Connect with us

Mandya

ಕ್ಷೇತ್ರದ ಸರ್ವಾoಗಿಣ ಅಭಿವೃದ್ಧಿ ಬದ್ದ : ಪಿ.ರವಿಕುಮಾರ್ ಗೌಡ

Published

on

ಮಂಡ್ಯ: ಕ್ಷೇತ್ರದ ಜನತೆ ಪ್ರೀತಿ, ವಿಶ್ವಾಸದೊಂದಿಗೆ ಆಶೀರ್ವಧಿಸಿದ್ದು, ಕ್ಷೇತ್ರದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಬದ್ದ ಎಂದು ಶಾಸಕ ಪಿ.ರವಿಕುಮಾರ್ ಗೌಡ ತಿಳಿಸಿದರು.

ಮಂಡ್ಯ ಕ್ಷೇತ್ರ ದ ತಂಗಳಗೆರೆ ಗ್ರಾಮದಲ್ಲಿ ನಡೆದ “ರವಿ ಗೂಡು” ಆಶ್ರಯ ಬಡಾವಣೆಯ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಲ್ಲೆಗೆರೆ ಗ್ರಾಮ ಪಂಚಾಯತ್ ನಿವೇಶನ ರಹಿತರ 25ವರ್ಷಗಳ ಕನಸು ಇಂದು ನನಸು “ರವಿ ಗೂಡು ಬಡಾವಣೆಯ ನಿರ್ಮಾಣ ಕಾರ್ಯಕ್ಕೆ ಅಡಿಗಲ್ಲು” ಹಾಕಲಾಗಿದ್ದು, ನಿವೇಶನ ರಹಿತರ 25ವರ್ಷಗಳ ಕನಸು ನನಸಾಗುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಚಿಕ್ಕಬಳ್ಳಿ ಕೃಷ್ಣಪ್ಪ, ತ್ಯಾಗರಾಜು, ಚಲನಚಿತ್ರ ನಟರಾದ ಮಂಡ್ಯ ಲೋಕೇಶ್, ಹಾಗೂ ಹಲ್ಲೆಗೆರೆ ಪಂಚಾಯತ್ ವ್ಯಾಪ್ತಿಯ ಮುಖಂಡರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

Mandya

ಸೋನಮ್ ವಾಂಗ್‌ಚುಕ್ ಬಂಧನ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ

Published

on

ಮಂಡ್ಯ : ಸೋನಮ್ ವಾಂಗ್‌ಚುಕ್ ಅವರ ಬಲವಂತದ ಬಂಧನ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗವನ್ನು ಖಂಡಿಸಿ, ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ, ಅಖಿಲ ಭಾರತ ವಕೀಲರ ಒಕ್ಕೂಟ ಹಾಗೂ ಕರ್ನಾಟಕ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಕೀಲ ಬಿ.ಟಿ. ವಿಶ್ವನಾಥ್, ಯಾವುದೇ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕಾದರೆ ಚುನಾವಣೆಗಳು ಹಾಗೂ ಸಾಂಸ್ಥಿಕ ವ್ಯವಸ್ಥೆಗಳಷ್ಟೇ ಅಲ್ಲ, ಜನರ ಸಕ್ರಿಯ ಭಾಗವಹಿಸುವಿಕೆಯೂ ಅಗತ್ಯವಾಗಿದೆ. ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಹತ್ತಿಕ್ಕುವುದು ಖಂಡನೀಯ ಎಂದರು.

ನೀಟ್ ಪರೀಕ್ಷೆ ನಡೆಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಬೆಳವಣಿಗೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದೂ ಒತ್ತಾಯಿಸಿದರು.

ಕರ್ನಾಟಕ ಜನಶಕ್ತಿಯ ಸಿದ್ದರಾಜು ಮಾತನಾಡಿ, ಕೇಂದ್ರ ಸರ್ಕಾರ ಜನರ ಹಿತಾಸಕ್ತಿಗಿಂತ ಬೇರೆ ವಿಚಾರಗಳಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಜೀವಹಾನಿಯಾಗಿರುವುದು ಅತ್ಯಂತ ದುಃಖಕರ ಸಂಗತಿ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕೌಸಲ್ಯ ಮಾತನಾಡಿ, ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ಬದಲಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಬಂಧಿಸಲಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದು ಅಮಾನವೀಯ ಮತ್ತು ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಆರೋಪಿಸಿದರು.

