Mandya
ಅಗ್ನಿ ಅವಘಡಗಳನ್ನು ಧೈರ್ಯವಾಗಿ ಎದುರಿಸಿ : ಅಂಬರೀಶ್ ಉಪ್ಪಾರ್
ಶ್ರೀರಂಗಪಟ್ಟಣ : ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ ಧೃತಿಗೆಡದೆ ಧೈರ್ಯವಾಗಿ ಎದುರಿಸಿ ಪ್ರಾಣ ಹಾನಿ ಹಾಗೂ ಆಸ್ತಿ ಹಾನಿಯಾಗದಂತೆ ಮುಂಜಾಗ್ರತೆ ಕ್ರಮ ವಹಿಸಿ ಸಮೀಪದ ಅಗ್ನಿಶಾಮಕ ಇಲಾಖೆಗೆ ಮಾಹಿತಿಯನ್ನು ತಿಳಿಸಬೇಕು ಎಂದು ಅಗ್ನಿಶಾಮಕ ಠಾಣಾಧಿಕಾರಿ ಅಂಬರೀಶ್ ಉಪ್ಪಾರ್ ತಿಳಿಸಿದರು.

ತಾಲೂಕಿನ ನೆಲಮನೆ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರಿನ ಸುಕೃತ ಸಂಸ್ಥೆ ಹಾಗೂ ಬಲ್ಲೇನಹಳ್ಳಿಯ ಡಿಜಿಟಲ್ ಗ್ರಂಥಾಲಯ ಹಾಗೂ ಅರಿವು ಕೇಂದ್ರದ ಸಹಕಾರದಲ್ಲಿ ಆಯೋಜಿಸಿರುವ “ಚೈತ್ರದ ಚಿಗುರು” ಗ್ರಾಮೀಣ ಮಕ್ಕಳ ಉಚಿತ ಬೇಸಿಗೆ ಶಿಬಿರದ ಅಂಗವಾಗಿ ಆಯೋಜನೆ ಮಾಡಿದ್ದ ಬೆಂಕಿ ನಂದಿಸುವ ಅಣಕು ಪ್ರದರ್ಶನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಅನೀಲ ಸೋರಿಕೆಯಿಂದ ಆಕಸ್ಮಿಕ ಬೆಂಕಿ ಅನಾಹುತಗಳು

ಸಂಭವಿಸಿದಂತಹ ಸಂದರ್ಭದಲ್ಲಿ ಆಮ್ಲಜನಕ ಪುರೈಕೆ ಆಗದಂತೆ ಕಡಿತಗೊಳಿಸಿ ನೀರಿನಲ್ಲಿ ನೆನೆಸಿದ ಗೋಣಿಚೀಲ ಅಥವಾ ಬೆಡ್ ಶೀಟ್ಗಳಿಂದ ಬಟ್ಟೆಯನ್ನು ಸಿಲೆಂಡರ್ ಗೆ ಸುತ್ತಿ ಬೆಂಕಿ ನಂದಿಸಬೇಕು. ಅಪಘಾತಗಳು ಪ್ರವಾಹ ಹಾಗು ವಿದ್ಯುತ್ ಸ್ಪರ್ಶ ಗಳಂತ ಆಕಸ್ಮಿಕ ಬೆಂಕಿ ಅವಘಡಗಳು ಸಂಭವಿಸಿದಾಗ ಜಾಗೃತೆ ವಹಿಸಿ ಹತ್ತಿರದ ಅಗ್ನಿಶಾಮಕ ಇಲಾಖೆಗೆ ವಿಷಯ ತಿಳಿಸಿ ಮುಂದಾಗ ಬಹುದಾದಂತಹ ಹಾನಿಯನ್ನ ತಪ್ಪಿಸಬೇಕು ಎಂದು ತಿಳಿಸಿದರು.

ಮುಖ್ಯ ಶಿಕ್ಷಕ ಕೃಷ್ಣಪ್ಪ ಮಾತನಾಡಿ, ಇರುವಂತಹ ಗುಪ್ತ ಪ್ರತಿಭೆಯನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ಶಿಬಿರದ ಉದ್ದೇಶವಾಗಿದ್ದು ನಮ್ಮ ಶಾಲೆಯಲ್ಲಿ ಸ್ಮಾರ್ಟ್ ತರಗತಿಗಳಿಗೆ ಬೇಕಾದಂತಹ ಆಧುನಿಕ ಎಲೆಕ್ಟ್ರಾನಿಕ್ ಡಿಜಿಟಲ್ ಉಪಕರಣಗಳು ಸೇರಿದಂತೆ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದಂತಹ ಪೂರಕ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಶತಮಾನ ತುಂಬಿರುವಂತಹ ಇತಿಹಾಸವುಳ್ಳ ಸ್ಥಳೀಯ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸಿ ಎಂದು ಪೋಷಕರಿಗೆ ತಿಳಿಸಿದರು.

ಬಲ್ಲೇನಹಳ್ಳಿ ಪಂಚಾಯಿತಿ ಪಿಡಿಓ ಸುರೇಶ್ ಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಮುಖ ಅಗ್ನಿಶಾಮಕ ತೇಜು ಮೂರ್ತಿ, ಸಿಬ್ಬಂದಿಗಳಾದ ನಂದನ್, ಮುರುಳಿ, ನೂರ್ ಸಾಬ್, ಶ್ರೀಶೈಲ, ಶಿಕ್ಷಕರಾದ ಲಕ್ಷ್ಮಿ, ಸಾಗರ್, ಸವಿತಾ, ಎಸ್ಡಿಎಂಸಿ ಅಧ್ಯಕ್ಷೆ ಜ್ಯೋತಿ ರಮೇಶ್, ಸದಸ್ಯ ರಘು, ಗ್ರಂಥಪಾಲಕ ಹಾಗೂ ಸಂಪನ್ಮೂಲ ವ್ಯಕ್ತಿ ಕೂಡಲಕುಪ್ಪೆ ಸೋಮಶೇಖರ್ ಸೇರಿದಂತೆ ಇತರರು ಹಾಜರಿದ್ದರು, ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದವರು ಕೃತಕ ಮಳೆಯನ್ನು ಸೃಷ್ಟಿಸಿದ ಸಂದರ್ಭದಲ್ಲಿ ಸುಮಾರು ನೂರಕ್ಕೂ ಹೆಚ್ಚು ಶಿಬಿರಾರ್ಥಿಗಳು ನೀರಿನ ಸಿಂಚನಕ್ಕೆ ಮಿಂದು ಕುಣಿದು ಕುಪ್ಪಳಿಸಿ ಹಾಡಿಗೆ ಹೆಜ್ಜೆ ಹಾಕಿದರು.

Mandya
ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ
ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು
ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.
ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.
Mandya
ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.
ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.
Mandya
ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
ಮದ್ದೂರು: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.

ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.
ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.
ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.
ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.
ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.
-
Mandya13 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya14 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan15 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Chamarajanagar21 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore19 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya13 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special8 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
-
Mandya11 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
