Kodagu
ಅಂಗನವಾಡಿ ನೌಕರರ ಪ್ರತಿಭಟನೆಗೆ ಬೆಂಬಲ ಇಲ್ಲ
ನಾಪೋಕ್ಲು : ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಜ.23 ರಂದು ನಡೆಯಲಿರುವ ಅಂಗನವಾಡಿ ನೌಕರರ ಪ್ರತಿಭಟನೆಗೆ ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘ (ರಿ) ಟಿ.ಯು.ಸಿ.ಸಿ. ಸಂಘಟನೆಯಿಂದ ಯಾವುದೇ ರೀತಿಯ ಬೆಂಬಲ ಇರುವುದಿಲ್ಲ ಎಂದು ಮಡಿಕೇರಿ ತಾಲೂಕು ಸಂಘದ ಅಧ್ಯಕ್ಷೆ ಸಿ.ಯು.ಪವಿತ್ರ ತಿಳಿಸಿದ್ದಾರೆ.

ಮಡಿಕೇರಿ ತಾಲೂಕಿನಲ್ಲಿರುವ ಟಿ.ಯು.ಸಿ.ಸಿ.ಸಂಘಟನೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಾ.23ರಂದು ಅಂಗನವಾಡಿ ಕೇಂದ್ರಗಳನ್ನು ಎಂದಿನಂತೆ ತೆರೆದು ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧ್ಯಕ್ಷೆ ಸಿ.ಯು.ಪವಿತ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kodagu
ಕಾಡಾನೆ ದಾಂಧಲೆ : ಸಂಕೇತ್ ಪೂವಯ್ಯ ಅರಣ್ಯ ಅಧಿಕಾರಿಗಳೊಂದಿಗೆ ಭೇಟಿ
ವಿರಾಜಪೇಟೆ: ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಕಾಕೋಟುಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಲ್ಕೇರಿ ಗ್ರಾಮದಲ್ಲಿ ಕಾಡಾನೆಗಳು ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸಿದ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅರಣ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಥಳೀಯ ರೈತರು ಮಾತನಾಡಿ ಈ ಭಾಗದಲ್ಲಿ ಕಾಡಾನೆಗಳು ಕಾಫಿ ತೋಟದೊಳಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆಗಳನ್ನು ನಾಶಗೊಳಿಸಿದ್ದು ಶಾಲೆ ಕಾಲೇಜುಗಳಿಗೆ ತೆರಳುವ ಮಕ್ಕಳಿಗೂ ಕೂಡ ಭಯದ ವಾತಾವರಣ ನಿರ್ಮಾಣವಾಗಿದೆ ಪರಿಹಾರ ನೀಡುವಂತೆ ಅಳಲು ತೋಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಕೇತ್ ಪೂವಯ್ಯ ಅವರು ಕಾಕೋಟುಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕೇರಿ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ಮೂರು ಕಾಡಾನೆಗಳು ಈ ಭಾಗದ ಕಾಫಿ ತೋಟಗಳಿಗೆ ನುಗ್ಗಿ ಬಾಳೆ ಸೇರಿದಂತೆ ಇನ್ನಿತರ ಕೃಷಿ ಪಸಲುಗಳನ್ನು ತುಳಿದು ಧ್ವಂಸಗೊಳಿಸಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿ, ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ಕಾಡಾನೆಗಳ ಸಂಚಾರ ಕಂಡುಬಂದಿದ್ದು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಇಂದಿನಿಂದಲೇ ಈ ಭಾಗದಲ್ಲಿ ಸಂಚರಿಸುತ್ತಿರುವ ಕಾಡಾನೆಗಳ ಚಲನವಲನಗಳನ್ನು ಕಂಡು ಹಿಡಿದು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡಿ ತಕ್ಷಣವೇ ವೈಜ್ಞಾನಿಕವಾಗಿ ಕಾರ್ಯಾಚರಣೆ ನಡೆಸಿ ಸಮೀಪದ ಕಾಡಿಗೆ ಅಟ್ಟುವಂತೆ ಸಂಕೇತ್ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಅಲ್ಲದೆ ಈ ಭಾಗದಲ್ಲಿ ಕಾಡಾನೆಗಳು ವಾಸಸ್ಥಾನ ಮಾಡಲು ಬಿಡದೆ ಇಲ್ಲಿಗೆ ಲಗ್ಗೆ ಇಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಹಾಗೂ ಹಿಂತಿರುಗಿ ಕಾಫಿ ತೋಟದೊಳಗೆ ಬಾರದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಂಡು ಸಿಬ್ಬಂದಿಗಳನ್ನು ಹಗಲು ರಾತ್ರಿ ಗಸ್ತು ತಿರುಗುವಂತೆ ನಿರ್ದೇಶನವನ್ನು ನೀಡಿದರು. ಕಾಡಾನೆಗಳಿಂದ ಈ ಭಾಗದ ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದರು.

