Mysore
ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು.
ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.
Mysore
ಮೈವಿವಿ ಕ್ರಾಫರ್ಡ್ ಹಾಲ್ ಮುಂದೆ ಅಹೋ ರಾತ್ರಿಯ ಧರಣಿ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯು ಆ.06 ರಿಂದ ವಿಷಯವಾರು ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎನ್ನುವ ಆದೇಶ ಹೊರಡಿಸಿದ್ದು, ಈ ಆದೇಶದ ವಿರುದ್ಧ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರಗಳಿಗೆ ಕಳೆದ ಶೈಕ್ಷಣಿಕ ವರ್ಷದಂತೆ ಮುಂದುವರಿಸಬೇಕೆಂದು ಅತಿಥಿ ಉಪನ್ಯಾಸಕರು ಮೈವಿವಿ ಕ್ರಾಫರ್ಡ್ ಭವನದ ಗೇಟಿನ ಮುಂದೆ ಅಹೋ ರಾತ್ರಿಯ ಧರಣಿ ಪ್ರಾರಂಭಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಘಟಕ ಕಾಲೇಜುಗಳ ಮತ್ತು ಸ್ನಾತಕೋತರ ಅಧ್ಯಯನ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರು ಭಾಗಿಯಾಗಿದ್ದರು.
Mysore
ಮೀಸಲಾತಿ ಪ್ರಕಟಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಮೈಸೂರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ರಾಜ್ಯ ಸರ್ಕಾರ ಇದೀಗ ಮೀಸಲಾತಿ ಪ್ರಕಟಿಸಿ ಆದೇಶ ಹೊರಡಿಸಿದೆ.
ಮೈಸೂರಿನ ಬೋಗಾದಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗಗಳ (ಬಿ) ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡ ಮಹಿಳೆ,
ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ, ಕಡಕೋಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗಗಳ (ಎ), ಶ್ರೀರಾಂಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ
ಸಾಮಾನ್ಯ ಮಹಿಳೆ, ರಮ್ಮನಹಳ್ಳಿ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗಗಳ (ಎ) ಮಹಿಳೆ, ಸಾಮಾನ್ಯ ಮೀಸಲಾತಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
Mysore
ಶ್ರೀ ರಾಮ ಸಕ್ಕರೆ ಕಾರ್ಖಾನೆ ಅತೀ ಶೀಘ್ರದಲ್ಲೇ ಪ್ರಾರಂಭ: ಡಿ. ರವಿಶಂಕರ್,
ಸಾಲಿಗ್ರಾಮ ತಾಲೂಕು ಚುಂಚನಕಟ್ಟೆಯ ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದಿರುವ ನಿರಾಣಿ ಶುಗರ್ಸ್ ನವರು ಗುತ್ತಿಗೆ ನೊಂದಣಿ ಮಾಡಿ ಕೊಂಡು ಕಾರ್ಖಾನೆ ಆರಂಭಿಸಲಿದ್ದಾರೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸಿ ನಂತರ ಮಾತನಾಡಿದ ಅವರು ಈಗಾಗಲೇ ಕಾರ್ಖಾನೆ ಆರಂಭಕ್ಕೆ ಕ್ರಮಕೈಗೊಳ್ಳಲು ನಿರಾಣಿ ಶುಗರ್ಸ್ ನವರು ನೊಂದಣಿಗೆ ಕ್ರಮಕೈಗೊಳ್ಳುವಂತೆ ಸಕ್ಕರೆ ಸಚಿವರಿಗೆ ಮನವಿ ಮಾಡಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಯ ಆರಂಭದ ಬಗ್ಗೆ ಸಿಹಿ ಸುದ್ದಿ ನೀಡುತ್ತೇನೆ ಎಂದರು.
