Chikmagalur
ಇಓ ಸುದೀಪ್ ಮೇಲೆ ಹ*ಲ್ಲೆ ಆರೋಪ: ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ವಿರುದ್ಧ ಪ್ರಕರಣ ದಾಖಲು
ಚಿಕ್ಕಮಗಳೂರು: ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಓ) ಸುದೀಪ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ಬಾಳೆಹೊನ್ನೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ಸಂಬಂಧ ಸಭೆ ನಡೆದಿತ್ತು. ಸಭೆ ಮುಗಿಸಿ ಸಿಎಂ ಕಾರ್ಯಕ್ರಮದಿಂದ ವಾಪಸ್ ತೆರಳುತ್ತಿದ್ದ ವೇಳೆ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ.

ಬಳಿಕ ರಾತ್ರಿ ಊಟ ಮುಗಿಸಿ ಹೋಟೆಲ್‌ನಿಂದ ಹೊರಬಂದಾಗ ತಮ್ಮನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಇಓ ಸುದೀಪ್ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೇರೂರು ಬಳಿ ನಡೆದಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಇಓ ಸುದೀಪ್ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ದೂರಿನ ಆಧಾರದ ಮೇಲೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಶ್ ಎಂಬುವರೂ ದೂರು ನೀಡಿದ್ದು, ತಮ್ಮ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Chikmagalur
ಮೂಗ್ತಿಹಳ್ಳಿಯಲ್ಲಿ ಆಟೋ ನಿಲ್ದಾಣದ ಬಹುದಿನದ ಬೇಡಿಕೆ ಈಡೇರಿಕೆ: ಡಾ. ರವಿ ಸಿ.ಟಿ
ಚಿಕ್ಕಮಗಳೂರು: ಮೂಗ್ತಿಹಳ್ಳಿಯ ಆಟೋ ಚಾಲಕರು ಹಾಗೂ ಮಾಲೀಕರ ಬಹುದಿನದ ಬೇಡಿಕೆಯಾಗಿದ್ದ ಆಟೋ ನಿಲ್ದಾಣಕ್ಕೆ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರಿ ಸುಮಾರು 3.5 ಲಕ್ಷ ರೂ. ಅನುದಾನ ನೀಡಲಾಗಿದ್ದು, ಇದೀಗ ಅದರ ಉದ್ಘಾಟನೆ ನೆರವೇರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ. ಟಿ. ಹೇಳಿದರು.

ಮೂಗ್ತಿಹಳ್ಳಿಯಲ್ಲಿ ಆಟೋ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಸ್ಥರು ಹಲವು ವರ್ಷಗಳಿಂದ ಆಟೋ ನಿಲ್ದಾಣದ ಅಗತ್ಯವನ್ನು ತಮ್ಮ ಗಮನಕ್ಕೆ ತಂದಿದ್ದರು. ಅದರಂತೆ ಪಂಚಾಯಿತಿಗೆ ತಮ್ಮ ಅನುದಾನದ ಮೂಲಕ ಆಟೋ ನಿಲ್ದಾಣ ನಿರ್ಮಾಣಕ್ಕೆ ನೆರವು ನೀಡಲಾಗಿದ್ದು, ಇಂದು ಉದ್ಘಾಟನೆ ಮಾಡಲಾಗಿದೆ ಎಂದು ತಿಳಿಸಿದರು.
ಮೂಗ್ತಿಹಳ್ಳಿ ಭಾಗದ ಜನರು ತಮ್ಮ ಪಕ್ಷದ ಮೇಲೆ ಪ್ರೀತಿ ಹಾಗೂ ವಿಶ್ವಾಸವನ್ನು ನಿರಂತರವಾಗಿ ತೋರಿಸಿಕೊಂಡು ಬಂದಿದ್ದಾರೆ. ಗ್ರಾಮಸ್ಥರು ದೇವಸ್ಥಾನ, ರಸ್ತೆ, ಆಟೋ ನಿಲ್ದಾಣ, ಬಸ್ ನಿಲ್ದಾಣ, ಸಹಕಾರ ಸಂಘ, ಬ್ಯಾಂಕ್ ಹಾಗೂ ಸಮುದಾಯ ಭವನ ಸೇರಿದಂತೆ ವಿವಿಧ ಅಗತ್ಯಗಳ ಕುರಿತು ಮನವಿ ಮಾಡಿದಾಗ, ಸಾಧ್ಯವಿರುವ ಬೇಡಿಕೆಗಳಿಗೆ ಸ್ಪಂದಿಸುವ ಪ್ರಯತ್ನ ಮಾಡಲಾಗಿದೆ ಎಂದು ರವಿ ಅವರು ಹೇಳಿದರು.