ಕೂಲಿ ಕೆಲಸವನ್ನೇ ನಂಬಿ ಜೀವನ ನಡೆಸುತ್ತಿರುವ ಕಾರ್ಮಿಕ ಕುಟುಂಬಗಳು ಕೂಲಿ ಕೆಲಸವೂ ಸಿಗದೆ ಕಷ್ಟದಲ್ಲಿ ಬದುಕು ನಡೆಸುತ್ತಿದ್ದಾರೆ. ತೋಟದಲ್ಲಿ ಕೆಲಸ ನಿರ್ವಹಿಸಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಕಾಡು ಪ್ರಾಣಿಗಳ ಹಾವಳಿಯಿಂದ ಹಲವು ಸಾವು, ನೋವುಗಳು ಸಂಭವಿಸಿದ್ದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳುತ್ತಿಲ್ಲ ಎಂಬ ಆರೋಪಗಳು ಗ್ರಾಮಸ್ಥರಿಂದ ಕೇಳಿಬಂತು.
ಈ ಸಂದರ್ಭದಲ್ಲಿ ಸ್ಥಳಿಯರು, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪ್ರಮುಖರಾದ ಪೊನ್ನಕ್ಕಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮೋಹನ್ ಎ.ಬಿ. ಸ್ಥಳೀಯರಾದ ತಿಮ್ಮಯ್ಯ, ನಿಮಿತ, ಸೇರಿದಂತೆ ಅರಣ್ಯ ಸಿಬ್ಬಂದಿಗಳು ಮತ್ತು ಆರ್.ಆರ್.ಟಿ. ಮತ್ತು ಆನೆ ಕಾರ್ಯಾಪಡೆ, ಕ್ಷೀಪ್ರ ಕಾರ್ಯಪಡೆ ಸಿಬ್ಬಂದಿಗಳು ಇನ್ನಿತರರು ಹಾಜರಿದ್ದರು.
Kodagu
ಇನ್ಮುಂದೆ ಸುಂಟಿಕೊಪ್ಪ ಹೈವೇಯಲ್ಲಿ ಸಾಗುವ ವಾಹನಗಳು ANPR ಕ್ಯಾಮರಾದ ಕಣ್ಗಾವಲಿನಲ್ಲಿ
ಮಡಿಕೇರಿ: ಇನ್ಮುಂದೆ ಸುಂಟಿಕೊಪ್ಪ ಪಟ್ಟಣದಲ್ಲಿ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ ಮಾಡುವುದು, ಅಪ್ರಾಪ್ತ ವಯಸ್ಸಿನವರು ವಾಹನ ಚಲಾಯಿಸುವುದು, ಓವರ್ ಸ್ಪೀಡ್, ತ್ರಿಬ್ಬಲ್ ರೈಡಿಂಗ್, Rash ಡ್ರೈವಿಂಗ್, ಯರ್ರಾಬಿರ್ರಿ ಪಾರ್ಕಿಂಗ್ ಇತ್ಯಾದಿ ರೀತಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಕಾದಿದೆ ಶಾಸ್ತಿ. ಯಾಕೆಂದರೆ ಇದೀಗ ಸುಂಟಿಕೊಪ್ಪ ಪಟ್ಟಣದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನಗಳ ಮೇಲೆ ANPR ಕ್ಯಾಮರಾ ಕಣ್ಗಾವಲಿಡಲಿದೆ.

