Cinema
ನಟ ಬ್ಯಾಂಕ್ ಜರ್ನಾದನ್ ಹೃದಯಾಘಾತ: ಆರೋಗ್ಯ ಸ್ಥಿತಿ ಹೇಗಿದೆ?
ಕನ್ನಡ ಸಿನಿಮಾ (Sandalwood) ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ (Bank Janardhan) ಅವರಿಗೆ ಮೂರು ದಿನಗಳ ಹಿಂದೆಯಷ್ಟೇ ಹೃದಯಾಘಾತವಾಗಿ (Heart Attack), ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ಅವರಿಗೆ ಐಸಿಯುವಿನಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸುಧಾರಿಸಿದೆ. ಈ ಮಾಹಿತಿಯನ್ನು ಅವರನ್ನು ಭೇಟಿಯಾಗಿ ಬಂದ ಅನೇಕ ಸಹ ಕಲಾವಿದರು ನೀಡಿದ್ದಾರೆ.
ಬ್ಯಾಂಕ್ ಜನಾರ್ದನ್ ಅವರಿಗೆ ಈಗಾಗಲೇ ಎರಡು ಬಾರಿ ಹೃದಯಾಘಾತವಾಗಿದೆ ಎನ್ನುವ ಮಾಹಿತಿ ಇದೆ. ಇದು ಮೂರನೇ ಬಾರಿ ಆಗಿದ್ದರಿಂದ ಗೆಳೆಯರು ಮತ್ತು ಬಂಧುಗಳು ಆತಂಕಗೊಂಡಿದ್ದರು. ಅಭಿಮಾನಿಗಳ ಹಾರೈಕೆಯಿಂದಾಗಿ ಅವರು ಗುಣಮುಖರಾಗುತ್ತಿದ್ದಾರೆ. ಅನೇಕ ಕಲಾವಿದರು ಅವರನ್ನು ಭೇಟಿ ಮಾಡಿ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು.
ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.ಗೌರಿ ಗಣೇಶ್, ಕೌರವ, ರಂಗ ಎಸ್.ಎಸ್.ಎಲ್.ಸಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ವಿಭಿನ್ನ ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಜೊತೆಗೆ ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಕೂಡ ಇವರದ್ದು.
Cinema
2019ರ ರಾಜ್ಯವಾರ್ಷಿಕ ಚಲನಚಿತ್ರ ಪ್ರಶಸ್ತಿ: ಸುದೀಪ್‌ಗೆ ಒಲಿದ ಅತ್ಯುತ್ತಮ ನಟ ಪ್ರಶಸ್ತಿ
ಬೆಂಗಳೂರು: 2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕನ್ನಡದ ಖ್ಯಾತನಟ ಕಿಚ್ಚ ಸುದೀಪ್ ಹಾಗೂ ನಟಿ ಅನುಪಮಾ ಗೌಡಗೆ ರಾಜ್ಯ ಪ್ರಶಸ್ತಿ ಘೋಷಿಸಿದೆ.
ಪೈಲ್ವಾನ್ ಸಿನಿಮಾದಲ್ಲಿನ ಅಭಿನಯಕ್ಕೆ ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ, ತ್ರಯಂಬಕಂ ಸಿನಿಮಾಗಾಗಿ ಅನುಪಮ ಗೌಡಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.
2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ವಿಜೇತರ ಮಾಹಿತಿ:
ಮೊದಲ ಅತ್ಯುತ್ತಮ ಚಿತ್ರ: ಮೋಹನದಾಸ
ಎರಡನೇ ಅತ್ಯುತ್ತಮ ಚಿತ್ರ: ಲವ್ ಮಾಕ್ ಟೈಲ್
ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಕನ್ನೇರಿ
ಅತ್ಯುತ್ತಮ ಜನಪ್ರಿಯ ಮಜರಂಜನಾ ಚಿತ್ರ: ಇಂಡಿಯಾ v/s ಇಂಗ್ಲೆಂಡ್
ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ
ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಟ್ರಿಬಲ್ ತಲಾಕ್ (ಬ್ಯಾರಿ ಭಾಷೆ)
ಅತ್ಯುತ್ತಮ ನಟ (ಸುಬ್ಬಯ್ಯ ನಾಯ್ಡು ಪ್ರಶಸ್ತಿ): ಕಿಚ್ಚ ಸುದೀಪ್ (ಪೈಲ್ವಾನ್)
ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ)
ಅತ್ಯುತ್ತಮ ಪೋಷಕ ನಟ (ಕೆ.ಎಸ್ ಅಶ್ವಥ್ ಪ್ರಶಸ್ತಿ): ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
ಅತ್ಯುತ್ತಮ ಪೋಷಕ ನಟಿ: ಅನೂಷಾ ಕೃಷ್ಣ (ಬ್ರಾಹ್ಮಿ)
ಅತ್ಯುತ್ತಮ ಕಥೆ: ಜಯಂತ್ ಕಾಯ್ಕಿಣಿ ( ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ)
ಅತ್ಯುತ್ತಮ ಚಿತ್ರಕಥೆ: ಡಾರ್ಲಿಂಗ್ ಕೃಷ್ಣ (ಲವ್ ಮಾಕ್ ಟೈಲ್)
ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ)
ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್.ಭಾಸ್ಕರ್ (ಮೋಹನದಾಸ)
ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)
ಅತ್ಯುತ್ತಮ ಸಂಕಲನ: ಜಿ. ಬಸವರಾಜ ಅರಸ್ (ಝಾನ್ಸಿ ಐ.ಪಿ.ಎಸ್)
ಅತ್ಯುತ್ತಮ ಬಾಲನಟ: ಮಾಸ್ಟರ್ ಪ್ರೀತಂ (ಮಿಂಚು ಹುಳು)
ಅತ್ಯುತ್ತಮ ಬಾಲನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)
ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)
ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)
ಅತ್ಯುತ್ತಮ ಹಿನ್ನೆಲೆ ಗಾಯನ: ರಘು ದೀಕ್ಷಿತ್ (ಲವ್ ಮಾಕ್ ಟೈಲ್)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಡಾ. ಜಯದೇವಿ ಜಿಂಗಮ ಶೆಟ್ಟಿ (ರಾಗಭೈರವಿ)
Cinema
ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: ಪತ್ನಿ ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್!
