Connect with us

Education

ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಟಿ ಸಮಾವೇಶ

Published

on

ಮಂಗಳೂರು: “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರಾವಳಿ ಮರಾಠಿ ಸಮಾವೇಶದ ಅಧ್ಯಕ್ಷ ಹೆಚ್.ರಾಜೇಶ್ ಪ್ರಸಾದ್ ಐಎಎಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು ನಮ್ಮ ಈ ಸಮಾವೇಶವು ಮುಖ್ಯವಾಗಿ ಶಿಕ್ಷಣ, ಸಂಘಟನೆ ಹಾಗೂ ಸ್ವಾಭಿಮಾನದ ಧೈಯಘೋಷವನ್ನು ಹೊಂದಿದ್ದೆ.

ಮೂಲತಃ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಈ ಸಮುದಾಯದ ಸುಮಾರು ಶೇಕಾಡ 80ರಷ್ಟು ಜನ ಇಂದಿಗೂ ಆರ್ಥಿಕವಾಗಿ ಹಿಂದುಳಿದಿದ್ದು ಇವರು ಅನೇಕ ಸಮಸ್ಯೆಗಳನ್ನು ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ, ಹಾಗೂ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಅನಾವರಣೆ ಮಡುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಸುಮಾರು 15 ರಿಂದ 20 ಸಾವಿರ ಜನ ಭಾಗವಹಿಸುವವರಿದ್ದಾರೆ.ಈ ಸಮಾವೇಶದಲ್ಲಿ ಮರಾಟಿಗರ ವಿವಿಧ ಆಚಾರ-ವಿಚಾರ ಸಂಸ್ಕಾರಗಳನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ, ಮೂರು ಗೋಷ್ಠಿಗಳು, ಉಪನ್ಯಾಸ ಹಾಗೂ ಸನ್ಮಾನ ಮತ್ತು ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದು, ನಮ್ಮ ಬಹು ನಿರೀಕ್ಷೆಯ “ಗದ್ದಿಗೆ” ಸ್ಮರಣ ಸಂಚಿಕೆಯನ್ನು ಡಾ.ಎಂ.ಮೋಹನ್ ಆಳ್ವರವರು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಸಮಾಜದ ಶ್ರೇಷ್ಠ ಸಾಧನೆಯನ್ನು ಮಾಡಿರುವ ಪದ್ಮಶ್ರೀ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕರವರನ್ನು ಸನ್ಮಾನ ಮಾಡಲಾಗುವುದು. ಮರಾಟಿಗರ ಅಹವಾಲುಗಳನ್ನು ನಮ್ಮ ಸಮಾವೇಶದ ಗೌರವಾಧ್ಯಕ್ಷರಾದ ಡಾ.ಕೆ.ಸುಂದರ್ ನಾಯಕ್ ರವರು ಮುಖ್ಯಮಂತ್ರಿಗಳಿಗೆ ಅರ್ಪಿಸಲಿದ್ದಾರೆ. ಹಾಗೆಯೇ ರಾಷ್ಟ್ರಮಟ್ಟದಲ್ಲಿ ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ ಸಮಾಜದ ಆನೇಕ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು“ ಎಂದರು.


ನ.9ರಂದು ಕರ್ನಾಟಕ ಮರಾಟಿ ಸಂಘ (ರಿ.) ಬೆಂಗಳೂರು ಇವರ ಸಹಕಾರದಿಂದ ಮರಾಟಿಗರಿಗಾಗಿಯೇ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದು ಈಗಾಗಲೇ 1500ಕ್ಕೂ ಹೆಚ್ಚು ಮರಾಟಿ ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಈ ಸಮಾವೇಶದ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ದೂರದ ಊರಿನ ಮರಾಟ ಬಂಧುಗಳಿಗೆ ವಸತಿ ವ್ಯವಸ್ಥೆ ಮತ್ತು ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎಂ. ಮೋಹನ್ ಆಳ್ವ, ಎನ್.ಎಸ್.ಮಂಜುನಾಥ್, ರತಿ ಪ್ರಭಾಕರ ನಾಯ್ಕ, ಹಾಗೂ ಪ್ರವೀಣ್ ಕುಮಾರ್ ಮುಗುಳಿ ನಮ್ಮೊಂದಿಗೆ ಸಹಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಮುಖ್ಯ ಅತಿಥಿಗಳಾಗಿ, ಶಾಸಕಉಮಾನಾಥ ಕೋಟ್ಯಾನ್, ಐವನ್ ಡಿ’ಸೋಜ, ಕೆ.ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಶಶಿಧರ್ ಶೆಟ್ಟಿ ಬರೋಡಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.


