Connect with us

Chikmagalur

ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

Published

on

ಚಿಕ್ಕಮಗಳೂರು

ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ.

ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ರಸ್ತೆ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್

ಹೊರನಾಡು ಮೂಲದ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಬೈಕ್ ಸವಾರ ಸುನೀಲ್ (30 ಉಮೇಶ್(35) ಸಾವು.

NR ಪುರ ತಾಲೂಕಿನ ಕರುಗುಂದ ಗ್ರಾಮದ ಬಳಿ ಘಟನೆ.

NRಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕು

Continue Reading
Click to comment

Leave a Reply

Your email address will not be published. Required fields are marked *

Chikmagalur

ರಾಜ್ಯಕ್ಕೆ ಅಪ್ರತಿಮೆ ಕೊಡುಗೆ ನೀಡಿದವರು ಡಿ.ದೇವರಾಜ ಅರಸು: ಡಾ.ಆರತಿ ಕೃಷ್ಣ

Published

on

ಚಿಕ್ಕಮಗಳೂರು: ಸುದೀರ್ಘ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಕ್ರಾಂತಿಕಾರಿ ನಿಲುವುಗಳಿಂದ ರಾಜ್ಯಕ್ಕೆ ಅಪ್ರತಿಮ ಕೊಡುಗೆಯನ್ನು ನೀಡಿದವರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ಎಂದು ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವರ ೧೧೦ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇವರಾಜ ಅರಸುರವರು ಸುದೀರ್ಘಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗವನ್ನು ರಚಿಸಿ, ನಂತರದ ದಿನಗಳಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ಹಿಂದುಳಿದ ವರ್ಗದ ನಿಗಮ, ಮಂಡಳಿಯನ್ನು ಪ್ರಾರಂಭಿಸಿದರು. ಜೀತ ಪದ್ಧತಿಯನ್ನು ರದ್ದುಗೊಳಿಸಿ, ಬಡವರು ಹಾಗೂ ಶ್ರೀಮಂತರ ನಡುವೆ ಇರುವ ಅಂತರ ಹಾಗೂ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ್ದ ಅವರು, ೧೯೭೩ರಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣೀಭೂತರಾದವರು ಎಂದರು.


ನಂತರ ರೈತರಿಗೆ ಅನುಕೂಲವಾಗುವಂತೆ ಕಾಳಿ ಯೋಜನೆಯನ್ನು ಜಾರಿಗೆ ತಂದರು. ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಹಿಂದುಳಿದ ವರ್ಗದವರು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದುವರಿಯಬೇಕೆಂಬ ಆಶಯ ಹೊಂದಿದ್ದರು. ಈ ಕಾರಣದಿಂದಲೇ ಹಿಂದುಳಿದ ವರ್ಗದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವನ್ನು ಒದಗಿಸಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ಟೈಫಂಡರಿ ಯೋಜನೆಯಲ್ಲಿ ಉದ್ಯೋಗ ಕಲ್ಪಿಸಿದ್ದರು. ಬಡವರ ಧ್ವನಿಯಾಗಿ ಭೂಸುಧಾರಣೆಯನ್ನು ಜಾರಿಗೆ ತಂದು ಉಳುವವನೇ ಭೂಮಿಯ ಹೊಲದೊಡೆಯ ಎನ್ನುವ ಕಾನೂನನ್ನು ಜಾರಿಗೆ ತಂದರು ಎಂದು ತಿಳಿಸಿದರು.

ಅಂದು ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದ ತಮ್ಮ ತಂದೆ ಬೇಗಾನೆ ರಾಮಯ್ಯನವರು ಅರಸು ಅವರ ನಿಕಟವರ್ತಿಯಾಗಿ ಭೂಸುಧಾರಣಾ ಸಮಿತಿಯ ಸದಸ್ಯರೂ ಆಗಿದ್ದರು. ನಂತರ ಅವರು ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಮಲೆನಾಡು ಭಾಗಕ್ಕೆ ಬೋರ್‌ವೆಲ್ ಅನ್ನು ಒದಗಿಸುವ ಮೂಲಕ ಬೋರ್‌ವೆಲ್ ರಾಮಯ್ಯ ಎಂದೇ ಖ್ಯಾತಿ ಪಡೆದಿದ್ದರು ಎಂದು ಹೇಳಿದರು.

ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಇಂದು ದೇಶ ಕಂಡ ಅಪ್ರತಿಮ ನಾಯಕ ದೇವರಾಜ ಅರಸು ಅವರ ಹಾಗೂ ಆಧುನಿಕ ತಂತ್ರಜ್ಞಾನದ ಹರಿಕಾರರಾಗಿದ್ದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಹುಟ್ಟುಹಬ್ಬವೂ ಆಗಿದೆ. ತಮ್ಮ ದಕ್ಷ ಆಡಳಿತದ ಮೂಲಕ ಹಲವಾರು ದೂರದೃಷ್ಟಿಯ ಕಾರ್ಯಕ್ರಮಗಳನ್ನು ನೀಡಿದ ದೇವರಾಜ ಅರಸು, ಭೂ ಒಡೆತನದ ಹಕ್ಕು ನೀಡಿರುವುದು ಮಾತ್ರವಲ್ಲ, ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿಯವರ ೨೦ ಅಂಶಗಳ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದವರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗುವಂತೆ ಹಾಸ್ಟೆಲ್ ಸೌಲಭ್ಯವಲ್ಲದೆ, ವಿದ್ಯಾರ್ಥಿ ವೇತನವನ್ನು ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದು ಬಡವರಿಗೆ ಬದುಕು ಕಟ್ಟಿಕೊಟ್ಟವರು ಎಂದು ತಿಳಿಸಿದರು.

ದಿ.ಡಿ.ದೇವರಾಜ ಅರಸು ಅವರ ತತ್ವ ಮತ್ತು ಸಾಧನೆಗಳ ಬಗ್ಗೆ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಅರ್ಥಶಾಸ್ತ್ರ-ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಲಕ್ಷ್ಮೀಕಾಂತ್ ಉಪನ್ಯಾಸ ನೀಡಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಒಬ್ಬ ಶ್ರೇಷ್ಠ ಮತ್ತು ಧೀಮಂತ ನಾಯಕ, ದಾರ್ಶನಿಕ. 1969 ರಿಂದ 1979 ರವರೆಗಿನ ಕಾಲಘಟ್ಟವನ್ನು ಅರಸು ಯುಗವೆಂದು ಕರೆಯಲಾಗುತ್ತದೆ. ̆1969-70ರ ಅವಧಿಯಲ್ಲಿ ರಾಜ್ಯದ ಅವಿಸ್ಮರಣೀಯ ಬೆಳವಣಿಗೆಗೆ ಉತ್ತಮ ಅಡಿಪಾಯವನ್ನು ಹಾಕಿಕೊಟ್ಟವರು. ಅವರು ವಿಶೇಷವಾಗಿ ದೀನ ದಲಿತರು, ಬಡವರು, ಹಿಂದುಳಿದವರ ಬಗ್ಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದವರು. ಶೋಷಿತ ಜನರ ಕಷ್ಟ ಕಾರ್ಪಣ್ಯವನ್ನು ಅರಿತುಕೊಂಡಿದ್ದರು. ಬಡತನ ನಿರ್ಮೂಲನೆಗೆ ಶ್ರಮಿಸಿದ ಮಹಾನ್ ನಾಯಕ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪೌತಿ ಖಾತೆಯ ವಾರಸುದಾರರಿಗೆ ಪಹಣಿಗಳನ್ನು ವಿತರಿಸಲಾಯಿತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಅರಸು ಸಂಘದ ಅಧ್ಯಕ್ಷ ಕೆ.ಜೆ.ಮಂಜುನಾಥ ರಾಜ್ ಅರಸ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ನಾಗರಾಜ ಅರಸ್, ನಗರಸಭೆ ಸದಸ್ಯರುಗಳಾದ ಮಧುಕುಮಾರ್ ರಾಜೇ ಅರಸ್, ಪರಮೇಶ್ ಅರಸ್, ಅಲೆಮಾರಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಉಪವಿಭಾಗಾಧಿಕಾರಿ ಸುದರ್ಶನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಆಲದರ್ತಿ, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಹೆಚ್.ಪಿ.ಮಂಜೇಗೌಡ, ಜಯರಾಜ ಅರಸ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎನ್.ಮಂಜುನಾಥ್ ಸ್ವಾಗತಿಸಿದರು. ಮಲ್ಲಿಗೆ ಸುಧೀರ್ ಮತ್ತು ತಂಡದವರು ನಾಡಗೀತೆ ಹಾಗೂ ಗೀತ ಗಾಯನ ನಡೆಸಿಕೊಟ್ಟರು.
ಇದಕ್ಕೂ ತಾಲ್ಲೂಕು ಕಚೇರಿ ಆವರಣದಿಂದ ಆರಂಭಗೊಂಡ ಮೆರವಣಿಗೆಗೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಚಾಲನೆ ನೀಡಿದರು.