ಈ ಪ್ರಕರಣದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಬಳಕೆಗೆ ಆದೇಶ ನೀಡಿದ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು. ಬಡ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ನೀಟ್ ಪರೀಕ್ಷಾ ಪದ್ಧತಿಯನ್ನು ರದ್ದುಗೊಳಿಸಬೇಕು.ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಸೋನಮ್ ವಾಂಗ್‌ಚುಕ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು. ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಕೀಲರಾದ ಕಿಶೋರ್, ಅರ್ಜುನ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕೌಸಲ್ಯ, ಚೇತನ್ ಕುಮಾರ್, ಲಕ್ಷ್ಮಿ, ಆಕಾಶ್, ಸುಚಿತ್, ವಿನಯ್, ಕಾರ್ತಿಕ್, ಚಂದ್ರಶೇಖರ್ ಜಿ., ಕರ್ನಾಟಕ ಜನಶಕ್ತಿಯ ಶಿವಣ್ಣ, ನಿಂಗಮ್ಮ, ಕುಮಾರ, ಕಂದನ್, ಮಣಿ ಸೇರಿದಂತೆ ಹಲವು ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಇದ್ದರು.

Continue Reading

Mandya

ಪ್ರಬುದ್ಧ ಭಾರತ’ ನಿರ್ಮಾಣಕ್ಕೆ ರಾಜ್ಯ ಸರಕಾರ ಮುಂದಾಗಬೇಕು : ವೆಂಕಟಗಿರಿಯಯ್ಯ

Published

on

ಮಂಡ್ಯ: ಸಂವಿಧಾನದ ಆಶಯಗಳನ್ನು ಜಾರಿ ಮಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸಿನ `ಪ್ರಬುದ್ಧ ಭಾರತ’ ನಿರ್ಮಾಣಕ್ಕೆ ರಾಜ್ಯ ಸರಕಾರ ಮುಂದಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆಯ ಸ್ವಾತಂತ್ರ್ಯವನ್ನು ಸ್ಥಾಪಿಸಿಕೊಳ್ಳುವಂತೆ ಡಾ.ಬಿ.ಆರ್.ಅಂಬೇಡ್ಕರ್ ಕರೆ ನೀಡಿದ್ದರು. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮನುವಾದಿ ಮನಸ್ಥಿತಿ ಮತ್ತು ಸಂವಿಧಾನ ವಿರೋಧಿ ನೀತಿಯಿಂದ ಶೋಷಿತ ಸಮುದಾಯಗಳು ಹಿಂದೆಯೇ ಉಳಿದಿವೆ ಎಂದರು.

ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಹಾಗೂ ರೈತರು ಸ್ವಾತಂತ್ರö್ಯ ಹೀನರಾಗಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮಾನೆತೆಗಾಗಿ ಸಮರಾಂದೋಲನ ನಡೆಸಲೇಬೇಕಾದ ಅನಿವಾರ್ಹತೆ ಎದುರಾಗಿದೆ. ಭಾರತೀಯ ಮೂಲ ನಿವಾಸಿಗಳಿಗೆ ನಿಜವಾದ ಸ್ವಾತಂತ್ರ್ಯ ಒದಗಿಸಲು ಸರಕಾರಗಳು ಮುಂದಾಗಬೇಕಿದೆ ಎಂದು ಒತ್ತಾಯಿಸಿದರು.