ಸಮಾರೋಪ ಸಮಾರಂಭದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಡಾ.ಎಂ ಮೋಹನ್ ಆಳ್ವ, ಕೆನರಾ ಬ್ಯಾಂಕ್ ಜಿ.ಎಂ. ಶ್ರೀ ರಾಮ ನಾಯ್ಕ್, ದ.ಕ,ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ“ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಡಾ.ಕೆ.ಸುಂದರ್ ನಾಯಕ್, ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ, ರತ್ನಾವತಿ, ಎನ್.ವಿಶ್ವನಾಥ್ ನಾಯಕ್, ಮಹಾಲಿಂಗ ನಾಯಕ್, ಗೌತಮ್ ಮತ್ತಿತರರು ಉಪಸ್ಥಿತರಿದ್ದರು.

Continue Reading

Education

Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ

Published

on

Free Coaching for KAS, Banking, SSC 2025 – ಸಮಾಜ ಕಲ್ಯಾಣ ಇಲಾಖೆಯಿಂದ ಸರ್ಕಾರಿ ನೌಕರಿಗಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

2024-25ನೇ ಸಾಲಿಗೆ ಸಂಪೂರ್ಣ ಉಚಿತ ತರಬೇತಿಯನ್ನು ಅರ್ಹ ಅಭ್ಯರ್ಥಿಗಳಿಗೆ ನೀಡುತ್ತಿದ್ದು, ಅರ್ಜಿ ಸಲ್ಲಿಸುವ ಹಾಗೂ ಉಚಿತ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಯಾವ ಯಾವ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು?

ಈ ಯೋಜನೆಯ ಅಡಿಯಲ್ಲಿ KAS, SSC, Banking, ರೈಲ್ವೆ, ನ್ಯಾಯಾಂಗ ಸೇವೆ ಸೇರಿದಂತೆ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುತ್ತದೆ. ಇದರ ಜೊತೆಗೆ ಮಾಸಿಕ 5,000ರೂ. ಆರ್ಥಿಕ ಸಹಾಯ ನೀಡಲಾಗುವುದು.

ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು?

SC ಹಾಗೂ ST ವರ್ಗಕ್ಕೆ ಸೇರಿದವರಾಗಿದ್ದು, ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆಧಾಯವು 5 ಲಕ್ಷ ರೂ. ಒಳಗೆ ಇರಬೇಕು ಹಾಗೂ ಅಭ್ಯರ್ಥಿಯ ವಯಸ್ಸು 21 ರಿಂದ 37 ವರ್ಷದ ಒಳಗಿರಬೇಕು.

ಆಯ್ಕೆ ಮಾಡಿಕೊಳ್ಳುವ ವಿಧಾನ – ಸಾಮಾನ್ಯ ಪ್ರವೇಶ ಪರೀಕ್ಷೆ ಮುಕಾಂತರ

2024-25ನೇ ಸಾಲಿಗೆ ಸಮಾಜ ಕಲ್ಯಾಣ ವತಿಯಿಂದ SC / ST ವಿದ್ಯಾರ್ಥಿಗಳಿಗಾಗಿ KAS / Banking / IBPS / SSC / Judicial Services & Group-C ಪರೀಕ್ಷೆಗಳಿಗೆ Free Coaching ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20 ಫೆಬ್ರವರಿ 2025:

ಅರ್ಜಿ ಸಲ್ಲಿಸಲು ಜಾಲತಾಣದ ವಿಳಾಸ : https://swdservices.karnataka.gov.in/IGCCD

Continue Reading

Education

ದ್ವಿಚಕ್ರ ವಾಹನ ಖರೀದಿಸಲು ಕೇಂದ್ರದಿಂದ 32,500ರೂ. ತನಕ ಸಹಾಯಧನ : ಅರ್ಜಿ ಸಲ್ಲಿಸೋದು ಹೇಗೆ?

Published

on

PM E Drive Scheme : ದೇಶದಲ್ಲಿ ವಿದ್ಯುತ್ ಚಲನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಾನ್ಯ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟವು ಸೆಪ್ಟೆಂಬರ್ 11, 2024ರಂದು PM ಎಲೆಕ್ಟ್ರಿಕ್ ಡ್ರೈವ್ ಎಂಬ ಯೋಜನೆಗೆ ಅನುಮೋದನೆ ನೀಡಿತು. ಈ ಯೋಜನೆಯು ಎರಡು ವರ್ಷದ ಅವಧಿಯಲ್ಲಿ ಒಟ್ಟು ₹10,900 ಕೋಟಿ ಆರ್ಥಿಕ ವೆಚ್ಚವನ್ನು ಹೊಂದಿದೆ.