Continue Reading

Chikmagalur

ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕ ಹಲ್ಲೆ: ಓರ್ವ ವ್ಯಕ್ತಿ ಮೃ*ತ

Published

on

ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.

ಗೊಲ್ಲರಹಟ್ಟಿ ನಿವಾಸಿ ಕುಮಾರ್(37) ಮೃತ ವ್ಯಕ್ತಿ.

ಹಲ್ಲೆ ಮಾಡಿರುವ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದಾರೆ.

ಕಡೂರು ತಾಲೂಕಿನ ಎಸ್. ಬಿದರೆ ಗ್ರಾಮದ ರಸ್ತೆ ಪಕ್ಕ ಚಂದ್ರಪ್ಪ ಅವರ ತೋಟದಲ್ಲಿದ್ದ ಕುಮಾರ್, ಬಿದ್ದ ಎಳನೀರು ಮುಟ್ಟಿದಕ್ಕೆ ಕಳ್ಳತನ ಆರೋಪ ಹೊರಿಸಿ ಕುಮಾರ್ ಮೇಲೆ ಮಾಲೀಕ ಚಂದ್ರಪ್ಪ ಮತ್ತು ಅಳಿಯ ಮಧು ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಆ ಮೂಲಕ ಅಮಾನವೀಯ ಮೆರೆದಿದ್ದಾರೆ.

ತೋಟದ ಪಕ್ಕದ ಹಳ್ಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುಮಾರ್?? ನನ್ನು ಪೋಷಕರು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕುಮಾರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯ ಮಧು ಮತ್ತು ಚಂದ್ರಪ್ಪ ನನ್ನು ಸಖರಾಯಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಇನ್ನು ಕೇಸ್ ಮಾಡಲು ವಿಳಂಬ ಆರೋಪಿಸಿ ಸಖರಾಯಪಟ್ಟಣ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ಕಠಿಣ ಕ್ರಮಕ್ಕೆ ಮೃತನ ಕುಟುಂಬಸ್ಥರು ಮತ್ತು ಸ್ಥಳೀಯರು ಆಗ್ರಹಿಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್??ಪಿ ಸಿ.ಟಿ ಜಯಕುಮಾರ್ ಭೇಟಿ ನೀಡಿದರು. ಮಾರಣಾಂತಿಕ ಹಲ್ಲೆ ಮಾಡಿರುವ ಬಗ್ಗೆ ದೂರು ನೀಡಿದರೂ ಸಾವನ್ನಪ್ಪಿದ ಬಳಿಕ ಪ್ರಕರಣ ದಾಖಲಿಸಿದ್ದಾರೆ ಆರೋಪ ಮಾಡಿದರು. ಈ ವೇಳೆ ಸಖರಾಯಪಟ್ಟಣ ಠಾಣೆ ಪಿಎಸ್ಐ ಪವನ್ ವಿರುದ್ಧ ತನಿಖೆ ನಡೆಸುವುದಾಗಿ ಎಎಸ್‌ಪಿ ತಿಳಿಸಿದರು.

