Connect with us

State

ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್

Published

on

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನಂತರ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್  ಭೇಟಿ ನೀಡಿದ್ದು, ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.

ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಒಂದು ಗಂಟೆ ಮುಂಚೆಯೇ ಪವನ್ ಕಲ್ಯಾಣ್ ಆಗಮಿಸಿದರು. ಈ ವೇಳೆ ಉಡುಪಿಯ ಊಟ ಸವಿದು ಬಳಿಕ ಕೃಷ್ಣ ಮಠದಲ್ಲಿ ಭಾಗವಹಿಸಿದ್ದಾರೆ.

ಪರ್ಯಾಯ ಪುತ್ತಿಗೆ ಮಠದಿಂದ ಪವನ್ ಕಲ್ಯಾಣ್‌ಗೆ ಭವ್ಯ ಸ್ವಾಗತ ಕೋರಲಾಯಿತು. ಕನಕನ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಅನಂತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೃಷ್ಣ ಮಠದ ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಬಳಿಕ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಸುವರ್ಣ ತೀರ್ಥಮಂಟಪದಲ್ಲಿ ಕೂತು ಪ್ರಸಾದ ಸ್ವೀಕರಿಸಿದ್ದಾರೆ.

ನಂತರ ಮಠದ ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಪರ್ಯಾಯ ಪುತ್ತಿಗೆ ಶ್ರೀಗಳ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಶ್ರೀಗಳು, ಇಸ್ಕಾನ್ ಮಾಯಾಪುರಿ ಶ್ರೀ ಭಾಗವಹಿಸಿದರು.

Continue Reading

Mysore

ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

Published

on

ಉಡುಪಿ: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿಯಾ್ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಗಾಯಗೊಂಡವರನ್ನು ಕಾರು ಚಲಾಯಿಸುತ್ತಿದ್ದ ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

ಕಾಪುನಿಂದ ಉಚ್ಚಿಲ ಕಡೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಇಸ್ಮಾಯಿಲ್ ಅವರನ್ನು ಎಸ್‌ಡಿಪಿಐ ಅಂಬುಲೆನ್ಸ್‌ನಲ್ಲಿ ಜಲಾಲುದ್ದೀನ್ ಉಚ್ಚಿಲ ಹಾಗೂ ಹಮೀದ್ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

State

ನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್‌ 6,000 ಪೊಲೀಸ್‌ ಭದ್ರತೆ

Published

on

ಬೆಳಗಾವಿ: ನಾಳೆಯಿಂದ ನಡೆಯಲಿರುವ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ.

ಸಿಎಂ, ಡಿಸಿಎಂ, ಸಚಿವರು, ಶಾಸಕರು ಸೇರಿದಂತೆ ಸಚಿವಾಲಯದ ಅಧಿಕಾರಿಗಳು, ಸಿಬ್ಬಂದಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತದಿಂದ ಈಗಾಗಲೇ 3 ಸಾವಿರ ರೂಮ್ ಬುಕ್ ಆಗಿದ್ದು, ಸಿಎಂ ಮತ್ತು ಡಿಸಿಎಂಗೆ ಅತಿಥಿ ಗೃಹದಲ್ಲಿ  ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದೆ.

6 ಸಾವಿರ ಪೊಲೀಸ್‌ ಭದ್ರತೆ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಬಳಿಕ ಎಚ್ಚೆತ್ತುಕೊಳ್ಳಲಾಗಿದ್ದು, ಅಧಿವೇಶನದ ವೇಳೆ ನಿಗಾ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಕಾರಣ  ಸುವರ್ಣಸೌಧದ ಸುತ್ತಮುತ್ತ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ ನಗರದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 6 ಎಸ್ಪಿ ದರ್ಜೆಯ ಪೊಲೀಸ್‌ ಅಧಿಕಾರಿಗಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3,820 ಪೊಲೀಸ್ ಸಿಬ್ಬಂದಿ, 500 ಹೋಂ ಗಾರ್ಡ್ಸ್, 8 ಕ್ಷಿಪ್ರ ಕಾರ್ಯಪಡೆ, 10 ಡಿಎಆರ್ ತುಕಡಿ, 35 ಕೆಎಸ್‌ಆರ್‌ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಫೋರ್ಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡಗಳು ಭದ್ರತೆಗಾಗಿ ನಿಯೋಜನೆಗೊಂಡಿವೆ. ಸುವರ್ಣ ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಇರಲಿದ್ದು, ಸುವರ್ಣ ಗಾರ್ಡನ್ ಮತ್ತು ಅಲಾರವಾಡ ಬಳಿ ಪ್ರತಿಭಟನೆಗಳಿಗೆ ಸ್ಥಳ ನಿಗದಿ ಮಾಡಲಾಗಿದೆ.
Continue Reading

Special

ಕರ್ನಾಟಕದಲ್ಲಿ 2.93 ಲಕ್ಷ ಹೊಸ BPL ಕಾರ್ಡ್ ಬಿಡುಗಡೆ : ನಿಮ್ಮ ಹೆಸರು ಹೊಸ ಪಟ್ಟಿಯಲ್ಲಿ ಇದೆಯೇ?