ಗ್ರಾಮಸ್ಥರು ಇದೀಗ ತಮ್ಮ ಗಮನಕ್ಕೆ ತಂದಿರುವ ಇನ್ನಿತರ ಸಮಸ್ಯೆಗಳನ್ನೂ ಪರಿಶೀಲಿಸಲಾಗುವುದು. ಮುಂದಿನ ದಿನಗಳಲ್ಲಿ ಅಗತ್ಯ ಶಕ್ತಿ ಹಾಗೂ ಅವಕಾಶ ದೊರೆತಾಗ ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮೂಗ್ತಿಹಳ್ಳಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿಯ ಸಮಸ್ಯೆಯನ್ನೂ ಗ್ರಾಮಸ್ಥರು ತಮ್ಮ ಗಮನಕ್ಕೆ ತಂದಿದ್ದಾರೆ. ಹೆದ್ದಾರಿಯಲ್ಲಿ ವಾಹನಗಳು ಹೆಚ್ಚಿನ ವೇಗದಲ್ಲಿ ಸಂಚರಿಸುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಈ ಭಾಗದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಈ ಸಮಸ್ಯೆಯ ಕುರಿತು ಗಮನ ಹರಿಸಲಾಗುವುದು ಎಂದು ರವಿ ಅವರು ಹೇಳಿದರು.
ಶಿರಗುಂದದಿಂದ ಮೂಡಿಗೆರೆವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಆರಂಭವಾಗಿದೆ. ಈ ಕಾಮಗಾರಿಯನ್ನು ಗುತ್ತಿಗೆದಾರರು ನಿಗದಿತ ವೇಗದಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಯ ಟೆಂಡರ್ ಅಂದಾಜು ಮೊತ್ತಕ್ಕಿಂತ ಶೇ.37ರಷ್ಟು ಕಡಿಮೆ ದರದಲ್ಲಿ ಪಡೆದಿರುವುದನ್ನು ಉಲ್ಲೇಖಿಸಿದ ಅವರು, ಇಂತಹ ದರದಲ್ಲಿ ಕಾಮಗಾರಿಯ ಗುಣಮಟ್ಟ ಮತ್ತು ಅನುಷ್ಠಾನ ಹೇಗಿರಲಿದೆ ಎಂಬುದನ್ನು ಗಮನಿಸಬೇಕಿದೆ ಎಂದರು.
ಈ ಕುರಿತು ಮಾತನಾಡಿದ ಗುತ್ತಿಗೆದಾರರು ರಾಜ್ಯ ಸರ್ಕಾರದ ಮಟ್ಟದಲ್ಲಿ ಲಂಚ ನೀಡಬೇಕಾದ ಪರಿಸ್ಥಿತಿ ಇದೆ. ಆದರೆ, ಕೇಂದ್ರ ಸರ್ಕಾರದ ಮಟ್ಟದಲ್ಲಿ ಲಂಚ ನೀಡುವ ಅಗತ್ಯ ಇಲ್ಲದಿರುವುದರಿಂದ ಕಾಮಗಾರಿಯನ್ನು ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಹೇಳಿರುವುದಾಗಿ ರವಿ ಅವರು ತಿಳಿಸಿದರು.
ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಹಾಗೂ ಪರಿಹಾರದ ವಿಚಾರದಲ್ಲಿಯೂ ಸ್ಥಳೀಯರ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು. ಸಂಬಂಧಪಟ್ಟವರಿಗೆ ನ್ಯಾಯಯುತವಾಗಿ ನೀಡಬೇಕಾದ ಪರಿಹಾರವನ್ನು ನೀಡಬೇಕು ಎಂದು ರವಿ ಅವರು ಹೇಳಿದರು.