ಎಸ್ಸಿಪಿ, ಟಿಎಸ್ಪಿ ಯೋಜನೆಯ ಆಶಯಕ್ಕೆ ವಿರುದ್ಧವಾದ ಕಲಂ 7(ಸಿ) ತೆಗೆಯಬೇಕು. ಅನ್ಯ ಯೋಜನೆಗಳಿಗೆ ಬಳಕೆಯಾದ 2.14 ಲಕ್ಷ ಕೋಟಿ ರೂ.ಗಳನ್ನು ಕ್ರೂಢೀಕರಿಸಿ ಎಸ್ಸಿ,ಎಸ್ಟಿ ಕುಟುಂಬಕ್ಕೆ ತಲಾ 25 ಲಕ್ಷ ಅನುದಾನವಾಗಿ ಘೋಷಿಸಬೇಕು. ಎಸ್ಸಿ,ಎಸ್ಟಿ ಭೂಮಿಗಳ ವರ್ಗಾವಣೆ ನಿಷೇಧ ಕಾಯ್ದೆಗೆ ತಿದ್ದುಪಡಿ ಮಂಡಿಸಬೇಕು. ಜಾತಿ ಸಮೀಕ್ಷಾ ವರದಿ ಬಿಡುಗಡೆ ಮಾಡಿ, ಶೇ.75ರ ಮೀಸಲಾತಿ ನೀತಿ ಜಾರಿ ಮಾಡಬೇಕು. ಎಸ್ಸಿ,ಎಸ್ಟಿ ದೌರ್ಜನ್ಯ ಕಾಯ್ದೆ ತಿದ್ದುಪಡಿ ಜಾರಿ ಮಾಡಬೇಕು. ಸರಕಾರಿ ಸೇವೆಯಲ್ಲಿ ಹೊರಗುತ್ತಿಗೆ ಪದ್ಧತಿ ರದ್ದು ಮಾಡಬೇಖು. ರೋಸ್ಟರ್ ಪದ್ದತಿಯಲ್ಲಿ ಇಲಾಖಾವಾರಿ ನೇಮಕಾತಿ, ಬ್ಯಾಕ್‌ಲಾಗ್ ಹುದ್ದೆ ತುಂಬುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿದರು.

ಮುಂಗಾರು ಮಳೆ ಕ್ಷೀಣಿಸಿದ್ದು, ಮಂಡ್ಯ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು. ಎಕರೆಗೆ ಕನಿಷ್ಠ 50 ಸಾವಿರ ರೂ.ಗಳ ಪರಿಹಾರ ಹಾಗೂ ರೈತರ ಸಾಲಮನ್ನಾ ಘೋಷಿಸಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಒದಗಿಸಲು ತುರ್ತು ಕ್ರಮ ಕೈಗೊಂಡು ರಕ್ಷಣೆಗೆ ಮುಂದಾಗಬೇಕೆAದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ, ಮಹಿಳಾ ಜಿಲ್ಲಾಧ್ಯಕ್ಷೆ ಜಿ.ಸುಶ್ಮಿತ, ತಾಲೂಕು ಅಧ್ಯಕ್ಷರಾದ ಮುತ್ತರಾಜು, ಸ್ವಾಮಿ, ಕುಮಾರ್, ಹೋಬಳಿ ಅಧ್ಯಕ್ಷ ಚಂದ್ರು, ಸಿ.ಅಶ್ವತ್ ಇದ್ದರು.

Continue Reading

Mandya

ಜು.27, 28 ರಂದು ಕರ್ನಾಟಕ ತತ್ವಪದ ಗಾಯನ ಸಮಾವೇಶ : ಪ್ರೊ.ಜಯಪ್ರಕಾಶಗೌಡ

Published

on

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಸಹಕಾರದೊಂದಿಗೆ ಕರ್ನಾಟಕ ಸಂಘದ ವತಿಯಿಂದ ಕರ್ನಾಟಕ ತತ್ವಪದ ಗಾಯನ ಸಮಾವೇಶವನ್ನು ಜು.27 ಮತ್ತು 28ರಂದು ತಾಲೂಕಿನ ಕೊಮ್ಮೇರಹಳ್ಳಿಯ ಬಿಜಿಎಸ್ ಸಂಸ್ಥೆಯ ಕುವೆಂಪು ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.27ರಂದು ಬೆಳಗ್ಗೆ 10.30ಕ್ಕೆ ತತ್ವಪದ ಸಮಾವೇಶದ ಚಾಲನೆ ಮತ್ತು ತತ್ವಪದ ಸಂಪದ ಸಂಚಿಕೆ ಬಿಡುಗಡೆಯನ್ನು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಶಾಸಕ ಪಿ.ರವಿಕುಮಾರ್‌ಗೌಡ ಭಾಗವಹಿಸಲಿದ್ದಾರೆ. ಜು.27ರಂದು ಬೆಳಗ್ಗೆ 11ಗಂಟೆಗೆ ಹಾಗೂ ಜು.28ರಂದು ಬೆಳಗ್ಗೆ 10 ಗಂಟೆಗೆ ತತ್ವಪದ ಗಾಯನ ನಡೆಯಲಿದೆ ಎಂದರು.

