

Hassan

HIMS ಆವರಣದಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಗೆ ಶಾಸಕ ಸ್ವರೂಪ್ ಭೂಮಿ ಪೂಜೆ

Published

on

ಹಾಸನ: ನಗರದ ಹಾಸನ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕೇಂದ್ರ ಸರ್ಕಾರದ ಅನುದಾನದ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕ್ರಿಟಿಕಲ್ ಕೇರ್ ಸೆಂಟರ್ ಕಾಮಗಾರಿಗೆ ಶಾಸಕ ಸ್ವರೂಪ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು.

ಸುಮಾರು 13 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿಗೆ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಭೂಮಿ ಪೂಜೆ ನೆರವೇರಿಸಿ ಬಳಿಕ ಸುಮಾರು 6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳ ವಸತಿ ನಿಲಯದ ಹೆಚ್ಚುವರಿ ಕಟ್ಟಡಕ್ಕೂ ಅವರು ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳು ಹಾಗೂ ಶಾಸಕರ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಅದರಂತೆ ಇಂದು ಹಾಲುವಾಗಿಲು ಗ್ರಾಮದಲ್ಲಿ ಅಂಗನವಾಡಿ, ರಸ್ತೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಹಾಸನ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿಯೂ ಕ್ರಿಟಿಕಲ್ ಕೇರ್ ಸೆಂಟರ್ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ಸಾಕಷ್ಟು ಅನುದಾನ ಬಂದಿದ್ದು ಅದರ ಕಾಮಗಾರಿಯು ನಡೆಯುತ್ತಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ಒಳ್ಳೆಯ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Continue Reading

Trending

error: Content is protected !!