ಸುಂಟಿಕೊಪ್ಪ ನಗರದ ಹೃದಯ ಭಾಗವಾಗಿರುವ ಕನ್ನಡ ವೃತ್ತದ ಸಮೀಪದಲ್ಲಿ ಅಂದಾಜು ರೂ. 1.80 ಲಕ್ಷ ವೆಚ್ಚದಲ್ಲಿ ANPR ಕ್ಯಾಮರಾವನ್ನು ಅಳವಡಿಸಲಾಗಿದ್ದು, ಇದು ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳ ಮೇಲೆ ನಿಗಾ ಇಡಲಿದೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವುದು ANPR ಕ್ಯಾಮರಾದಲ್ಲಿ ಸೆರೆ ಆದಲ್ಲಿ ಅಟೋಮ್ಯಾಟಿಕ್ ಆಗಿ ಜುಲ್ಮಾನೆಯ ಚನಲ್ ವಾಹನದ ಮಾಲೀಕರಿಗೆ ರವಾನೆ ಆಗಲಿದೆ. ಹೀಗಾಗಿ ಕಡ್ಡಾಯವಾಗಿ ವಾಹನ ಸವಾರರು ಸಂಚಾರ ನಿಯಮವನ್ನು ಪಾಲಿಸುವಂತೆ ಸುಂಟಿಕೊಪ್ಪ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ಈ ಕ್ಯಾಮರಾ ಅಳವಡಿಸುವ ಸಂದರ್ಭ ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್ ಮೇಲ್ವಿಚಾರಣೆ ನಡೆಸಿದರು. ಇದಕ್ಕೆ ಪೊಲೀಸ್ ಸಿಬ್ಬಂದಿಗಳು ಸಹಕಾರ ನೀಡಿದರು.
Kodagu
ಆನೆ ಮಾನವ ಸಂಘರ್ಷ ತಡೆಗೆ ಯುವ ಜಾಗೃತಿ ಅಗತ್ಯ : ಮೇಜರ್ ಪ್ರೊ.ಬಿ.ರಾಘವ ಅಭಿಮತ
ಮಡಿಕೇರಿ: ಇತ್ತೀಚಿನ ವರ್ಷಗಳಲ್ಲಿ ಆನೆ ಮಾನವ ಸಂಘರ್ಷ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ.
ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಜನ್ಮದಿನದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಕೂಟದ ೧೧೭ನೇ ಪುಸ್ತಕ, ಬರಹಗಾರ್ತಿ ಚೀಯಕಪೂವಂಡ ಶ್ವೇತನ್ ಚಂಗಪ್ಪ ಅವರು ರಚಿಸಿರುವ “ಕೊಡಗ್ಲ್ ಆನೆ-ಮಾಲವ ಪಣಂಗಲ್” ನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಆನೆ ಮಾನವ ಸಂಘರ್ಷದಿಂದ ಕೇವಲ ಮಾನವನಿಗೆ ಮಾತ್ರ ಹಾನಿಯಾಗುತ್ತಿಲ್ಲ, ಆನೆಗಳಿಗೂ ಹಾನಿಯಾಗುತ್ತಿದೆ. ಸಮಸ್ಯೆಯ ಗಂಭೀರತೆ ಮತ್ತು ಕಾರಣಗಳ ಕುರಿತು ಯುವ ಸಮೂಹದಲ್ಲಿ ಜಾಗೃತಿ ಮೂಡಿಸಬೇಕು. ಅರಣ್ಯ ನಾಶ, ಟಿಂಬರ್ ಲಾಬಿ, ಆಹಾರದ ಕೊರತೆ, ಮಾನವನ ಅತಿಕ್ರಮಣ, ಮಿತಿ ಮೀರುತ್ತಿರುವ ಪ್ರವಾಸಿಗರ ಸಂಖ್ಯೆ, ಅತಿಯಾದ ತ್ಯಾಜ್ಯ ಎಂಬಿತ್ಯಾದಿ ವಿಚಾರಗಳು ಕಾಡಾನೆಗಳ ದಾಳಿಗೆ ಕಾರಣವಾಗುತ್ತಿದೆಯೇ ಎನ್ನುವ ಕುರಿತು ಚಿಂತನೆ ನಡೆಯಬೇಕು. ಯುವ ಸಮೂಹ ಈ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು, ಪರಿಸರ ಮತ್ತು ಪ್ರಾಣಿಗಳ ಬಗ್ಗೆ ಕಾಳಜಿ ತೋರಬೇಕು ಎಂದು ಕರೆ ನೀಡಿದರು.
ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಮಾತನಾಡಿ ಓದುಗರು ಪುಸ್ತಕಗಳನ್ನು ಓದಿದರೆ ಸಾಲದು, ಅದರಲ್ಲಿರುವ ಸರಿ ತಪ್ಪುಗಳನ್ನು ವಿಶ್ಲೇಷಣೆ ಮಾಡಬೇಕು ಮತ್ತು ಬರಹಗಾರರ ಗಮನಕ್ಕೆ ತರಬೇಕು. ಈ ರೀತಿ ಮಾಡುವುದರಿಂದ ಬರಹಗಾರರು ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಬರಹಗಾರರಿಗೆ ಪ್ರೋತ್ಸಾಹ ನೀಡಿದಂತ್ತಾಗುತ್ತದೆ ಎಂದು ಹೇಳಿದರು.

“ಕೊಡಗ್ಲ್ ಆನೆ-ಮಾಲವ ಪಣಂಗಲ್” ಕೊಡವ ಪುಸ್ತಕದ ಬರಹಗಾರ್ತಿ ಚೀಯಕಪೂವಂಡ ಶ್ವೇತನ್ ಚಂಗಪ್ಪ ಮಾತನಾಡಿ ಕಾಡಾನೆಗಳು ನಾಡಿಗೆ ಬರುತ್ತಿವೆ ಎನ್ನುವ ಮಾತು ತಪ್ಪು, ಆನೆಗಳ ಜಾಗ ಮತ್ತು ಮಾರ್ಗವನ್ನು ಮಾನವನೇ ಅತಿಕ್ರಮಣ ಮಾಡಿಕೊಂಡಿದ್ದಾನೆ. ಆನೆ ಮಾನವನ ನಡುವಿನ ಸಂಘರ್ಷದಲ್ಲಿ ಮಾನವನಿಗೇ ಮಾತ್ರ ಹಾನಿಯಾಗುತ್ತಿಲ್ಲ, ಆನೆಗಳಿಗೂ ಹಾನಿಯಾಗುತ್ತಿದೆ. ಮಾನವನ ತಪ್ಪಿನಿಂದ ಆನೆಗಳು ಜೀವವನ್ನು ಕಳೆದುಕೊಳ್ಳುತ್ತಿವೆ ಎಂದರು.
ಮುಖ್ಯವಾಗಿ ಆನೆ ಮಾನವ ಸಂಘರ್ಷ ತಡೆಗೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾಗಿದೆ. ತೋಟಗಳಲ್ಲಿ ಜೇನು ಕೃಷಿ ಮಾಡಿದರೆ ಆನೆಗಳು ಬರುವುದಿಲ್ಲವೆಂದು ಅಧ್ಯಯನ ಹೇಳುತ್ತದೆ. ಬೆಳೆಗಾರರು ಈ ಬಗ್ಗೆ ಚಿಂತನೆ ನಡೆಸಬೇಕಾಗಿದೆ ಎಂದು ಶ್ವೇತನ್ ಚಂಗಪ್ಪ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು, ಇಂದು ಪರಿಸರ ದುರ್ಬಳಕೆಯಾಗುತ್ತಿದ್ದು, ಮಾನವನ ದುರಾಸೆಯೇ ಕಾಡಾನೆ ದಾಳಿಗೆ ಕಾರಣ. ಹಿಂದೆ ಕೊಡಗಿನಲ್ಲಿ ದೇವರಕಾಡು, ಗೋಮಾಳಗಳ ಮೂಲಕ ಕಾಡುಗಳನ್ನು ರಕ್ಷಿಸಲಾಗುತ್ತಿತ್ತು. ಕಕ್ಕಡ, ಕೈಲ್ ಪೊಳ್ದ್, ಪುತ್ತರಿ, ಕಾವೇರಿ ತೀರ್ಥೋದ್ಭವ ಸೇರಿದಂತೆ ಕೊಡಗಿನ ಹಬ್ಬಗಳೆಲ್ಲವೂ ಪರಿಸರಕ್ಕೆ ಪೂರಕವಾಗಿದೆ ಮತ್ತು ಪರಿಸರ ಭಕ್ತಿಯಿಂದ ಕೂಡಿದೆ. ಇದರ ಹಿಂದೆ ಪರಿಸರವನ್ನು ಪೂಜಿಸಿ, ಉಳಿಸುವ ಪರಿಕಲ್ಪನೆ ಇದೆ. ಹಿರಿಯರು ಪರಿಸರವನ್ನು ಪೂಜಿಸುತ್ತಿದ್ದರು. ಆದರೆ ಇಂದು ಮಾನವನ ದುರಾಸೆ ಹೆಚ್ಚಾಗಿದೆ, ಪರಿಸರದ ಮೇಲೆ ಆಕ್ರಮಣವಾಗುತ್ತಿದೆ. ರೆಸಾರ್ಟ್, ಹೋಂಸ್ಟೇ, ಲೇಔಟ್ ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮನುಷ್ಯ ಮಾಡುತ್ತಿರುವ ತಪ್ಪಿನಿಂದಲೇ ಕಾಡಾನೆಗಳ ದಾಳಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜ್ಞಾನೋದಯ ಶಾಲೆಯ ಸಂಯೋಜಕರು ಹಾಗೂ ಬೆಳೆಗಾರರಾದ ಚೀಯಕಪೂವಂಡ ಮಿಥುನ್ ಚಂಗಪ್ಪ ಮಾತನಾಡಿದರು.
ಪಟ್ಟಣ ಸಹಕಾರ ಬ್ಯಾಂಕ್ನ ನಿವೃತ್ತ ವ್ಯವಸ್ಥಾಪಕರಾದ ಇಟ್ಟಿರ ಸರೋಜಿನಿ ಪೂವಯ್ಯ ಉಪಸ್ಥಿತರಿದ್ದರು.
-
Manglore13 hours agoತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಣ್ಣನೂ ಹೃದಯಾಘಾತಕ್ಕೆ ಬಲಿ
-
Hassan9 hours agoಹಾಸನ : ರಸ್ತೆ ವಿಭಜಕಕ್ಕೆ ಸ್ವಿಫ್ಟ್ ಕಾರು ಡಿಕ್ಕಿ :ಇಬ್ಬರು ಯುವಕರ ಧಾರುಣ ಸಾ*ವು
-
Mandya2 hours agoಮಹಿಳೆಯರಿಗೆ ಬಾಗಿನ ನೀಡುವುದು ಹಿಂದೂ ಸಂಪ್ರದಾಯದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ : ಮಾಜಿ ಸಚಿವ ಶ್ರೀರಾಮುಲು
-
Chamarajanagar12 hours ago*ಪ್ರೀತಿ ನಿರಾಕರಣೆ: ಚಾಕುವಿನಿಂದ ಇರಿದುಕೊಂಡ ಯುವಕ*
-
Hassan4 hours agoಧರ್ಮಸ್ಥಳ ಪ್ರಕರಣ| ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಬಿ.ವೈ.ವಿಜಯೇಂದ್ರ
-
Manglore12 hours agoಬೆಳ್ತಂಗಡಿ: ವಿಜಯೇಂದ್ರ ನೇತೃತ್ವದಲ್ಲಿ ‘ಬಿಜೆಪಿ’ ಧರ್ಮಸ್ಥಳಕ್ಕೆ ಭೇಟಿ
-
Mysore5 hours agoಖಾಸಗಿ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಸೆಸ್ಕ್ ಎಂಡಿ
-
Kodagu8 hours agoಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮವಿತ್ತ ಮಹಿಳೆ : ತಾಯಿ ಮಗು ಸುರಕ್ಷಿತ