ಜು.28ರ ಸಂಜೆ 4 ಗಂಟೆಗೆ ಕಾರ್ಯಕ್ರಮದ ಸಮಾರೋಪ ನಡೆಯಲಿದ್ದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು, ಆದಿಚುಂದನಗಿರಿ ಶಾಖಾ ಮಠದ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಕಲಬುರಗಿಯ ಡಾ.ಮೀನಾಕ್ಷಿ ಬಾಳಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ಭಾಗವಹಿಸುವರು ಎಂದು ಹೇಳಿದರು.

ಕರ್ನಾಟಕ ಸಂಘದ ವತಿಯಿಂದ ಜು.25ರಂದು ಸಂಜೆ 4 ಗಂಟೆಗೆ ಜಾನಪದ, ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನಗರದ ಕೆವಿಎಸ್ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅಧ್ಯಕ್ಷತೆ ವಹಿಸುವರು. ಆಂಗ್ಲ ಉಪನ್ಯಾಸಕ ಎಸ್.ಸುದೀಪ್‌ಕುಮಾರ್, ಸಾಹಿತಿಗಳಾದ ಗುಣಸಾಗರಿ ಸಿ.ನಾಗರಾಜು, ಪ್ರೊ.ನರಸಿಂಹೇಗೌಡ ನಾರಣಾಪುರ ಉಪಸ್ಥಿತರಿರುವರು ಎಂದರು.

ಹೊನ್ನನಾಯಕನಹಳ್ಳಿ ಶಾಲೆಗೆ ವಿಜ್ಞಾನ ಶಿಕ್ಷಕ ಎನ್.ಜಿ.ಅಶೋಕ್ ಅವರಿಗೆ ಎಂ.ಸಿದ್ದರಾಮು ವಿಜ್ಞಾನ ಶಿಕ್ಷಕ ಪ್ರಶಸ್ತಿ, ತತ್ವಪದ ಕಲಾವಿದ ಸಿ.ಆರ್.ಸಂಜೀವಯ್ಯ ಅವಿರಿಗೆ ಗುಣಸಾಗರಿ ಸಿ.ನಾಗರಾಜು ಜಾನಪದ ಕಲಾವಿದ ಪ್ರಶಸ್ತಿ, ಜಾನಪದ ಕಲಾವಿದ ಉಮೇಶ್ ತೆಂಕನಹಳ್ಳಿ ಅವರಿಗೆ ಸಿ.ನಾಗರಾಜು ಜನಪದ ಕಲಾವಿದ ಪ್ರಶಸ್ತಿ ಹಾಗೂ ತತ್ವಪದ ಕಲಾವಿದೆ ನಂಜಮ್ಮ ಅವರಿಗೆ ಚನ್ನಮ್ಮ ಕರಿಯಪ್ಪ ಜನಪದ ಕಲಾವಿದೆ ಪ್ರಶಸ್ತಿಯನ್ನು ಉದ್ಯಮಿ ಜಿ.ಸಿ.ಪ್ರಸನ್ನಕುಮಾರ್ ಪ್ರದಾನ ಮಾಡುವರು ಎಂದು ವಿವರಿಸಿದರು.

ಕರ್ನಾಟಕ ಸಂಘದಿAದ ತತ್ತ÷್ವಪದಗಳ ತಾತ್ವಿಕ ಸಂಗಮ ಗುರು ಸ್ಮರಣೆ ಕಾರ್ಯಕ್ರಮವು ಜು.22ರಂದು ಸಂಜೆ 5 ಗಂಟೆಗೆ ನಗರದ ಕೆವಿಎಸ್ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ. ನಿವೃತ್ತ ಅರಣ್ಯ ಅಧಿಕಾರಿ ಎ.ಎಂ.ಅಣ್ಣಯ್ಯ ಗೌರವ ಉಪಸ್ಥಿತಿ ಇರಲಿದ್ದಾರೆ. ತತ್ವಪದ ಶಿಬಿರದ ನಿರ್ದೇಶಕರಾದ ಗಾಮನಹಳ್ಳಿ ಸ್ವಾಮಿ, ಹನುಮಂತು ಭಾಗವಹಿಸಲಿದ್ದು, ಕನ್ನಡ ಉಪನ್ಯಾಸಕಿ ಎಂ.ಕೆ.ದಿವ್ಯಜ್ಯೋತಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಎಚ್.ಡಿ.ಸೋಮಶೇಖರ್ ಇದ್ದರು.

Continue Reading

Trending

error: Content is protected !!