Continue Reading

Chikmagalur

ಗೋಣಿಬಿಡಿನಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರಚಿಕಿತ್ಸೆ ಶಿಬಿರ

Published

on

ಮೂಡಿಗೆರೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗೋಣಿಬೀಡು ವಲಯದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಪ್ರಸಾದ್ ನೇತ್ರಾಲಯ ಉಡುಪಿ ಮತ್ತು ಗೋಣಿಬೀಡು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದು ಶಿಬಿರದಲ್ಲಿ ಸುಮಾರು 162 ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದು 30 ಜನ ಸಧಸ್ಯರು ಶಸ್ತ್ರ ಚಿಕಿತ್ಸೆಗೆ ತೆರಳಿದ್ದಾರೆ ಶಿಬಿರದಲ್ಲಿ ಡಾ, ನಿದರ್ಶನ್ ದೀಪ ಬೆಳಗುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದ ಗೋಣಬಿಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿನೇಶ್ ದೇಹದ ಎಲ್ಲಾ ಭಾಗಗಳು ಅಮೂಲ್ಯವಾದದ್ದು ಅದರಲ್ಲೂ ಕಣ್ಣು ಎನ್ನುವುದು ದೇವರು ಕೊಟ್ಟ ದೇಹದ ಅತ್ಯಮೂಲ್ಯ ಭಾಗ ಎಂದು ಅಭಿಪ್ರಾಯ ಪಟ್ಟು ಇತ್ತೀಚಿನ ದಿನಗಳಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ಹಲವರಲ್ಲಿ ದೃಷ್ಟಿ ದೋಷ ಕಂಡು ಬರುತ್ತಿದ್ದು ಈ ಬಗ್ಗೆ ಜಾಗೃತಿ ಅಗತ್ಯ ಶಿಬಿರಗಳ ಮೂಲಕ ಕಣ್ಣಿನ ತಪಾಸಣೆ ನಡೆಸುವುದಲ್ಲದೆ ಜಾಗೃತಿ ಮೂಡಿಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಾಡಲಾಗುತ್ತಿದೆ ಎಂದರು.

ಮಧ್ಯವರ್ಜನ ಶಿಬಿರದ ಗೌರವಾಧ್ಯಕ್ಷರಾದ ರಘು ಜನ್ನಾಪುರ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಕಣ್ಣಿನ ತಪಾಸಣೆ ಶಿಬಿರವನ್ನು ಸದ್ಬಳಕೆ ಮಾಡಿಕೊಂಡು ದೃಷ್ಟಿ ಪಡೆದು ಉತ್ತಮ ಜೀವನ ನಡೆಸಬೇಕು ಯಾವುದೇ ನಿಕರ ಕಾರಣವಿಲ್ಲದೆ ಬರುವ ಕಣ್ಣಿನ ಪೊರೆ ಸಮಸ್ಯೆಗೆ ಆರಂಭಿಕ ಹಂತದಲ್ಲಿ ಸೂಕ್ತ ಚಿಕಿತ್ಸೆ ಪಡೆದಲ್ಲಿ ಮುಂದಾಗುವ ಅನಾಹುತಗಳನ್ನು ತಡೆಯಬಹುದೆಂದರು.

ಅರೋಗ್ಯ ಶಿಬಿರದಲ್ಲಿ ಯೋಜನಾಧಿಕಾರಿಗಳಾದ ಸುಧೀರ್ ಜೈನ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಕುರಿತು ಮಾತನಾಡಿದರು. ವಲಯ ಮೇಲ್ವಿಚಾರಕರಾದ ದೀಪಕ್ ಕಾರ್ಯಕ್ರಮ ನಿರೂಪಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ಭಾರತಿ ಸ್ವಾಗತಿಸಿ, ಕೃಷಿ ಅಧಿಕಾರಿ ಗೋವಿಂದ ನಾಯಕ್ ಕಾರ್ಯಕ್ರದಲ್ಲಿ ವಂದನನಾರ್ಪಣೆ ಮಾಡಿದರು.

ಉಚಿತ ಆರೋಗ್ಯ ತಪಾಸಣಾ ಶಿಬಿರದ ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿಗಳಾದ ನಿರಂಜನ್, ಜೆ ಸಿ ಅಧ್ಯಕ್ಷರಾದ ಜಗತ್ ಬಿ ಎಂ, ವಿನಾಯಕ ಗೆಳೆಯರ ಬಳಗ ಅಧ್ಯಕ್ಷರಾದ ರಘು ಒಕ್ಕೂಟದ ಅಧ್ಯಕ್ಷರಾದ ಹರಿಣಾಕ್ಷಿ, ಶೌರ್ಯ ವಿಪತ್ತು ಘಟಕದ ಸಂಯೋಜಕರಾದ ಶಾಂತಪ್ಪ ಡಿ ವೈ, ವಲಯದ ಸೇವಾ ಪ್ರತಿನಿದಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

 

Continue Reading

Trending

error: Content is protected !!