ಪಿ. ಎಂ. ಇ ಡ್ರೈವ್ ಯೋಜನೆಯ ಉದ್ದೇಶ :

ಪೆಟ್ರೋಲ್, ಡೀಸೆಲ್ ಚಾಲಿತ ವಾಹನಗಳಿಂದ ಪರಿಸರದ ಮಾಲಿನ್ಯದ ಹೆಚ್ಚಾಗುತ್ತಿದ್ದೂ, ಇದನ್ನು ಹತೋಟಿಗೆ ತರಲು ಮತ್ತು ವಿದ್ಯುತ್ ಚಾಲಿತ ವಾಹನ ಉಪಯೋಗವನ್ನು ಹೆಚ್ಚಿಸುವ ಉದ್ದೇಶ ಈ ಯೋಜನೆಯದ್ದಾಗಿದೆ.

ಈ ಯೋಜನೆಯ ಅಡಿಯಲ್ಲಿ ವಿವಿಧ ವಿದ್ಯುತ್ ಚಾಲಿತ ವಾಹನಗಳನ್ನು ಖರೀದಿಸಲು ಕೇಂದ್ರ ಸರ್ಕಾರವು 32,500ರೂ. ವರೆಗೆ ಸಬ್ಸಿಡಿ ನೀಡುತ್ತಿದೆ.

ಯಾವ ವಾಹನಗಳಿಗೆ ಎಷ್ಟು ಸಬ್ಸಿಡಿ ?

• ಎಲೆಕ್ಟ್ರಿಕ್ ದ್ವಿ-ಚಕ್ರ ವಾಹನ ಖರೀದಿಸುವವರಿಗೆ ಮೊದಲ ವರ್ಷದಲ್ಲಿ 10,000ರೂ. ಹಾಗೂ ಎರಡನೇ ವರ್ಷ 5,000ರೂ. ನೀಡಲಾಗುವುದು.
• ತ್ರಿ-ಚಕ್ರ ವಾಹನಗಳಿಗೆ ಮೊದಲ ವರ್ಷ 25,000ರೂ. ಹಾಗೂ ಎರಡನೇ ವರ್ಷ 12,500ರೂ. ನೀಡಲಾಗುತ್ತದೆ.

ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಯ ಅಡಿಯಲ್ಲಿ ಲಾಭ ಪಡೆಯಲು ಮೊದಲು ನಿಮ್ಮ ವಿದ್ಯುತ್ ವಾಹನವನ್ನು ನಿಮ್ಮ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಣಿ ಮಾಡಿಸಿರಿ. ನಂತರದಲ್ಲಿ ನಿಮ್ಮ ವಾಹನದ ಡಿಲರ್ ನಿಮ್ಮ ಆಧಾರ್ ಸಂಖ್ಯೆ ಬಳಸಿ ನಿಮಗೆ e-Voucher ನೀಡುತ್ತಾರೆ.

ಇದರ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ – https://pmedrive.heavyindustries.gov.in/

Continue Reading

Education

ಈ ವರ್ಷದ ಸಂಕ್ರಾಂತಿ ಹಬ್ಬಕ್ಕೆ ಸರ್ಕಾರದಿಂದ ಮಹಿಳೆಯರಿಗೆ ಕೊಡುಗೆ : ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ!

Published

on

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತಹ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಇಲ್ಲಿಯವರೆಗೆ 15 ಕಂತಿನಲ್ಲಿ 30,000ರೂ. ನೀಡಲಾಗಿದೆ.

ಈ ಯೋಜನೆಯ ಹಣವನ್ನು ಪ್ರತಿ ತಿಂಗಳು ಅರ್ಹ ಮಹಿಳಾ ಪಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆಯ (DBT – Direct Benefit Transfer) ಮುಕಾಂತರ 2,000ರೂ. ಹಣವನ್ನು ಜಮಾ ಮಾಡಲಾಗುತ್ತಿದೆ.

16ನೇ ಕಂತಿನ ಹಣವನ್ನು ಯಾವಾಗ ಜಮಾ ಮಾಡಲಾಗುವುದು?

ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರತಿ ತಿಂಗಳು 11ನೇ ತಾರೀಕಿನಿಂದ 16ನೇ ತಾರೀಕಿನ ಒಳಗಾಗಿ ಜಮಾ ಮಾಡಲಾಗುತ್ತಿದೆ. ಅದೇ ರೀತಿ ಈ 16ನೇ ಕಂತಿನ 2,000ರೂ. ಹಣವನ್ನು ಜನವರಿ 11, 2025ರಿಂದ ಜನವರಿ 16, 2025ನೇ ತಾರೀಕಿನ ಒಳಗಾಗಿ ಜಮಾ ಮಾಡಲಾಗುವುದು…

Continue Reading

Trending

error: Content is protected !!