Published

on

ಕರ್ನಾಟಕ ಸರ್ಕಾರದಿಂದ ಬಡ ಕುಟುಂಬಗಳ ಸಹಾಯಕ್ಕಾಗಿ ಹೊಸ BPL (Below Poverty Line) ಕಾರ್ಡ್ ವಿತರಣೆ ಕಾರ್ಯ ನಡೆದಿದೆ. ರಾಜ್ಯದಾದ್ಯಂತ ಸುಮಾರು 2.93 ಲಕ್ಷ ಹೊಸ BPL ಕಾರ್ಡ್‌ಗಳು ಮಂಜೂರಾಗಿದ್ದು, ಅರ್ಜಿ ಸಲ್ಲಿಸಿದ ಕುಟುಂಬಗಳು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಈಗಲೇ ಪರಿಶೀಲಿಸಬಹುದು.

ಹೊಸ BPL ಕಾರ್ಡ್ ಪಡೆಯಲು ಅರ್ಹರು:
•ಆರ್ಥಿಕವಾಗಿ ದುರ್ಬಲ ಮತ್ತು ಬಡ ಕುಟುಂಬಗಳು
•ಆದಾಯ ಮಿತಿ ಸರ್ಕಾರ ನಿಗದಿಪಡಿಸಿರುವ ಮಾನದಂಡಕ್ಕೆ ಒಳಪಡುವವರು
•ಹಿಂದಿನಿಂದಲೂ BPL ಕಾರ್ಡ್ ಸಲ್ಲಿಸಿದರೂ ಮಂಜೂರಾಗದ ಕುಟುಂಬಗಳು
•ಪರಿಶೀಲನಾ ಹಂತದಲ್ಲಿ ತಪ್ಪಾಗಿ APL ಪಟ್ಟಿಗೆ ಸೇರಿಸಲ್ಪಟ್ಟ ಕುಟುಂಬಗಳು

ಪಟ್ಟಿ ಪರಿಶೀಲನೆ ಮಾಡುವುದು ಹೇಗೆ?
•ಅಧಿಕೃತ ಸಾರ್ವಜನಿಕ ಪೋರ್ಟಲ್‌ಗೆ ಭೇಟಿ ನೀಡಿ ನಿಮ್ಮ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಆಯ್ಕೆ ಮಾಡಿ
•ಕುಟುಂಬದ ಮುಖ್ಯಸ್ಥರ ಹೆಸರು ಅಥವಾ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿ
•‘Search’ ಒತ್ತಿದರೆ ಪಟ್ಟಿಯಲ್ಲಿ ನಿಮ್ಮ ವಿವರಗಳು ಕಾಣಿಸುತ್ತವೆ

ಈ ಹೊಸ ಹಂತದ ಮಹತ್ವ:
ಮುನ್ನಡೆಯ ವರ್ಷಗಳಲ್ಲಿ BPL ಕಾರ್ಡ್‌ಗಳ ಸಂಖ್ಯೆಯಲ್ಲಿ ಗೊಂದಲ, ಅನರ್ಹರ ಸೇರ್ಪಡೆ, ಅರ್ಹರು ಹೊರಬೀಳುವ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಸಂಪೂರ್ಣ ವಿಮರ್ಶೆ ನಡೆಸಿ ಹೊಸ ವ್ಯವಸ್ಥೆ ತರಲಾಗಿದೆ.

BPL ಕಾರ್ಡ್ ಪಡೆಯುವ ಪ್ರಯೋಜನಗಳು:
•ಅನ್ನಭಾಗ್ಯ ಯೋಜನೆಯಡಿ ಉಚಿತ/ಕಡಿಮೆ ದರದ ಧಾನ್ಯ
•ಸಿಲಿಂಡರ್, ಆರೋಗ್ಯ, ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಅನೇಕ ಸರ್ಕಾರಿ ಯೋಜನೆಗಳ ಸೌಲಭ್ಯ
•ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳಿಗೆ ಅರ್ಹತೆ

ಅರ್ಹ ಕುಟುಂಬಗಳು ಯಾವುದೇ ವಿಳಂಬವಿಲ್ಲದೆ ಪಡಿತರ ಮತ್ತು ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಬಹುದು.ಕರ್ನಾಟಕದ 2.93 ಲಕ್ಷ ಹೊಸ BPL ಕಾರ್ಡ್ ವಿತರಣೆಯು ಹಲವು ಬಡ ಕುಟುಂಬಗಳಿಗೆ ನಿಜವಾದ ಆಶಾಕಿರಣ.

Continue Reading

Trending

error: Content is protected !!