ಕಳೆದ ಬಾರಿ ಬರಗಾಲದ ಹಿನ್ನಲೆಯಲ್ಲಿ ಇಲ್ಲಿ ಆಯೋಜಿಸಬೇಕಿದ್ದ ಜಲಪಾತ ಉತ್ಸವ ಕಾರ್ಯಕ್ರಮವನ್ನು ಈ ಬಾರಿ ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದು, ಅತಿ ಶೀಘ್ರದಲ್ಲಿಯೇ ಕಾರ್ಯಕ್ರಮದ ರೂಪು-ರೇಷೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಇದಲ್ಲದೇ ಚುಂಚನಕಟ್ಟೆ ಗ್ರಾಮವನ್ನು ಮತ್ತಷ್ಟು ಪ್ರವಾಸಿ ತಾಣ ಮಾಡಲು ಆಗಬೇಕಾದ ಅಭಿವೃದ್ದಿಗೆ ಇನ್ನಷ್ಟು ಅನುಧಾನವನ್ನು ಬಿಡುಗಡೆ ಮಾಡಿಸಲು ತಾವು ಬದ್ದರಾಗಿದ್ದು, ರೈತರಿಗೆ ಭತ್ತ ಸೇರಿದಂತೆ ಇನ್ನಿತರ ಬೆಳೆಯ ಬಿತ್ತನೆ ಕಾರ್ಯಕೈಗೊಳ್ಳಲು ಸಮರ್ಪಕ ಬಿತ್ತನೆ ಬೀಜ ವಿತರಣೆಗೆ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆಯವರಿಗೆ ಸೂಚಿಸಿರುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ವಿವಿಧ ಅಹವಾಲು ಸ್ವೀಕರಿಸಿದರು. ಇದಕ್ಕು ಮೊದಲು ಶಾಸಕರು ಚುಂಚನಕಟ್ಟೆ ಬಸವನ ವೃತ್ತದಿಂದ ಆಂಜನೇಯ ಸ್ವಾಮಿ ದೇವಾಲಯದವರಿಗೆ ಮಂಗಳ ವಾದ್ಯದೊಂದಿಗೆ ತಮ್ಮ ಪತ್ನಿ ಸುನಿತಾ ಅವರ ಜೊತೆ ಕಳಸ ಹೊತ್ತ ಮಹಿಳೆಯರು ಮತ್ತು ಸಾರ್ವಜನಿಕರ ಜೊತೆಗೆ ತೆರಳಿ ಕಾವೇರಿ ನದಿಗೆ ಪೂಜೆ ಸಲ್ಲಿಸಿ ಭಾಗಿನ ಅರ್ಪಿಸಿ ಶ್ರೀರಾಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನರಗುಂದ, ಗ್ರೇಡ್ 2 ತಹಸೀಲ್ದಾರ್ ಸಣ್ಣರಾಮಪ್ಪ, ದೇವಾಲಯದ ಇಓ ರಘು, ಶಿರಸ್ತೆದಾರ್ ಶಿವಕುಮಾರ್, ಉಪತಹಸೀಲ್ದಾರ್ ಕೆ.ಜೆ.ಶರತ್ ಕುಮಾರ್, ಎಇಇಗಳಾದ ವಿನುತ್,ರಾಜರಾಮ್, ಈಶ್ವರ್, ಗುರುರಾಜ್, ಆಯಾಜ್ , ಸಾಲಿಗ್ರಾಮ ಎಸ್ ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂಠಿ ಕುಮಾರ್, ಸಿ ಡಿ ಸಿ ಸದಸ್ಯ ಪರಿಶೀತ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹೇಶ್, ಎಂಸಿ ಮಾಜಿಅಧ್ಯಕ್ಷ ರಮೇಶ್, ತಾ.ಪಂ.ಮಾಜಿ ಅಧ್ಯಕ್ಷ, ಹರದನಹಳ್ಳಿ ಮಂಜಪ್ಪ, ಮಹದೇವಸ್ವಾಮಿ, ಮಾಜಿ ಸದಸ್ಯ ಅಂಕನಲ್ಲಿ ಎ ಟಿ ಗೋವಿಂದೇಗೌಡ , ಮುಖಂಡರಾದ ಪತ್ರ ಬರಹಗಾರ ವಸಂತ, ದಿಡ್ಡಹಳ್ಳಿ ಬಸವರಾಜು, ಲಕ್ಷ್ಮೀಪುರ ಸಣ್ಣಪ್ಪ, ಕಾಂಗ್ರೆಸ್ ಮಹಿಳಾ ಮುಖಂಡರು ಗಳಾದ ಉಷಾ, ನಯನ ಶಾಸಕರ ಆಪ್ತಕಾರ್ಯದರ್ಶಿ ಮಹದೇವ್,ಪುನೀತ್, ನವೀನ್ ಇದ್ದರು.
ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಸುವ ಪ್ರಯತ್ನ ಫಲಿಸದು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿ.ಎಂ.ಸ್ಥಾನದಿಂದ ಕೆಳ ಗಿಳಿಸಲು ಬಿ.ಜೆ.ಪಿ.ಮತ್ತು ಜೆಡಿಎಸ್ ಪಕ್ಷಗಳು ಮುಂದಾಗಿದ್ದು ಇದು ಫಲಗೂಡುವುದಿಲ್ಲ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಚುಂಚನಕಟ್ಟೆಯಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸಿ ನಂತರ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಉತ್ತಮವಾಗಿ ಆಡಳಿತ ನಡೆಸುತ್ತಿದ್ದು ಇವರನ್ನು ಕೆಳಗಿಸಲು ನಡೆಸಿರುವ ಹುನ್ನಾರಕ್ಕೆ ರಾಜ್ಯಪಾಲರು ಸಹಕಾರ ಕೊಡಬಾರದು ಅದರ ವಿರುದ್ದ ಕಾಂಗ್ರೇಸ್ ಪಕ್ಷ ಹೋರಾಟ ಮಾಡಲಿದ್ದು ಈ ಹೋರಾಟದಲ್ಲಿ ತಾವು ಸಕ್ರಿಯವಾಗಿ ಭಾಗವಹಿಸುವುದಾಗಿ ತಿಳಿಸಿದರು.
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.