Connect with us

Chamarajanagar

ನಗರದಲ್ಲಿ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನ

Published

on

 

ಚಾಮರಾಜನಗರ:– ಸಂವಿಧಾನ ಶಿಲ್ಪಿ, ಭಾರತ ರತ್ನಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವನಮನ ಸಲ್ಲಿಸಲಾಯಿತು.

 

ಇದೇ ಸಂದರ್ಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪನಾಗ್, ಜಿ.ಪಂ.ಸಿಇಒ ಮೋನಾ ರೂತ್, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ತಹಶೀಲ್ದಾರ್ ಗಿರಿಜಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮುನಿರಾಜು ಹಾಗೂ ವಿವಿಧ ಸಮುದಾಯದ ಮುಖಂಡರು ಹಾಜರಿದ್ದರು.

Continue Reading

Chamarajanagar

ಅಪರಿಚಿತ ಶವ : ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ

Published

on

ಚಾಮರಾಜನಗರ: ಬೇಡರಪುರ ಗ್ರಾಮದ ಬಳಿಯಿರುವ ಪ್ರೇಸ್ಟೀಜ್ ಫ್ಯಾಕ್ಟರಿಯ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ವಾರಸುದಾರರ ಸುಳಿವಿಗೆ ಸಹಕರಿಸಲು ಕೋರಲಾಗಿದೆ.

ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, 158 ಸೆಂ.ಮೀ ಎತ್ತರ, ಕೋಲು ಮುಖ, ತೆಳ್ಳನೆ ಶರೀರ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ, ಕಪ್ಪು ಮೀಸೆ ಹಾಗೂ ಕಪ್ಪು, ಬಿಳಿ ಮಿಶ್ರಿತ ತಲೆ ಕೂದಲು ಇರುತ್ತದೆ. ಕಪ್ಪು, ಹಸಿರು ಮತ್ತು ಬಿಳಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದು, ಎದೆಯ ಭಾಗದಲ್ಲಿ ಎಸು ಎಂಬ ಹಚ್ಚೆ ಇರುತ್ತದೆ.

ಇವರ ವಾರಸದಾರರು ಇದ್ದಲ್ಲಿ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Continue Reading

Chamarajanagar

ಡಾ.ಬಿ.ಆರ್‌. ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಉದ್ಘಾಟನೆ

Published

on

ಚಾಮರಾಜನಗರ: ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ನೂತನವಾಗಿ ನೊಂದಣಿಯಾದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಉದ್ಘಾಟನೆಯನ್ನು ಗ್ರಾಮದ ಯಜಮಾನರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮ ಪಂಚಾಯಿತಿ ಸದಸ್ಯರು, ಬೌದ್ಧವಿಹಾರದ ಉಪಾಸಕರು, ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Continue Reading

Chamarajanagar

ಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು

Published

on

ಚಾಮರಾಜನಗರ: ಕಠಿಣ ಪರಿಶ್ರಮದಿಂದ ಕ್ರೀಡೆಯನ್ನು ಅಭ್ಯಾಸ ಮಾಡಿದರೆ ಗೆಲುವು ಖಚಿತವಾಗಲಿದೆ ಎಂದು ಚಾ.ನಗರ ವಿವಿ ದೈಹಿಕ ಶಿಕ್ಷಣದ ನಿರ್ದೇಶಕ ಡಾ.ಶಾಂತರಾಜು ಸಲಹೆ ನೀಡಿದರು.

ಚಾ.ನಗರ ವಿವಿಯ ಆವರಣದಲ್ಲಿ ಕ್ರೀಡಾಪಟುಗಳಿಗೆ ಶುಭ ಹಾರೈಸಿ ಮಾತನಾಡಿದರು. ಡಿ.10 ರಿಂದ 14 ರ ವರೆಗೆ ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿವಿಯ ಹಣಕಾಸು ಅಧಿಕಾರಿ ನಾಗೇಶ್ ಮಾತನಾಡಿ ಕ್ರೀಡಾಪಟುಯಲ್ಲಿ ಸೋಲು ಗೆಲುವು ಸಹಜ ಆದರೆ ಭಾಗವಹಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಂಡದ ತರಬೇತುದಾರ ಜಯಶಂಕರ್, ಪುಟ್ಟರಾಜು, ತಂಡದ ಮ್ಯಾನೇಜರ್ ಡಾ.ಶಂಕರ್, ಕ್ರೀಡಾ ಸಲಹಾ ಸಮಿತಿ ಸದಸ್ಯ ಜಿ ಬಂಗಾರು, ತಂಡದ ನಾಯಕ ಕಿರಣ್, ಕ್ರೀಡಾ ವಿದ್ಯಾರ್ಥಿಗಳಾದ ರಾಹುಲ್, ಅಭಿ, ವಿಕಾಸ್, ಯಶವಂತ್ ನಾಯಕ್, ಕಾರ್ತಿಕ್ ಯಶವಂತ್, ಮಹದೇವಪ್ರಸಾದ್, ಸಿದ್ದರಾಜು, ಸಂಜಯ್, ಪ್ರವೀಣ್ ಇತರ ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Trending

error: Content is protected !!