ಈ ಭಾಗಕ್ಕೆ ಸಂಬಂಧಿಸಿದ ಪರಿಹಾರದ ಹಣವನ್ನು ಈಗಾಗಲೇ ತೆಗೆದಿಟ್ಟಿರುವುದಾಗಿ ತಿಳಿದುಬಂದಿದೆ. ಆದರೆ ಹಣ ಏಕೆ ಮತ್ತು ಯಾವ ಕಾರಣಕ್ಕೆ ಬಾಕಿ ಉಳಿದಿದೆ ಎಂಬುದು ತಮ್ಮ ಗಮನಕ್ಕೆ ಸ್ಪಷ್ಟವಾಗಿ ಬಂದಿಲ್ಲ. ಈ ಕುರಿತು ಪರಿಶೀಲಿಸಿ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಎಸ್.ಟಿ ಚಂದ್ರೇಗೌಡ, ಹಿರಿಯ ಮುಖಂಡರಾದ ಪದ್ಮರಾಜ್ ಜೈನ್, ಪದ್ಮಾನಂದ ಜೈನ್, ಗ್ರಾಮದ ಹಿರಿಯರಾದ ರಾಮಸ್ವಾಮಿ, ಪಕ್ಷದ ಮುಖಂಡರಾದ ಮಧು ಮೂಗ್ತಿಹಳ್ಳಿ ಸೇರಿದಂತೆ ಆಟೋ ಚಾಲಕರ ಸಂಘದ ಸದಸ್ಯರು, ಸ್ಥಳೀಯ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Chikmagalur
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ : ಹರೀಶ್
ಚಿಕ್ಕಮಗಳೂರು: ಬಾಲಕಾರ್ಮಿಕ ಪದ್ಧತಿದಂಥಹ ಪಿಡುಗುಗಳನ್ನು ಸಮಾಜದಿಂದ ಸಂಪೂ ರ್ಣವಾಗಿ ನಿರ್ಮೂಲನೆಗೊಳಿಸುವ ಸಂಬಂಧ ಸಾರ್ವಜನಿಕರು, ಪಾಲಕರು ಮತ್ತು ವಿವಿಧ ಸಂಘ-ಸಂಸ್ಥೆ ಗಳು ಸ್ವಯಂಪ್ರೇರಿತರಾಗಿ ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂರಕ್ಷಣಾ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್ ಹೇಳಿದರು.

ನಗರದ ಎ.ಪಿ.ಎಂ.ಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಾರ್ಮಿಕ ಇಲಾಖೆ, ಕೃಷಿ ಮಾರುಕಟ್ಟೆ ಇಲಾಖೆ, ಎ ಪಿಎಂಸಿ, ತರಕಾರಿ ವರ್ತಕರ ಸಂಘದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ಧ ಬಾಲ, ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲಕಾರ್ಮಿಕ ಹಾಗೂ ಬಾಲ್ಯ ವಿವಾಹ ಪದ್ಧತಿ ರಹಿತ ಜಿಲ್ಲೆಯನ್ನಾಗಿಸಲು ಹಾಗೂ ಈ ಪಿಡುಗುಗಳ ನಿರ್ಮೂಲನೆಗೆ ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು. ಗುಣಮಟ್ಟದ ಆರೋಗ್ಯ, ಶಿಕ್ಷಣ, ಮಕ್ಕಳ ಮೂಲ ಭೂತ ಹಕ್ಕಾಗಿದ್ದು ಇದನ್ನು ಖಾತರಿಪಡಿಸುವ ಮೂಲಕ ಸುಭದ್ರ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂ ದು ತಿಳಿಸಿದರು.
ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವ ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಸಮಾಜದ ಪ್ರತಿ ಯೋರ್ವರು ಜಾಗೃತರಾಗಬೇಕು. ಮಕ್ಕಳ ಕೈಯಲ್ಲಿ ಪುಸ್ತಕಗಳೂ ಇರಬೇಕೇ ಹೊರತು, ಕೆಲಸದ ಸಾಧನಗ ಳಲ್ಲ ಎಂಬ ಸಂದೇಶವನ್ನು ಸಮಾಜದ ಪ್ರತಿಯೊಬ್ರೂ ಅರ್ಥಮಾಡಿಕೊಳ್ಳಬೇಕು. ೧೪ ರಿಂದ ೧೮ ವರ್ಷದೊ ಳಗಿನ ಬಾಲ-ಕಿಶೋರ ಕಾರ್ಮಿಕರನ್ನು ವಾಣಿಜ್ಯ ಸಂಸ್ಥೆಗಳಲ್ಲಿ ಬಳಸುವುದು ಕಾನೂನು ಬಾಹಿರ ಎಂದರು.
ಹಿರಿಯ ಕಾರ್ಮಿಕ ನಿರೀಕ್ಷಕ ಹೆಚ್.ಕೆ.ಪ್ರಭಾಕರ್ ಮಾತನಾಡಿ ಎಪಿಎಂಸಿ ಮಾರುಕಟ್ಟೆಗೆ ಇಂದು ಭೇಟಿ ನೀಡುವ ಮೂಲಕ ಬಾಲ ಮತ್ತು ಕಿಶೋರ ಕಾರ್ಮಿಕರ ನಿರ್ಮೂಲನೆ ಕುರಿತು ಮಾರುಕಟ್ಟೆಯಲ್ಲಿದ್ದ ವಹಿ ವಾಟುದಾರರಿಗೆ ಹಾಗೂ ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ, ಈ ಬಗ್ಗೆ ಅರಿವು ಮೂಡಸಲಾಗುತ್ತಿದೆ ಎಂದು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿ?ದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಕ್ಕಳನ್ನು ದುಡಿಮೆಗೆ ಬಳಸದೆ, ಅವರಿಗೆ ಶಿಕ್ಷಣ ಪಡೆಯಲು ಹಾಗೂ ಉತ್ತಮ ಭವಿ? ರೂಪಿಸಿಕೊಳ್ಳಲು ಅಗತ್ಯವಾದ ಅವಕಾಶ ಕಲ್ಪಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತರಕಾರಿ ವರ್ತಕರ ಸಂಘದ ಅಧ್ಯಕ್ಷ ಎಂ.ಎನ್.ನಾಗರಾಜ್, ಕಾರ್ಯದರ್ಶಿ ಪ್ರೀ ತಮ್ ಜಿ.ವೈದ್ಯ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ವಿ.ಅಭಿನಂದ್, ಬಾಲ ಕಾರ್ಮಿಕ ಯೋ ಜನಾ ಸೊಸೈಟಿ ಸಿಬ್ಬಂದಿ ಕಾವ್ಯಶೆಟ್ಟಿ ಮುಂತಾದವರಿದ್ದರು.
