Chikmagalur
ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಹೆಚ್.ಡಿ. ತಮ್ಮಯ್ಯ

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರೀಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.
ಸಖರಾಯಪಟ್ಟಣ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿ ಸೇರಿದಂತೆ ಸಖರಾಯಪಟ್ಟಣ ವ್ಯಾಪ್ತಿಯ ರಸ್ತೆ, ದೇವಸ್ಥಾನ, ಸಮುದಾಯ ಭವನ, ಕಾಂಪೌಂಡ್ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರೆವೇರಿಸುವುದರ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮಾಂತರ ಭಾಗವನ್ನು ಒಳಗೊಂಡಂತೆ ಕ್ಷೇತ್ರಕ್ಕೆ ಒಟ್ಟು ೨೫ ಕೋಟಿ ರೂ.ಗಳ ವಿಶೇಷ ಅನುದಾನ ನೀಡಲಾಗಿದೆ ಎಂದು ಹೇಳಿದರು.
ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ದೇವಸ್ಥಾನ, ಆಟೋ ನಿಲ್ದಾಣ ಹಾಗೂ ರಸ್ತೆ ಸೇರಿದಂತೆ ಸುಮಾರು ೨ ಕೋಟಿಗೂ ಹೆಚ್ಚಿನ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ೪ ತಿಂಗಳೊಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಗುಬ್ಬಿಹಳ್ಳಿ ಗೇಟ್‌ನಿಂದ ದೇವನೂರುವರೆಗೂ ಒಟ್ಟು ೨೯ ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದ ಅವರು ಅಭಿವೃದ್ಧಿ ಕಾರ್ಯಗಳೊಂದಿಗೆ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯಗಳನ್ನು ನಿಷ್ಠೆಯಿಂದ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರವು ಸಮಾಜದ ಎಲ್ಲಾ ಬಡವರು, ಹಿಂದುಳಿದ ವರ್ಗ ಹಾಗೂ ಶೋಷಿತ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿ ಅವರ ಏಳಿಗೆಗಾಗಿ ದುಡಿಯುವುದಲ್ಲದೇ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಎತ್ತಿನ ಹೊಳೆ ಯೋಜನೆ ಮೂಲಕ ಯೋಜನಾ ವ್ಯಾಪ್ತಿಯಲ್ಲಿ ನಮ್ಮ ಕ್ಷೇತ್ರ ಇಲ್ಲದಿದ್ದರು ಸಹ ಮನವಿ ಮೇರೆಗೆ ಹಳೇಬೀಡು, ದೇವನೂರು, ಬೆಳವಾಡಿ ಕೆರೆಗಳನ್ನು ಭರ್ತಿಗೊಳಿಸಿರುವುದು ಇಲ್ಲಿನ ರೈತರ ಸಂತಸಕ್ಕೆ ಕಾರಣವಾಗಿದೆ ಹೇಳಿದರು.
ಈ ಸಂದರ್ಭದಲ್ಲಿ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿ ಮನೆ ಸತೀಶ್, ಗಣೇಶ್, ರಾಜಣ್ಣ, ಕಿರಣ್, ಲೋಕೇಶ್, ಸಚಿನ್‌ಎತ್ತಿನ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Chikmagalur
ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನ ಕಟ್ಟಡ

ಚಿಕ್ಕಮಗಳೂರು: ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಜಿಲ್ಲಾ ಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಹೇಳಿದರು.
ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು.ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.
ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಎಂಎಲ್ಸಿ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು, ಮುಂತಾದವರು ಉಪಸ್ಥಿತರಿದ್ದರು
Chikmagalur
ಚಿಕ್ಕಮಗಳೂರಿನಲ್ಲಿ ಮನಸ್ಮಿತಾ ಅವರಿಗೆ ಗೌರವ ಸಮರ್ಪಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ಮನಸ್ಮಿತಾ ಅವರನ್ನು ಗೌರವಿಸಿದ ಜಿಲ್ಲಾ ಒಕ್ಕಲಿಗ ಸಂಘ
ಚಿಕ್ಕಮಗಳೂರು: ಪುಟ್ಟ ವಯಸ್ಸಿನಲ್ಲಿಯೇ ತನ್ನ ಅಸಾಮಾನ್ಯ ಬುದ್ಧಿಶಕ್ತಿಯಿಂದ 4 ಗ್ಲೋಬಲ್ ಅವಾರ್ಡ್ಗಳು ಮತ್ತು ಒಂದು ರಾಷ್ಟ್ರ ಪ್ರಶಸ್ತಿ ಹಾಗೂ 4 ರಾಜ್ಯ ಪ್ರಶಸ್ತಿಗಳನ್ನು ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಮಳಲೂರಿನ ಕಂಬಿಹಳ್ಳಿ ಗ್ರಾಮದ ಮನಸ್ಮಿತಾ ಅವರನ್ನು ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ವತಿಯಿಂದ ಗೌರವಿಸಲಾಯಿತು.
ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಹುಲಿಯಪ್ಪ ಗೌಡ ಮತ್ತು ಧನಲಕ್ಷ್ಮಿ ಕುಮಾರಿ ಡಿ.ಎಂ ದಂಪತಿ ಪುತ್ರಿ ಎರಡು ವರ್ಷದ ಮನಸ್ಮಿತಾ ಅವರಿಗೆ ಚಿಕ್ಕಮಗಳೂರಿನ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ನೆಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ವತಿಯಿಂದ ಗೌರವ ಸಮರ್ಪಣೆ ಮಾಡಿದ್ದಾರೆ.
ಈ ಕಾರ್ಯಕ್ರಮವನ್ನು ಸಾಮಾಜಿಕ ವಾಣಿಜ್ಯೋದ್ಯಮಿ ಪಲ್ಲವಿ ಸಿ.ಟಿ. ರವಿ ಉದ್ಘಾಟನೆ ಮಾಡಿದರು. ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ಅಧ್ಯಕ್ಷರಾದ ರೀನಾಸುಜೇಂದ್ರ, ಮೈಸೂರು ಜಿಲ್ಲಾ ಹಾಲು ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ಜಂಟಿ ನಿರ್ದೇಶಕರಾದ ಬಿ.ಎಲ್ ಶ್ವೇತ, ಟಿ. ರಾಜಶೇಖರ್, ಟಿ.ಡಿ. ಮಲ್ಲೇಶ್, ಎಂ.ಎಸ್. ಪ್ರದೀಪ್‌ಕುಮಾರ್, ಎ. ಪೂರ್ಣೇಶ್ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Chikmagalur
ಪರೀಕ್ಷಾ ಪಾವಿತ್ರ್ಯತೆಯನ್ನು ಕಡ್ಡಾಯವಾಗಿ ಪಾಲಿಸಿ: ಮೀನಾ ನಾಗರಾಜ್

ಚಿಕ್ಕಮಗಳೂರು: ಪರೀಕ್ಷಾ ಪಾವಿತ್ರ್ಯತೆಯನ್ನು ಕಡ್ಡಾಯವಾಗಿ ಪಾಲಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚನೆ ನೀಡಿದರು.
ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಿನ್ನೆ ಎಸ್.ಎಸ್.ಎಲ್.ಸಿ ಪರೀಕ್ಷೆ-೧ರ ಸಿದ್ದತೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ ೨೧ ರಿಂದ ಪ್ರಾರಂಭವಾಗಿ ಏಪ್ರಿಲ್ ೦೪ರ ವರೆಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಶಿಸ್ತು ಕ್ರಮಕ್ಕೆ ಒಳಪಡಿಸಲಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು. ಬಿಸಿಲಿನ ತಾಪ ಹೆಚ್ಚು ಇರುವುದರಿಂದ ಪ್ರಥಮ ಚಿಕಿತ್ಸಾ ವ್ಯವಸ್ಥೆಯೊಂದಿಗೆ ಹಾಜರಾಗುವಂತೆ ತಿಳಿಸಿದ ಅವರು. ಪರೀಕ್ಷೆಯು ವೆಬ್ ಕಾಸ್ಟಿಂಗ್ ಮೂಲಕ ನಡೆಯುತ್ತಿರುವುದರಿಂದ ನಿರಂತರ ವಿದ್ಯುತ್ ವ್ಯವಸ್ಥೆಗೆ ಕೆ.ಇ.ಬಿ.ಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಯು.ಪಿ.ಎಸ್ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲು ತಿಳಿಸಿದರು.