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲಿನ ಮಾರಣಾಂತಿಕ ದಾಳಿ ಬಗ್ಗೆ ಮೊದಲ ಬಾರಿಗೆ ಬಾಲಿವುಡ್ ನಟಿ, ಸೈಫ್ ಅಲಿ ಖಾನ್ ಪತ್ನಿ ಕರೀನಾ ಕಪೂರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಕರೀನಾ ಕಪೂರ್, ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ, ತನ್ನ ಚಾಕುವಿನಿಂದ ದಾಳಿ ನಡೆಸಿದ, ಆದರೆ ಅಲ್ಲಿ ಬಹಿರಂಗವಾಗಿ ಇರಿಸಿದ್ದ ಯಾವುದೇ ನಗದು, ಚಿನ್ನಾಭರಣವನ್ನು ಆತ ಕದಿಯಲು ಯತ್ನಿಸಲಿಲ್ಲ.
ಹೊಡೆದಾಟದ ವೇಳೆ ದುಷ್ಕರ್ಮಿ ತುಂಬಾ ಆಕ್ರಮಣಕಾರಿಯಾಗಿ ದಾಳಿ ನಡೆಸಿದ ಈ ವೇಳೆ ಸೈಫ್ ಮೇಲೆ ನಿರಂತರವಾಗಿ ಆರು ಬಾರಿ ಚಾಕುವಿನಿಂದ ದಾಳಿ ಮಾಡಿದ. ಆದರೆ ಕಣ್ಣಮುಂದೆ ತೆರದಿಟ್ಟಿದ್ದ ಯಾವುದೇ ನಗದು, ಚಿನ್ನಾಭರಣವನ್ನು ಅವನು ಮುಟ್ಟಲಿಲ್ಲ ಎಂದು ಕರೀನಾ ಕಪೂರ್ ಹೇಳಿಕೆ ನೀಡಿದ್ದಾರೆ.
ಮೊದ ಮೊದಲಿಗೆ ಈ ದಾಳಿ ಕೇವಲ ಕಳ್ಳತನಕ್ಕಾಗಿ ಎಂದು ಭಾವಿಸಲಾಗಿತ್ತು. ಆದರೆ ಕರೀನಾ ಅವರು ನೀಡಿದ ಹೇಳಿಕೆ ಆಧರಿಸಿದ ಬಳಿಕ ಈ ದಾಳಿಯ ಹಿಂದೆ ಹಲವಾರು ಊಹಾಪೋಹಗಳು ಹುಟ್ಟುಕೊಂಡಿವೆ.
ಸೈಫ್ ಅಲಿ ಖಾನ್ ಅವರ ಮೇಲಿನ ದಾಳಿ ನಡೆದು ೪೮ ಗಂಟೆ ಕಳೆದಿದ್ದರೂ ಸಹಾ 30 ತಂಡಗಳನ್ನು ರಚಿಸಿರುವ ಮುಂಬೈ ಪೊಲೀಸರಿಂದ ಅಪರಾಧಿಯನ್ನು ಪತ್ತೆ ಹಚ್ಚಲಾಗಿಲ್ಲ.
Cinema
ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: ವೈದ್ಯರು ಹೇಳಿದ್ದೇನು?
ಮುಂಬೈ: ಬಾಲಿವುಡ್ ಖ್ಯಾತನಟ ಸೈಫ್ ಅಲಿ ಖಾನ್ ಅವರಿಗೆ ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಒಟ್ಟು ಆರು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಈ ಸಂಬಂಧ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಗುರುವಾರ ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು, ತಕ್ಷಣವೇ ಅವರನ್ನು ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸುಮಾರು ಆರು ಬಾರಿ ಇರಿದ ಕಾರಣದಿಂದ ಬೆನ್ನು ಮೂಳೆ, ದೇಹದ ಎರಡು ಭಾಗಗಳಲ್ಲಿ ಆಳವಾಗಿ ಗಾಯಗಳಾಗಿವೆ. ತ್ವರಿತಗತಿಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಪ್ರಣಾಪಾಯವಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ತಾವು ಬೆನ್ನು ಮೂಳೆ ಬಳಿ ಉಳಿದ ಚಾಕನ್ನು ಹೊರತೆಗೆಯುವ ಉದ್ದೇಶದಿಂದ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ನಾಳೆ ಅವರ ವಿಕ್ಷಣೆಗೆ ಅವಕಾಶ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
-
Hassan21 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
Chamarajanagar18 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
State13 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
National - International13 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Chamarajanagar10 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan16 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
Hassan16 hours ago
ಮೊಟ್ಟ ಮೊದಲ ಬೃಹತ್ ಎಜುಕೇಷನ್ ಎಕ್ಸ್ ಪೋ 2025 ರ ಪ್ರಚಾರ ವಾಹನಕ್ಕೆ ಚಾಲನೆ
-
National - International11 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