Chikmagalur
ರೌಡಿ ಶೀಟರ್‌ಗಳ ಜೊತೆ ಪಾರ್ಟಿ: ಎಎಸ್ಐ ಅಮಾನತು
ಚಿಕ್ಕಮಗಳೂರು: ರೌಡಿ ಶೀಟರ್‌ಗಳ ಜೊತೆ ಬಾರ್‌ನಲ್ಲಿ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆಯ ಎಎಸ್ಐ ವೀರೇಂದ್ರ ಅವರನ್ನು ಅಮಾನತುಗೊಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಅವರು ಎಎಸ್ಐ ವೀರೇಂದ್ರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಒಂದು ವಾರದ ಹಿಂದೆ ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿರುವ ಬಾರ್‌ನಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದೆ. ಎಎಸ್ಐ ವೀರೇಂದ್ರ ಅವರು ಬಾರ್‌ನಲ್ಲಿ ಪಾರ್ಟಿ ಆಯೋಜಿಸಿದ್ದು, ರೌಡಿ ಶೀಟರ್‌ಗಳು ಸೇರಿದಂತೆ ಕೆಲವರೊಂದಿಗೆ ಇಡೀ ರಾತ್ರಿ ಪಾರ್ಟಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪಾರ್ಟಿ ವೇಳೆ ಜೋರಾಗಿ ಹಾಡು ಹಾಕಿದ್ದರಿಂದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಬಾರ್ ಮುಚ್ಚುವಂತೆ ಆಗ್ರಹಿಸಿ ಮಹಿಳೆಯರು ಸೇರಿದಂತೆ ನೂರಾರು ಗ್ರಾಮಸ್ಥರು ಬಾರ್ ಮುಂಭಾಗ ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದರು.
ಘಟನೆಗೆ ಸಂಬಂಧಿಸಿದಂತೆ ಎಎಸ್ಐ ವಿರುದ್ಧ ನಿರಂತರವಾಗಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಲಾಖಾ ಕ್ರಮ ಕೈಗೊಂಡಿದ್ದು, ವೀರೇಂದ್ರ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
-
State12 hours agoರೇಷನ್ ಕಾರ್ಡ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಅವಕಾಶ!!
-
Hassan9 hours agoಭಗತ್ಸಿಂಗ್ ಜನ್ಮದಿನದ ಅಂಗವಾಗಿ ಸೆ.27ರಂದು ರಾಜ್ಯಮಟ್ಟದ ವೈಚಾರಕ ಸಮಾವೇಶ
-
Mysore9 hours agoFIR ದಾಖಲಾದ ಬೆನ್ನಲ್ಲೇ ಪ್ರತಾಪ್ ಸಿಂಹ ಪ್ರತಿಕ್ರಿಯೆ
-
Kodagu11 hours agoಕರಿಕೆಯಲ್ಲಿ ಪೋಷಣ್ ವಾಟಿಕಾ ಉತ್ಪನ್ನ ಹಾಗೂ ಸ್ಥಳೀಯ ಆಹಾರ ಪ್ರದರ್ಶನ
-
National7 hours agoSIR ವಿಚಾರ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
-
State11 hours agoಕಸ್ತೂರಿ ರಂಗನ್ ವರದಿ; ಸುಪ್ರೀಂ ಕೋರ್ಟ್ನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರ ನೇಮಕ: ಡಿಕೆಶಿ
-
Chamarajanagar4 hours agoಸಂಚಾರಿ ನಿಯಮ ಉಲ್ಲಂಘನೆ ಪತ್ತೆಗೆ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ
-
Chikmagalur4 hours agoಸೆ. 30ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ : ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಂದ ಸ್ಥಳ ಪರಿಶೀಲನೆ