ಪರೀಕ್ಷಾ ಪೂರ್ವದಲ್ಲಿ, ಪರೀಕ್ಷೆಯಲ್ಲಿ ಜಿಲ್ಲೆಯ ಬಗ್ಗೆ ವ್ಯತಿರಿಕ್ತ ವರದಿ ಬರಬಾರದು. ಗುಣಮಟ್ದ ಫಲಿತಾಂಶದ ಮೂಲಕ ಜಿಲ್ಲೆಯು ಸುದ್ದಿಯಾಗಬೇಕು ಎಂದು ಹೇಳಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಪರೀಕ್ಷಾ ಕಾರ್ಯ ಪೂರ್ಣಗೊಳ್ಳುವವರೆಗೂ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ಪರೀಕ್ಷಾ ಪಾವಿತ್ರ್ಯತೆಯನ್ನು ಪಾಲಿಸಬೇಕು. ಜೊತೆಗೆ ಉಪನಿರ್ದೇಶಕರು[ಆಡಳಿತ] ಮತ್ತು ಉಪನಿರ್ದೇಶಕರು[ಅಭಿವೃದ್ದಿ] ರವರು ಪರೀಕ್ಷಾ ಕಾರ್ಯ ಸುವ್ಯವಸ್ಥಿತವಾಗಿ ನಿರ್ವಹಿಸಿ, ಪಾರದರ್ಶಕತೆ ಕಾಯ್ದಕೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ನಾಗರಾಜು ರವರು ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರದಲ್ಲಿ ಒಂದು ಕೊಠಡಿಗೆ ತಲಾ ೨೪ರಂತೆ, ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಚೇತನ ಮಕ್ಕಳಿಗೆ ಕೆಳಹಂತದ ಪರೀಕ್ಷಾ ಕೊಠಡಿಗಳನ್ನು ಮೀಸಲಿಡಬೇಕು. ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಕಲ್ಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ವೇಗದ ಇಂಟರ್ ನೆಟ್ ವ್ಯವಸ್ಥೆ, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ತಮ್ಮ ಲಾಗಿನ್ ನಲ್ಲಿಯೇ ಗೈರು ಹಾಜರಿ ಮಾಹಿತಿಯನ್ನು ಮತ್ತು ನಮೂನೆಯನ್ನು ಭರ್ತಿ ಮಾಡುವ ಬಗ್ಗೆ ತಿಳಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಉಪನಿರ್ದೆಶಕರು[ಆಡಳಿತ], ಉಪನಿರ್ದೇಶಕರು[ಅಭಿವೃದ್ದಿ] ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್‌ನ ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು, ಕ್ಷೇತ್ರ ಸಮನ್ವಯಾಧಿಕಾರಿಗಳು, ಬ್ಲಾಕಿನ ನೋಡಲ್ ಅಧಿಕಾರಿಗಳು,ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಕಸ್ಪೋಡಿಯನ್ನರು, ಕೆ.ಎಸ್.ಆರ್.ಟಿ.ಸಿ ವಿಭಾಗ, ಪೊಲೀಸ್ ವಿಭಾಗದ ಅಧಿಕಾರಿಗಳು ಪಾಲ್ಗೊಂಡಿದ್ದರು.
-
Kodagu21 hours ago
ಬೇಳೂರು ಬಾಣೆಯಲ್ಲಿ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ
-
Kodagu18 hours ago
ಕೊಡಗಿನ ಭರವಸೆಯ ಪ್ರತಿಭೆ ವರ್ತ ಕಾಳಿ ಕಿರುಚಿತ್ರದ ನಿರ್ದೇಶಕ: ಕೃತಾರ್ಥ ಮಂಡೆಕುಟ್ಟಂಡ
-
State14 hours ago
ಬಿಜೆಪಿ ಶೋಕಾಸ್ ನೋಟಿಸ್ ಕುರಿತು ಶಾಸಕ ಎಸ್ಟಿಎಸ್ ಫಸ್ಟ್ ರಿಯಾಕ್ಷನ್
-
Mysore17 hours ago
ಎಲ್ಲಾ ಪಕ್ಷದವರ ಮೇಲೂ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ: ಯತೀಂದ್ರ ಸಿದ್ದರಾಮಯ್ಯ
-
Mandya12 hours ago
ಎಂ.ಕೆ.ಸೋಮಶೇಖರ್ಗೆ ರಾಜ್ಯಮಟ್ಟದ ಛಾಯಗ್ರಾಹಕ ಹಾಗೂ ಕಲಾವಿದ ಪ್ರಶಸ್ತಿ ಪ್ರಧಾನ
-
State11 hours ago
ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
-
Mandya16 hours ago
ಭೂ ದಾಖಲೆ ಹೊಂದಿರುವವರನ್ನು ಓಕ್ಕಲೆಬ್ಬಿಸಬೇಡಿ : ಎನ್ ಚೆಲುವರಾಯಸ್ವಾಮಿ
-
Hassan15 hours ago
1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನರೆವೇರಿಸಿದ ಸ್ವರೂಪ್ ಪ್ರಕಾಶ್